ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ: ಗಣೇಶೋತ್ಸವ,ಯಕ್ಷಗಾನ
Team Udayavani, Aug 22, 2017, 2:51 PM IST
ಮುಂಬಯಿ: ಅಖೀಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ 87ನೇ ವಾರ್ಷಿಕ ಗಣೇಶೋತ್ಸವವು ಅ. 25ರಂದು ಗ್ರಾಟ್‌ರೋಡ್ ಪಶ್ಚಿಮದ ನಾನಾಚೌಕ್ ಸಮೀಪದಲ್ಲಿರುವ ಗಾಂವ್ದೇವಿಯ ಜೆ. ಕೆ. ಬಿಲ್ಡಿಂಗ್ ಆವರಣದಲ್ಲಿ ಜರಗಲಿದೆ.
ಅಂದು ಬೆಳಗ್ಗೆ ಭವ್ಯ ಮೆರವಣೆಗೆಯಲ್ಲಿ ಶ್ರೀ ವಿಘ್ನೇಶ್ವರನ ಆಗಮನವಾಗಲಿದ್ದು, ತದ ನಂತರ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಸಂಜೆ 7 ರಿಂದ ಗ್ರಾಮದೇವಿಯ ಸನ್ನಿಧಾನದಲ್ಲಿ ಪೂಜೆ ನಡೆಯಲಿದ್ದು, ಬಳಿಕ ಸರ್ವಾಲಂಕೃತನಾದ ವಿಘ್ನೇಶ್ವರನಿಗೆ 23 ಆರತಿಗಳೊಂದಿಗೆ ಅಲಂಕಾರ ಪೂಜೆ ನೆರವೇರಲಿದೆ. ಯಕ್ಷ ಪ್ರಿಯ ಬಳಗ ಮತ್ತು ಯಕ್ಷ ಕಲಾ ತರಂಗದವರ ಹಿಮ್ಮೇಳದೊಂದಿಗೆ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾದ ಮಹಾದೇವ ಪೂಜಾರಿ ಅವರ ನೇತೃತ್ವದಲ್ಲಿ ವೇದಮೂರ್ತಿ ಎಂ. ಜೆ. ಪ್ರವೀಣ್ ಭಟ್ ಪೂಜಾ ಕೈಂಕರ್ಯಗಳನ್ನು ನಿರ್ವಹಿಸಲಿದ್ದು, ಆ ಬಳಿಕ ನೆರೆದ ಭಕ್ತಾದಿಗಳಿಗೆ ತೀರ್ಥ-ಪ್ರಸಾದ ವಿತರಿಸಲಾಗುವುದು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಂದು ರಾತ್ರಿ 10.30ಕ್ಕೆ ಸರಿಯಾಗಿ ಯಕ್ಷ ಪ್ರಿಯ ಬಳಗ ಮತ್ತು ಯಕ್ಷ ಕಲಾತರಂಗ ಹಾಗೂ ಊರಿನ ಸುಪ್ರಸಿದ್ಧ ಅತಿಥಿ ಕಲಾವಿದರ ಕೂಡುವಿಕೆಯಿಂದ ಸುದರ್ಶನ ವಿಜಯ ಮತ್ತು ಸುಧನ್ವ ಮೋಕ್ಷ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಆ ಪ್ರಯುಕ್ತ ಭಕ್ತಾದಿಗಳು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ-ಪ್ರಸಾದ ಸ್ವೀಕರಿಸಿ ಶ್ರಿ ವಿN°àಶ್ವರನ ಕೃಪೆಗೆ ಪಾತ್ರರಾಗುವಂತೆ ಅಖೀಲ ಗಾಂವೆªàವಿ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾದ ಮಹಾದೇವ ಪೂಜಾರಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.