ಫುಟ್ಬಾಲ್ :ಮಹಾರಾಷ್ಟ್ರ ವುಮೆನ್ಸ್ ತಂಡದ ವಿಶೇಷ ಸಾಧನೆ
Team Udayavani, Jun 7, 2017, 4:12 PM IST
ಮುಂಬಯಿ: ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್ ವತಿಯಿಂದ ಪಂಜಾಬ್‌ನ ಜಾಲಂಧರ್‌ನಲ್ಲಿ ನಡೆದ 22 ನೇ ಸೀನಿಯರ್ ವುಮೆನ್ಸ್ ನ್ಯಾಶನಲ್ ಫುಟ್ಬಾಲ್ ಚಾಂಪಿಯನ್‌ಶಿಪ್ -2017 ರಲ್ಲಿ ತುಳು-ಕನ್ನಡಿಗ ಸುಮನ್ ಸಾಲ್ಯಾನ್ ಅವರ ಸಾರಥ್ಯದ ಮಹಾರಾಷ್ಟ್ರ ವುಮೆನ್ಸ್ ಫುಟ್ಬಾಲ್ ತಂಡವು 6 ಅಂಕಗಳೊಂದಿಗೆ ವಿಶೇಷ ಸಾಧನೆಗೈದಿದೆ.
ದೇಶದ ವಿವಿಧ ರಾಜ್ಯಗಳ ಸುಮಾರು 27 ವುಮೆನ್ಸ್ ಫುಟ್ಬಾಲ್ ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು. ಒಟ್ಟು ಎಂಟು ವಿಭಾಗಗಳಲ್ಲಿ ನಡೆದ ಪಂದ್ಯಾಟದಲ್ಲಿ ಕ್ವಾರ್ಟರ್ ಫೈನಲ್‌ಗೆ ತೇರ್ಗಡೆಯಾಗಬೇಕಾದರೆ ಎಲ್ಲ ಪಂದ್ಯಗಳನ್ನು ಗೆಲ್ಲಬೇಕಾಗಿತ್ತು. ಸುಮನ್ ಸಾಲ್ಯಾನ್ ನಾಯಕತ್ವದ ಮಹಾರಾಷ್ಟ್ರ ತಂಡವು ಅಸ್ಸಾಂ ವಿರುದ್ಧ 3-1 ಹಾಗೂ ರಾಜಸ್ಥಾನ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ 6 ಅಂಕ ಪಡೆದಿದೆ.
ಈ ವಿಭಾಗದಲ್ಲಿ ಜಾರ್ಖಂಡ್ ತಂಡವು 9 ಅಂಕಗಳೊಂದಿಗೆ ಕ್ವಾರ್ಟರ್ ಫೈನಲ್ ಹಂತಕ್ಕೆ ತೇರ್ಗಡೆಹೊಂದಿತು. ಮಹಾರಾಷ್ಟ್ರ ತಂಡವು ಅಸ್ಸಾಂ ಮತ್ತು ರಾಜಸ್ತಾನ ವಿರುದ್ಧ ಗೆದ್ದರೆ ಜಾರ್ಖಂಡ್ ವಿರುದ್ಧ 2-3 ರ ಅಂತರಲ್ಲಿ ಸೋತು ಟೂರ್ನಿಯಿಂದ ಹೊರಗುಳಿಯಬೇಕಾಯಿತು.
ಮಹಾರಾಷ್ಟ್ರ ತಂಡದಲ್ಲಿ ಕನ್ನಡಿಗ ಮಹಿಳೆಯರಾದ ಸುಮನ್ ಸಾಲ್ಯಾನ್ ಮತ್ತು ಅದಿತಿ ಶೆಟ್ಟಿ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ. ತಂಡವನ್ನು ಹಾಗೂ ಆಟಗಾರರ ಸಾಧನೆಯನ್ನು ಗಣ್ಯರು ಪ್ರಶಂಸಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.