ಪ್ರಥಮ ವಾರ್ಷಿಕ ಗಣೇಶೋತ್ಸವ ಸಮಾಪ್ತಿ
Team Udayavani, Sep 8, 2019, 12:45 PM IST
ಪುಣೆ, ಸೆ. 7: ಪುಣೆ ಬಂಟರ ಸಂಘದ ವತಿಯಿಂದ ಸೆ. 2ರಂದು ಪ್ರಥಮ ವರ್ಷದ ಗಣೇಶೋತ್ಸವಕ್ಕೆ ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ಚಾಲನೆ ನೀಡಲಾಯಿತು.
ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಇವರ ನೇತೃತ್ವದಲ್ಲಿ ಬೆಳಗ್ಗೆ ಬಂಟರ ಭವನದ ಆರತಿ ಶಶಿಕಿರಣ್ ಶೆಟ್ಟಿ ಚಾವಡಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಸೆ. 4ರಂದು ಹರೀಶ್ ಭಟ್ ಪೌರೋಹಿತ್ಯದಲ್ಲಿ ಸತ್ಯನಾ ರಾಯಣ ಮಹಾಪೂಜೆ ನಡೆಯಿತು. ಪ್ರವೀಣ್ ಶೆಟ್ಟಿ ಪುತ್ತೂರು ದಂಪತಿಗಳು ಪೂಜಾ ವಿಧಿಗಳಲ್ಲಿ ಭಾಗವಹಿಸಿ ಆರತಿ ಬೆಳಗಿ ಪ್ರಾರ್ಥಿಸಿದರು.
ವಿದ್ವಾನ್ ಕೈರಬೆಟ್ಟು ವಿಶ್ವನಾಥ ಭಟ್ ಮುಂಬಯಿ ಇವರಿಂದ ಭಕ್ತ ಗೋರ ಕುಂಬಾರ ಹರಿಕಥಾ ಕಾಲಕ್ಷೇಪ ನಡೆಯಿತು. ವಿದ್ವಾನ್ ಕೈರಬೆಟ್ಟು ವಿಶ್ವನಾಥ ಭಟ್ ಹಾಗೂ ಬಳಗದವರನ್ನು ಪುಷ್ಪಗುಚ್ಛ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘದ ಸದಸ್ಯರಿಂದ ಭಜನ ಕಾರ್ಯಕ್ರಮ ನಡೆಯಿತು. ಗಣಪತಿ ದೇವರಿಗೆ ಮಹಾಮಂಗಳಾರತಿ ನಡೆದು ತೀರ್ಥಪ್ರಸಾದ ವಿತರಣೆಯಾಯಿತು. ನಂತರ ಗಣಪತಿ ದೇವರನ್ನು ಬ್ಯಾಂಡ್ ವಾದ್ಯಗಳೊಂದಿಗೆ ಶೋಭಾಯಾತ್ರೆಯ ಮೂಲಕ ಭವನದ ಆವರಣದಲ್ಲಿ ವಿಸರ್ಜಿಸಲಾಯಿತು.
ಬಂಟ್ಸ್ ಅಸೋಸಿಯೇಶನ್ ಪುಣೆ ಅಧ್ಯಕ್ಷ ಆನಂದ್ ಶೆಟ್ಟಿ ಮಿಯ್ನಾರ್, ಪುಣೆ ಬಂಟರ ಸಂಘದ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಗೌರವ ಕೋಶಾಧಿಕಾರಿ ವೈ. ಚಂದ್ರಹಾಸ ಶೆಟ್ಟಿ, ಪದಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಪುತ್ತೂರು, ತಾರಾನಾಥ ರೈ ಮೇಗಿನಗುತ್ತು, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಪೂಂಜಾ ಮತ್ತು ಪದಾಧಿಕಾರಿಗಳು, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ ಮತ್ತು ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್. ಶೆಟ್ಟಿ ಮತ್ತು ಸದಸ್ಯರು, ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್‌ರಾಜ್ ಶೆಟ್ಟಿ ಮತ್ತು ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ಅನ್ನಸಂತರ್ಪಣೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.