ಜೂ.3:”ಜಾರ್ಜ್‌ ಫೆರ್ನಾಂಡಿಸ್‌ ಸಂಸ್ಮರಣ ರಾಷ್ಟ್ರೀಯ ಪುರಸ್ಕಾರ-2019′ ಪ್ರದಾನ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಬಂಟರ ಭವನದಲ್ಲಿ

Team Udayavani, May 30, 2019, 4:28 PM IST

2-hg

ಮುಂಬಯಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಏಕೈಕ ಸರಕಾರೇತರ ಸಂಸ್ಥೆ ಯಾಗಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ
ಕೊಂಕಣಿ ರೈಲ್ವೇಯ ರೂವಾರಿ, ಮಾಜಿ ರಕ್ಷಣ ಸಚಿವ “ಜಾರ್ಜ್‌ ಫೆರ್ನಾಂಡಿಸ್‌ ಸಂಸ್ಮರಣ ರಾಷ್ಟ್ರೀಯ
ಪುರಸ್ಕಾರ-2019′ ಪ್ರದಾನ ಸಮಾರಂಭವು ಜೂ. 3ರಂದು ಸಂಜೆ 7ರಿಂದ ಕುರ್ಲಾ ಪೂರ್ವದ ಬಂಟರ
ಭವನ ಸಂಕುಲದ ಎನೆಕ್ಸ್‌ ಹಾಲ್‌ನಲ್ಲಿ ಅದ್ದೂರಿಯಾಗಿ ಜರಗಲಿದೆ.

ಸಮಾರಂಭದಲ್ಲಿ ಜಾರ್ಜ್‌ ಫೆರ್ನಾಂಡಿಸ್‌ ಅವರ 89ನೇ ಹುಟ್ಟುಹಬ್ಬದ ನಿಮಿತ್ತ ಮಣಿಪಾಲ
ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪದ್ಮಭೂಷಣ ಡಾ| ಬಿ. ಎಂ.ಹೆಗ್ಡೆ ಇವರಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಚೊಚ್ಚಲ ವಾರ್ಷಿಕ “ಜಾರ್ಜ್‌ ಫೆರ್ನಾಂಡಿಸ್‌ ಸಂಸ್ಮರಣ
ರಾಷ್ಟ್ರೀಯ ಪುರಸ್ಕಾರ-2019′ ವನ್ನು ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನಿಸಿ ಗೌರವಿಸಲಾಗುವುದು.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಮತ್ತು ಅಧ್ಯಕ್ಷ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಹಣಕಾಸು ರಾಜ್ಯ ಸಚಿವ
ದೀಪಕ್‌ ಕೇಸರ್ಕರ್‌ ಮತ್ತು ಗೌರವ ಅತಿಥಿ ಗಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ
ಕೋಟ ಶ್ರೀನಿವಾಸ ಪೂಜಾರಿ ಇವರು ಆಗಮಿಸಲಿದ್ದಾರೆ.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷರಾದ ಎಲ್‌.ವಿ. ಅಮೀನ್‌, ಪಿ. ಧನಂಜಯ ಶೆಟ್ಟಿ,
ನಿತ್ಯಾನಂದ ಡಿ. ಕೋಟ್ಯಾನ್‌, ಸಿಎ ಐ. ಆರ್‌. ಶೆಟ್ಟಿ, ಬಾಲಕೃಷ್ಣ ಭಂಡಾರಿ, ನ್ಯಾಯವಾದಿ ಮೊಹಿದ್ದೀನ್‌ ಮುಂಡ್ಕೂರು, ರಾಮಚಂದ್ರ ಗಾಣಿಗ, ಚಂದ್ರಶೇಖರ ಆರ್‌. ಬೆಳ್ಚಡ, ಜಿ. ಟಿ.ಆಚಾರ್ಯ, ಕೆ. ಎಲ್‌. ಬಂಗೇರ, ಆ್ಯಂಟೋನಿ ಸಿಕ್ವೇರಾ, ಜಗದೀಶ್‌ ಅಧಿಕಾರಿ, ರಾಮಚಂದ್ರ ಬೈಕಂಪಾಡಿ,
ಫೆಲಿಕ್ಸ್‌ ಡಿಸೋಜಾ, ಗೌರವ ಪ್ರಧಾನ ಕಾರ್ಯದರ್ಶಿ ಹಿರಿಯಡ್ಕ ಮೋಹನ್‌ ದಾಸ್‌, ಗೌರವ ಕಾರ್ಯದರ್ಶಿಗಳಾದ ರವಿ ಎಸ್‌. ದೇವಾಡಿಗ, ಪ್ರೊ| ಶಂಕರ್‌, ಹ್ಯಾರಿ ಸಿಕ್ವೇರಾ, ಬಿ. ಮುನಿರಾಜ್‌
ಜೈನ್‌, ದೇವದಾಸ್‌ ಕುಲಾಲ್‌, ಗೌರವ ಪ್ರಧಾನ ಕೋಶಾಧಿಕಾರಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್‌, ಗೌರವ ಜತೆ ಕೋಶಾಧಿಕಾರಿಗಳಾದ ತುಳಸಿದಾಸ್‌ ಅಮೀನ್‌, ತೋನ್ಸೆ ಸಂಜೀವ ಪೂಜಾರಿ, ವಕ್ತಾರ
ದಯಾ ಸಾಗರ್‌ ಚೌಟ, ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ, ವಿಶ್ವನಾಥ್‌ ಮ್ಹಾಡಾ,
ನ್ಯಾಯವಾದಿ ಸುಭಾಷ್‌ ಶೆಟ್ಟಿ, ಹರೀಶ್‌ಕುಮಾರ್‌ ಶೆಟ್ಟಿ, ಧರ್ಮಪಾಲ್‌ ಯು.ದೇವಾಡಿಗ ಹಾಗೂ ಸಮಿತಿಯ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯರ ನೇತೃತ್ವ
ದಲ್ಲಿ ಸಮಾರಂಭವು ಜರಗಲಿದೆ.

