ಬಿಲ್ಲವರ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ಉಚಿತ ವೈದ್ಯಕೀಯ ಶಿಬಿರ

Team Udayavani, Apr 2, 2019, 3:39 PM IST

0104mum02

ಮುಂಬಯಿ: ವೃತ್ತಿ, ಜೀವನ ಸಾಧನೆ, ಗಳಿಕೆಯ ಧಾವಂತದಲ್ಲಿರುವ ಮಾನವನ ಒತ್ತಡದ ಜೀವನದಲ್ಲಿ ಆರೋಗ್ಯದ ಕಾಳಜಿಗೆ ಮಹತ್ವ ನೀಡದಿರುವುದೇ ಅನಾರೋಗ್ಯದ ಬೆಳವಣಿಗೆಗೆ ಪ್ರಧಾನ ಕಾರಣವಾಗಿದೆ. ಆರೋಗ್ಯದ ಬಗ್ಗೆ ಕಾಳಜಿ, ನಿರ್ಲಕ್ಷ್ಯಭಾವನೆಯೇ ಅಸ್ವಸ್ಥತೆಗೆ ಮೂಲ ಎನ್ನುವುದು ಸೂಕ್ತ. ಕ್ಯಾನ್ಸರ್‌ನಂತಹ ಕಾಯಿಲೆಗಳನ್ನು ಆರಂಭದಿಂದಲೇ ಗುರುತಿಸಿಕೊಂಡು ಶಮನಗೊಳಿಸಲು ಸಾಧ್ಯವಿದೆ. ಆದರೆ ನಾವು ಸಣ್ಣಪುಟ್ಟ ನೆಪವೊಡ್ಡಿ ಕಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ಮಾಡಿ, ಅದು ಗುಣಮುಖ ಹೊಂದದ ಹಂತಕ್ಕೆ ಬಂದಾಗ ಎಚ್ಚರವಾಗದಿರುವುದು ವಿಷಾದನೀಯ. ಆದ್ದರಿಂದ ಮೊದಲ ಹಂತದಲ್ಲೇ ಕಾಲಕಾಲಕ್ಕೆ ಆರೋಗ್ಯ ತಪಾಸಣೆಗೈದು ಆರೋಗ್ಯ ಭಾಷ್ಯವನ್ನು ಕಾಪಾಡಿಕೊಳ್ಳಬೇಕು. ಆರೋಗ್ಯದ ಬಗ್ಗೆ ಸದಾ ಕಾಳಜಿ ವಹಿಸಿ ತಮ್ಮ ಜತೆಗೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಂತೆ ಟಾಟಾ ಮೆಮೋರಿಯಲ್‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಶ್ಯಾಮಿಲಿ ಎಸ್‌. ಪೂಜಾರಿ ಅವರು ನುಡಿದರು.

