ನೊಂದವರಿಗೆ ನೆರಳಾಗುತ್ತಿರುವ ಒಕ್ಕೂಟದ ಕಾರ್ಯ ಸ್ತುತ್ಯರ್ಹ

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಸಮಾಜ ಕಲ್ಯಾಣದ ನೆರವು ವಿತರಣೆ, ಸಮ್ಮಾನ

Team Udayavani, Sep 25, 2021, 2:56 PM IST

ನೊಂದವರಿಗೆ ನೆರಳಾಗುತ್ತಿರುವ ಒಕ್ಕೂಟದ ಕಾರ್ಯ ಸ್ತುತ್ಯರ್ಹ

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸಮಾಜದಲ್ಲಿ ನೊಂದವರ, ಕಷ್ಟದಲ್ಲಿರುವವರ ನೆರಳಾಗಿದೆ. ಸಂಪತ್ತು ಗಳಿಸಲು ನೂರಾರು ದಾರಿಗಳಿವೆ. ಆದರೆ ಗಳಿಸಿದ ಸಂಪತ್ತಿನಲ್ಲಿ ಬಡವರಿಗೆ ದಾನ ಮಾಡುವ ಮನಸ್ಸು ಇರುವವರು ಸಿಗುವುದು ತುಂಬಾ ಕಷ್ಟ. ಆದರೆ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ದಾನಿಗಳ ಮೂಲಕ ದಾನ ಸಂಗ್ರಹಿಸಿ ನೊಂದವರಿಗೆ, ಕಷ್ಟದಲ್ಲಿರುವವರಿಗೆ ನೀಡುವ ಮೂಲಕ ಸಮಾಜದ ಜನರಿಗೆ ನೆರಳಾಗಿದ್ದಾರೆ ಎಂದು ಚಲನಚಿತ್ರ ರಂಗದ ಖ್ಯಾತ ನಿರ್ದೇಶಕ ಎಸ್‌. ವಿ. ರಾಜೇಂದ್ರ ಸಿಂಗ್‌ ಬಾಬು ತಿಳಿಸಿದರು.

ಸೆ. 23ರಂದು ಬಂಟ್ಸ್‌ ಹಾಸ್ಟೇಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ನೆರವು ವಿತರಣೆ ಮತ್ತು ಸಾಧಕರಿಗೆ ಸಮ್ಮಾನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಇಂದು ದಾನ, ಧರ್ಮ ಮರೆಯಾಗಿದ್ದು, ಭಯೋತ್ಪಾದನೆ, ಮೋಸ, ದರೋಡೆ ಸಕ್ರಿಯವಾಗಿವೆ. ಭಗವದ್ಗೀತೆಯಲ್ಲಿ ದಾನ, ಧರ್ಮದ ಮಹತ್ವದ ಬಗ್ಗೆ ಉಲ್ಲೇಖವಿದೆ. ಆದರೆ ಅದನ್ನು ಅನುಸರಿಸುವುದು ಕಡಿಮೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸಮಾಜದಿಂದ ಸಂಗ್ರಹಿಸಿ ಸಮಾಜಕ್ಕೆ ನೀಡುವುದು ದೊಡ್ಡ ದಾನ ಹಾಗೂ ಇದೊಂದು ಸಮಾಜ ಸೇವಾ ಕಾರ್ಯ. ಇಂತಹ ಕಾರ್ಯಗಳು ಒಕ್ಕೂಟದಿಂದ ನಿರಂತರ ನಡೆಯಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಒಕ್ಕೂಟದ ನಿರ್ದೇಶಕ ಪ್ರವೀಣ್‌ ಭೋಜ ಶೆಟ್ಟಿ ಮಾತನಾಡಿ, ಒಂದು ಕಾರ್ಪೊರೇಟ್‌ ಸಂಸ್ಥೆ ಮಾಡುವ ಕೆಲಸವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಾಡುತ್ತಿದೆ. ಸಮಾಜ ಸೇವೆ ಹೇಗೆ ಮಾಡಬೇಕೆಂಬುದನ್ನು ಐಕಳ ಹರೀಶ್‌ ಶೆಟ್ಟಿ ಅವರಿಂದ ತಿಳಿಯಬಹುದು. ಸಮಾಜದಿಂದ ಪಡೆದು ಸಮಾಜಕ್ಕೆ ನೀಡುವ ಮೂಲಕ ಒಕ್ಕೂಟದ ಸೇವಾ ಕಾರ್ಯದಲ್ಲಿ ನಾನೂ ಕೈ ಜೋಡಿಸುತ್ತೇನೆ ಎಂದು ತಿಳಿಸಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ನಿರ್ದೇಶಕ, ರಂಗಕರ್ಮಿ ವಿಜಯ ಕುಮಾರ್‌ ಕೊಡಿಯಾಲ್‌ಬೈಲ್‌, ಲಯನ್ಸ್‌ ಗವರ್ನರ್‌ ವಸಂತ ಶೆಟ್ಟಿ, ಒಕ್ಕೂಟದ ಪೋಷಕರು ಹಾಗೂ ಮುಂಬಯಿ ಮಾತೃಭೂಮಿ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್‌ ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ್‌ ಅಡಪ ಸಂಕಬೈಲ್‌, ವಿವಿಧ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್‌ ಉಪಸ್ಥಿತರಿದ್ದರು.

