ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಥಮ, ನವಿಮುಂಬಯಿ ಪ್ರಾದೇಶಿಕ ಸಮಿತಿ ದ್ವಿತೀಯ
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು: ಸಾಂಸ್ಕೃತಿಕ ನೃತ್ಯ ಸ್ಪರ್ಧೆ
Team Udayavani, Sep 9, 2021, 2:48 PM IST
ಕುರ್ಲಾ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ವತಿಯಿಂದ ಬಹಿರಂಗ ಅಧಿವೇಶನವು ಸೆ. 5ರಂದು ಅಪರಾಹ್ನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸ್ಪರ್ಧೆಯಲ್ಲಿ ಬಂಟರ ಸಂಘದ ಒಂಬತ್ತು ಪ್ರಾದೇಶಿಕ ಸಮಿತಿಗಳಾದ ನವಿಮುಂಬ ಯಿ, ಜೋಗೇಶ್ವರಿ-ದಹಿಸರ್, ಅಂಧೇರಿ -ಬಾಂದ್ರಾ, ಮೀರಾ-ಭಾಯಂದರ್, ವಸಾಯಿ-ಡಹಾಣೂ, ಡೊಂಬಿವಲಿ, ಭಿವಂಡಿ-ಬದ್ಲಾಪುರ, ಸಿಟಿ ಪ್ರಾದೇಶಿಕ ಸಮಿತಿ, ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಗಳಲ್ಲದೆ, ಥಾಣೆ ಬಂಟ್ಸ್, ಮುಲುಂಡ್ ಬಂಟ್ಸ್, ಮೀರಾ-ಡಹಾಣೂ ಬಂಟ್ಸ್, ಬಂಟ್ಸ್ ಫೋರಂ ಮೀರಾ-ಭಾಯಂದರ್ ಹೀಗೆ ಒಟ್ಟು 12 ತಂಡಗಳು ಭಾಗವಹಿಸಿದ್ದವು.
ಸ್ಪರ್ಧೆಯಲ್ಲಿ ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿ ಪ್ರಥಮ, ನವಿಮುಂಬಯಿ ಪ್ರಾದೇಶಿಕ ಸಮಿತಿ ದ್ವಿತೀಯ, ಡೊಂಬಿವಲಿ ಪ್ರಾದೇಶಿಕ ಸಮಿತಿ ಮತ್ತು ಸಿಟಿ ಪ್ರಾದೇಶಿಕ ಸಮಿತಿಗಳು ತೃತೀಯ ಪ್ರಶಸ್ತಿಗೆ ಭಾಜನವಾದವು. ಭಾಗವಹಿಸಿದ ಇತರ ತಂಡಗಳಿಗೆ ಸಮಾಧಾನಕರ ಬಹುಮಾನ ನೀಡಿ ಗೌರವಿಸಲಾಯಿತು. ವಿಜೇತ ತಂಡಗಳಿಗೆ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಮುಖ್ಯ ಅತಿಥಿ ಆರ್ಗಾನಿಕ್ ಕೆಮಿಕಲ್ಸ್‌ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ತೋನ್ಸೆ ಆನಂದ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್‌ದಾಸ್ ಶೆಟ್ಟಿ, ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜತೆ ಕಾರ್ಯದರ್ಶಿ ಸತೀಶ್ ಅಡಪ್ಪ ಹಾಗೂ ಇತರ ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು.
ಇದನ್ನೂ ಓದಿ:ನೇರ ರೈಲು ಮಾರ್ಗಕ್ಕೆ ಶೀಘ್ರ ಭೂಮಿಪೂಜೆ
ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರವೀಣಾ ಪಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಮಂಜುನಾಥ್ ಎಂ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ನಾಗಕಿರಣ್ ಶೆಟ್ಟಿ, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ನಿಶ್ಮಿತಾ ಎಸ್. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಗುಣವತಿ ವೈ. ಶೆಟ್ಟಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಂಜುಳಾ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಚಿನ್ ಕೆ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಕೆ. ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶಿವರಾಮ್ ಎನ್. ಶೆಟ್ಟಿ ಕಾರ್ಯಾನಗುತ್ತು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ನಿಲೇಶ್ ಶೆಟ್ಟಿ ಇನ್ನ ಉಪಸ್ಥಿತರಿದ್ದರು.
ಚಿತ್ರ-ವರದಿ:
ಪ್ರೇಮ್‌ನಾಥ್ ಮುಂಡ್ಕೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.