ಮಾ. 31ರಂದು ಬೆಳಗ್ಗೆ ಬಿಲ್ಲವರ ಅಸೋಸಿಯೇಶನ್‌ ಮಹಿಳಾ ವಿಭಾಗವು ಟಾಟಾ ಮೆಮೋರಿಯಲ್‌ ಆಸ್ಪತ್ರೆಯ ಸಹಯೋಗದೊಂದಿಗೆ ಸಾಂತಾಕ್ರೂಜ್‌ ಪೂರ್ವದ ಬಿಲ್ಲವರ ಭವನದಲ್ಲಿ ಆಯೋಜಿಸಿದ್ದ ಉಚಿತ ವೈದ್ಯಕೀಯ ಶಿಬಿರ ಮತ್ತು ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಅವರು, ಮಹಿಳೆಯರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳೊಂದಿಗೆ ಆರೋಗ್ಯದೆಡೆಗೆ ಹೆಚ್ಚಿನ ಮಹತ್ವವನ್ನು ನೀಡಿದಾಗ ಕುಟುಂಬವು ಸುರಕ್ಷಿತವಾಗಿರುತ್ತದೆ ಎಂದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ಮಾರ್ಗದರ್ಶನ ಹಾಗೂ ಮಹಿಳಾ ವಿಭಾಗಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌ ಸಾರಥ್ಯದಲ್ಲಿ ನಡೆಸಲ್ಪಟ್ಟ ಶಿಬಿರವನ್ನು ಬಿಲ್ಲವರ ಅಸೋಸಿಯೇಶನ್‌ನ ಉಪಾಧ್ಯಕ್ಷ ಹರೀಶ್‌ ಜಿ. ಅಮೀನ್‌ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಟಾಟಾ ಆಸ್ಪತ್ರೆಯ ಡಾ| ಶ್ಯಾಮಿಲಿ ಎಸ್‌. ಪೂಜಾರಿ, ಡಾ| ಅದಿತಿ ಆಗರ್‌ವಾಲ್‌, ಡಾ| ಮಂಗಳಾ ಪಾಟೀಲ್‌ ಸೇರಿದಂತೆ ಇತರ ನುರಿತ ವೈದ್ಯರು ಭಾಗವಹಿಸಿ ಧರ್ಮಾರ್ಥವಾಗಿ ವೈದ್ಯಕೀಯ ಶಿಬಿರ ನಡೆಸಿಕೊಟ್ಟರು. ಶಿಬಿರದಲ್ಲಿ ಕ್ಯಾನ್ಸರ್‌ ತಡೆಗಟ್ಟುವಿಕೆ ಬಗ್ಗೆ ವೈದ್ಯರು ವಿಶೇಷ ತಪಾಸಣೆ ನಡೆಸಿ ಬಿಲ್ಲವರ ಅಸೋಸಿಯೇಶನ್‌ನಂತಹ ಸೇವಾ ಸಂಸ್ಥೆಗಳಿಂದ ಇಂತಹ ಶಿಬಿರಗಳ ಆವಶ್ಯಕತೆಯಿದೆ. ಕ್ಯಾನ್ಸರ್‌ ಅಂದಾಕ್ಷಣ ಭಯ ಪಡುವ ಅಗತ್ಯವಿಲ್ಲ. ಬದಲಾಗಿ ಇಂತಹ ಲಕ್ಷಣಗಳೇನೂ ಕಾಡಿದರೂ ತತ್‌ಕ್ಷಣವೇ ಜಾಗೃತರಾಗಿ ಪ್ರಥಮ ಚಿಕಿತ್ಸೆಗೆ ಒಳಗಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಿರಿ ಎಂದರು.

ಕಾರ್ಯಕ್ರಮದಲ್ಲಿ ಭಾರತ್‌ ಬ್ಯಾಂಕಿನ ನಿರ್ದೇಶಕ ಪುರುಷೋತ್ತಮ ಎಸ್‌. ಕೋಟ್ಯಾನ್‌, ಸಮಾಜ ಸೇವಕರಾದ ಗೋಪಾಲ್‌ ಪಾಲನ್‌ ಮಲಾಡ್‌, ಶಂಕರ್‌ ಕೆ. ಸುವರ್ಣ ಖಾರ್‌, ಶಿವರಾಮ ಪೂಜಾರಿ, ಮಾಧವ ಐಲ್‌, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆಯರಾದ ಪ್ರಭಾ ಕೆ. ಬಂಗೇರ ಮತ್ತು ಗಿರಿಜಾ ಚಂದ್ರಶೇಖರ್‌, ಅಸೋಸಿಯೇಶನ್‌ನ ಮಾಜಿ ಕೋಶಾಧಿಕಾರಿ ಮಹೇಶ್‌ ಕಾರ್ಕಳ, ಜತೆ ಕಾರ್ಯದರ್ಶಿಗಳಾದ ಜಯಂತಿ ಎಸ್‌. ಕೋಟ್ಯಾನ್‌ ಮತ್ತು ಕುಸುಮಾ ಅಮೀನ್‌, ಯಶೋದಾ ಎನ್‌. ಟಿ. ಪೂಜಾರಿ, ಪೂಜಾ ಪುರುಷೋತ್ತಮ್‌ ಕೋಟ್ಯಾನ್‌ ಸೇರಿದಂತೆ ಅಸೋಸಿಯೇಶನ್‌ನ ವಿವಿಧ ಸ್ಥಳೀಯ ಸಮಿತಿಗಳ, ಸ್ಥಳೀಯ ಕಚೇರಿಗಳ ಪದಾಧಿಕಾರಿಗಳು, ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌ ಸ್ವಾಗತಿಸಿ ಅತಿಥಿಗಳನ್ನು ಹಾಗೂ ವೈದ್ಯಾಧಿಕಾರಿಗಳನ್ನು ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಎಸ್‌. ಕೋಟ್ಯಾನ್‌ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಗೌರವ ಕಾರ್ಯದರ್ಶಿ ಸುಮಿತ್ರಾ ಎಸ್‌. ಬಂಗೇರ ವಂದಿಸಿದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

ಚಿತ್ರ – ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.