ಇದನ್ನೂ ಓದಿ:ಸ್ನೇಹಕ್ಕೆ ಸೈ:ಅಗಲಿದ ಗೆಳೆಯನ ಕುಟುಂಬಕ್ಕೆ ಲಕ್ಷಾಂತರ ರೂ.ನೆರವು ನೀಡಿದ ದೋಸ್ತರು

ಸಮಾರಂಭದಲ್ಲಿ ಪತ್ರಕರ್ತರಾದ ಮಾಲತಿ ಶೆಟ್ಟಿ ಮಾಣೂರು ಮತ್ತು ನಿಶಾಂತ್‌ ಶೆಟ್ಟಿ ಕಿಲೆಂಜೂರು ಅವರನ್ನು ಸಮ್ಮಾನಿಸಲಾಯಿತು. ಎಸ್‌. ವಿ. ರಾಜೇಂದ್ರ ಸಿಂಗ್‌ ಬಾಬು, ವಿಜಯ ಕುಮಾರ್‌ ಕೊಡಿಯಾಲ್‌ಬೈಲ್‌, ರತ್ನಾಕರ ಶೆಟ್ಟಿ ಮುಂಡ್ಕೂರು, ಲ| ವಸಂತ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವಿಸಿ ದರು. ಜತೆ ಕಾರ್ಯದರ್ಶಿ ಸತೀಶ್‌ ಅಡಪ ಸಂಕಬೈಲ್‌ ಫಲಾನುಭವಿಗಳ ಹೆಸರು ವಾಚಿಸಿದರು. ಕೊಲ್ಲಾಡಿ ಬಾಲಕೃಷ್ಣ ರೈ, ಸಾಯಿನಾಥ್‌ ಶೆಟ್ಟಿ ಮುಂಡ್ಕೂರು ಸಮ್ಮಾನಪತ್ರ ವಾಚಿಸಿ ದರು. ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನ್‌ದಾಸ್‌ ಶೆಟ್ಟಿ ವಂದಿಸಿದರು. ಸಿಂಧ್ಯಾ ಶೆಟ್ಟಿ ಪ್ರಾರ್ಥನೆಗೈದರು. ಶರತ್‌ ಶೆಟ್ಟಿ ಕಿನ್ನಿಗೋಳಿ ಕಾರ್ಯಕ್ರಮ ನಿರ್ವಹಿಸಿದರು.

12 ಲಕ್ಷ ರೂ. ವಿತರಣೆ
ಸಮಾರಂಭದಲ್ಲಿ ವೈದ್ಯಕೀಯ ನೆರವಿಗಾಗಿ ಬಂದ ಅರ್ಜಿಗಳಲ್ಲಿ 10 ಮಂದಿ ಫಲಾನುಭವಿಗಳಿಗೆ, ಶಿಕ್ಷಣಕ್ಕೆ ಸಹಾಯದಲ್ಲಿ 6 ಮಂದಿ ಫಲಾನುಭವಿಗಳಿಗೆ, ಮದುವೆ ಸಹಾಯಾರ್ಥವಾಗಿ ಮೂರು ಮಂದಿ ಫಲಾನುಭವಿಗಳಿಗೆ ಮತ್ತು ಮನೆ ನಿರ್ಮಾಣ ಹಾಗೂ ಮನೆ ರಿಪೇರಿಗೆ 18 ಮಂದಿ ಫಲಾನುಭವಿಗಳಿಗೆ ಸುಮಾರು 12 ಲಕ್ಷ ರೂ. ಗಳನ್ನು ವಿತರಿಸಲಾಯಿತು.

ಸೇವಾ ಕಾರ್ಯ ನಿರಂತರ
ಉಳ್ಳವರಿಗೆ ಎಲ್ಲರೂ ಇದ್ದಾರೆ. ಆದರೆ ಏನೂ ಆಸರೆಯಿಲ್ಲದವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದೆ. ಲಾಕ್‌ಡೌನ್‌ ಸಂದರ್ಭದಲ್ಲೂ ಸಹಾಯ ಕೇಳಿ ಅರ್ಜಿ ಹಾಕಿದವರನ್ನು ಹಿಂದೆ ಕಳುಹಿಸಲಿಲ್ಲ. ಒಕ್ಕೂಟದ ಸೇವಾ ಕಾರ್ಯ ನಿರಂತರ ನಡೆಯಲಿದೆ. ಮದುವೆ, ಶಿಕ್ಷಣ, ಆರೋಗ್ಯ ಹೀಗೆ ಬೇರೆ ಬೇರೆ ಸಮಸ್ಯೆಗಳಿಗೆ ಸಂಬಂಧಿಸಿ ಒಕ್ಕೂಟಕ್ಕೆ ಬಂದ ಅರ್ಜಿಗಳೆಲ್ಲವನ್ನೂ ಪರಿಶೀಲಿಸಿ ಪ್ರಸಾದ ರೂಪದಲ್ಲಿ ಸಹಾಯ ಮಾಡಿದ್ದೇವೆ. ಇಂತಹ ಕಾರ್ಯಕ್ಕೆ ಸಮಾಜದಲ್ಲಿರುವ ದಾನಿಗಳು, ಉದ್ಯಮಿಗಳು ಕೈ ಜೋಡಿಸಿದರೆ ಕೆಳಸ್ತರದಲ್ಲಿರುವ ಸಮಾಜದವರಿಗೆ ಸಹಾಯ ಮಾಡಲು ಅನುಕೂಲವಾಗುತ್ತದೆ.
-ಐಕಳ ಹರೀಶ್‌ ಶೆಟ್ಟಿ , ಅಧ್ಯಕ್ಷರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ

ಟಾಪ್ ನ್ಯೂಸ್

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.