ಸಮಾರಂಭದಲ್ಲಿ ತುಳು-ಕನ್ನಡಿ ಗರು, ವಿವಿಧ ಜಾತೀಯ, ತುಳು- ಕನ್ನಡಪರ ಸಂಘಟನೆಗಳ ಅಧ್ಯಕ್ಷರು,
ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾರಂಭದ ಯಶಸ್ಸಿಗೆ ಸಹಕರಿಸುವಂತೆ ಸಮಿತಿಯ ಪ್ರಕಟನೆ ತಿಳಿಸಿದೆ.

ಜಾರ್ಜ್‌ ಫೆರ್ನಾಂಡಿಸ್‌ ಸಂಸ್ಮರಣ ರಾಷ್ಟ್ರೀಯ ಪುರಸ್ಕಾರ-2019

‘ ತುಳುನಾಡಿನಿಂದ ಬಂದರೂ ಮಂಗಳೂರಿನಲ್ಲಿ ಹುಟ್ಟಿ ಮುಂಬಯಿ ಮಹಾನಗರವನ್ನು ಹೋರಾಟದ ಕರ್ಮಭೂಮಿಯನ್ನಾಗಿಸಿಕೊಂಡು ಬೆಳೆದ ಜಾರ್ಜ್‌ ಫೆನಾಂಡಿಸ್‌ ಅವರು, ಅಧಿಕಾರದ ದಂಡ ಹಿಡಿದಿದ್ದ ಅವಧಿಯಲ್ಲಿ ಕೊಂಕಣ ರೈಲ್ವೇ ಸ್ಥಾಪಿಸುವ ಮೂಲಕ ಉಭಯ ಬಂದರು ನಗರಗಳನ್ನು ರೈಲ್ವೇ ಜಾಲದ ಮೂಲಕ ಬೆಸೆದವರು. ಜೀವನದ ಆರಂಭದಿಂದಲೂ ಸಮಾಜವಾದಿಯಾಗಿ ಬದುಕಿದ್ದ ಮಾನ್ಯ ಜಾರ್ಜ್‌ ಫೆರ್ನಾಂಡಿಸ್‌ ಅವರು ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆ ಅಪಾರ. ಕಾರ್ಮಿಕ ಮತ್ತು ಶೋಷಿತರ ಪರ ದನಿಯಾಗಿದ್ದ ಅವರು ತಮ್ಮ ತತ್ವ-ಸಿದ್ಧಾಂತಕ್ಕೆ ಬದ್ಧರಾಗಿ ರಾಜಕೀಯ ದೊಂದಿಗೆ, ಸಮಾಜ ಸೇವೆಯಲ್ಲಿ ತೊಡಗಿದವರು. ಮಾನವ ಹಕ್ಕುಗಳು, ಬಡವರ ಉನ್ನತಿಗಾಗಿ, ರೈತರು ಮತ್ತು ಕಾರ್ಮಿಕರ ಏಳ್ಗೆಗಾಗಿ ಶ್ರಮಿಸುತ್ತಿದ್ದ ಜಾರ್ಜ್‌ ಫೆರ್ನಾಂಡಿಸ್‌ ಅವರು ಓರ್ವ ಮಾಸ್‌ ಲೀಡರ್‌ ಆಗಿದ್ದವರು. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹುಟ್ಟಿಕೊಂಡ ಜಯಶ್ರೀ
ಕೃಷ್ಣ ಪರಿಸರ ಪ್ರೇಮಿ ಸರಕಾರೇತರ ಸಂಸ್ಥೆ ಸ್ಥಾಪನೆಯ ದಿನದಿಂದ ಸಂಸ್ಥೆಯ ಪ್ರಮುಖ  ಲಹೆಗಾರರಾಗಿ ಸಮಿತಿಯ ಎಲ್ಲ ಅಭಿವೃದ್ಧಿಪರ ಯೋಜನೆಗಳಿಗೆ ಬೆನ್ನಲುಬಾಗಿ ಸಹಕರಿಸಿದವರು. ಪ್ರಸ್ತುತ ಸಮಿತಿಯ
ಅಧ್ಯಕ್ಷ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರ ನೇತೃತ್ವದಲ್ಲಿ ಸಮಿತಿಯ ವತಿಯಿಂದ “ಜಾರ್ಜ್‌ ಫೆರ್ನಾಂಡಿಸ್‌ ಸಂಸ್ಮರಣ ರಾಷ್ಟ್ರೀಯ ಪುರಸ್ಕಾರ-2019’ವನ್ನು ಸ್ಥಾಪಿಸಿರು ವುದು ಹೆಮ್ಮೆಯ ವಿಷಯವಾಗಿದೆ. ಚೊಚ್ಚಲ ಪುರಸ್ಕಾರ ವನ್ನು ಪ್ರಸ್ತುತ ವರ್ಷ ಕಳೆದ ಐವತ್ತು ವರ್ಷಗಳಿಂದ
ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಅಪಾರ ಸೇವೆಗಾಗಿ ಪದ್ಮಭೂಷಣ ಡಾ| ಬಿ. ಎಂ. ಹೆಗ್ಡೆ ಅವರಿಗೆ ಪ್ರದಾನಿಸುತ್ತಿರುವುದು ಅವರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.