ಗಣೇಶ ಅಭಿಮಾನಿ ಸಂಘ: ಶ್ರೀ ಸತ್ಯನಾರಾಯಣ ಮಹಾಪೂಜೆ
Team Udayavani, Jun 13, 2019, 5:06 PM IST
ಮುಂಬಯಿ: ಗಣೇಶ ಅಭಿಮಾನಿ ಸಂಘ ಮುಂಬಯಿ ಇದರ ಐದನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಸಯಾನ್‌ನ ಜಿಎಸ್‌ಬಿ ಸೇವಾ ಮಂಡಲದ ಶ್ರೀ ಗುರುಗಣೇಶ ಪ್ರಸಾದ್ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಈ ಸಂಘದ ಸದಸ್ಯರು ಮುಂಬಯಿ ಖ್ಯಾತ ಜಿಎಸ್‌ಬಿ ಸೇವಾ ಮಂಡಲದ ವಾರ್ಷಿಕ ಗಣೇಶೋತ್ಸವ ಸಮಾರಂಭದಲ್ಲಿ ಸ್ವಯಂ ಸೇವಕರಾಗಿ ಕಳೆದ ಮೂವತ್ತಕ್ಕೂ ಅಧಿಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗಿನ ಕೆಲವು ವರ್ಷಗಳಿಂದ ಸಂಘದ ಕಾರ್ಯವ್ಯಾಪ್ತಿ ವಿಸ್ತೃತಗೊಳಿಸಿ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ, ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಇನ್ನಿತರ ಸಮಾಜಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ.
ಇದೇ ಸಂದರ್ಭದಲ್ಲಿ ಸಮಾಜದ ಆರ್ಥಿಕವಾಗಿ ಹಿಂದುಳಿದ 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲಾಯಿತು. ಮೂಲ್ಕಿ ಪ್ರಶಾಂತ್ ಅವರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಇನ್ನಿತರ ಪೂಜಾ ಕೈಂಕರ್ಯಗಳು ನಡೆದವು.
ವಿವಿಧ ಪೂಜಾ ಕೈಂಕರ್ಯಗಳ ಯಜಮಾನತ್ವವನ್ನು ಗುರುದತ್ ದಂಪತಿ ವಹಿಸಿದ್ದರು. ಮುನ್ನೂರೈವತ್ತಕ್ಕೂ ಅಧಿಕ ಸಮಾಜ ಬಾಂಧವರು ತೀರ್ಥ ಪ್ರಸಾದ ಸ್ವೀಕರಿಸಿ ಸಮಾರಾಧನೆಯಲ್ಲಿ ಪಾಲ್ಗೊಂಡರು. ಸಮಾರಂಭದಲ್ಲಿ ಗಣೇಶ ಅಭಿಮಾನಿ ಸಂಘ ಮುಂಬಯಿ ಇದರ ನೂತನ ಅಧ್ಯಕ್ಷರಾಗಿ ಸಂತೋಷ್ ಏಕನಾಥ್ ನಾಯಕ್, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ವಾಮನ ನಾಯಕ್, ಗೌರವ ಕೋಶಾಧಿಕಾರಿಯಾಗಿ ನಾಗೇಶ್ ಶೆಣೈ ಅವರನ್ನು ನೇಮಿಸಲಾಯಿತು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.