ಲಾಕ್‌ಡೌನ್ ಕಟ್ಟು ನಿಟ್ಟಾಗಿ ಪಾಲಿಸಿ: ಟೋಪೆ
Team Udayavani, Apr 29, 2020, 7:19 PM IST
ಔರಂಗಾಬಾದ್, ಎ. 28: ಮರಾಠವಾಡದ ಇತರ ಜಿಲ್ಲೆಗಳಿಗಿಂತ ಔರಂಗಾಬಾದ್‌ನಲ್ಲಿ ಕೋವಿಡ್ 19 ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಪ್ರಮಾಣವನ್ನು ಕಡಿಮೆ ಮಾಡಲು ಜಿಲ್ಲೆಯಲ್ಲಿ ಲಾಕ್‌ಡೌನ್ ಕಟ್ಟು ನಿಟ್ಟಾಗಿ ಪಾಲನೆ ಮಾಡುವಂತೆ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.
ಔರಂಗಾಬಾದ್ ನಗರದಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಸಮಯದಲ್ಲಿ ಹೆಚ್ಚುತ್ತಿರುವ ರೋಗಿಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ನಗರದಲ್ಲಿನ ಸಾವಿನ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ರೋಗಿಗಳಿಗೆ ಉತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಹೇಳಿದ ಅವರು, ಸೋಂಕು ನಿಯಂತ್ರಣಕ್ಕೆ ತರಲು ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆಗೆ ಸಲಹೆ ನೀಡಿದರು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ 19 ಪ್ರಕರಣಗಳು ಕಡಿಮೆಯಾಗಿದ್ದು ಸಕಾರಾತ್ಮಕ ವಿಷಯ ಎಂದು ಹೇಳಿದ ಅವರು. ಇಲ್ಲಿನ ಮಹಾನಗರ ಪಾಲಿಕೆಯು ಕ್ವಾರಂಟೈನ್ ಹೊಂದಿರುವ ಸ್ಥಳಗಳಲ್ಲಿ ನಾಗರಿಕರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು. ನಗರದಲ್ಲಿ ಕೋವಿಡ್ 19 ಸೋಂಕಿತರು ಸೇರಿದಂತೆ ಇತರ ರೋಗಿಗಳಿಗೂ ಆರೋಗ್ಯ ಸೇವೆಗಳನ್ನು ಒದಗಿಸಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯಕೀಯ ಸೇವೆಗಳನ್ನು ಒದಗಿಸಬೇಕೆಂದು ಹೇಳಿದರು.
ಖಾಸಗಿ ವೈದ್ಯರು ಕೂಡ ಇಂತಹ ಸಂದರ್ಭದಲ್ಲಿ ಸೇವೆಗೆ ಮುಂದಾಗಬೇಕು ಎಂದು ಟೋಪೆ ಹೇಳಿದ್ದಾರೆ. ಇಡೀ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಉದಯ್ ಚೌಧರಿ ಮಾಹಿತಿ ನೀಡಿದರು ಮತ್ತು ನಗರದ ದೊಡ್ಡ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ದಾಖಲಿಸುವ ಬಗ್ಗೆ ಸಿದ್ಧತೆ ಮಾಡಲಾಗಿದೆ. ನಗರದ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ನಾಗರಿಕರನ್ನು ಪರೀಕ್ಷಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮನಪಾ ಆಯುಕ್ತ ಆಸ್ಟಿಕ್ ಕುಮಾರ್ ಪಾಂಡೆ ಹೇಳಿದರು.
ಮರಾಠವಾಡ ವಿಭಾಗಕ್ಕೆ ಮೊಬೈಲ್ ಎಕ್ಸರೆ ಘಟಕವನ್ನು ಒದಗಿಸುವಂತೆ ಸುನಿಲ್ ಕೇಂದ್ರೇಕರ್ ಬೇಡಿಕೆ ಇರಿಸಿದ್ದಾರೆ. ಕೋವಿಡ್ 19 ಟೆಸ್ಟ್ ಸೆಂಟರ್ ನಲ್ಲಿ ನಡೆಯುತ್ತಿರುವ ಕೆಲಸದ ಬಗ್ಗೆ ಘಾಟಿಯ ಅಧೀಕ್ಷಕ ಕಾನನ್‌ಯೆಲಿಕಾರ್ ಮಾಹಿತಿ ನೀಡಿದರು. ಮನಪಾದ ಆರೋಗ್ಯ ಅಧಿಕಾರಿಗಳಿಗೆ ನಟಿ ರಾಜಶ್ರೀ ದೇಶಪಾಂಡೆ ಹಾಗು ನಟ ಶಾರುಖ್ ಖಾನ್ ಮೂಲಕ ಎರಡೂವರೆ ಸಾವಿರ ಪಿಪಿಇ ಕಿಟ್ ದೊರೆತಿದೆ ಎಂದು ಅಧಿಕಾರಿ ಡಾ| ನೀತಾ ಪಡಲ್ಕರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.