ಘನ್ಸೋಲಿ ಮೂಕಾಂಬಿಕಾ ಚಾರಿಟೆಬಲ್ ಮಂಡಲದಿಂದ ಆರೋಗ್ಯ ತಪಾಸಣಾ ಶಿಬಿರ
Team Udayavani, Mar 17, 2017, 3:41 PM IST
ಮುಂಬಯಿ: ಮನುಷ್ಯ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ಅವರ ಯೋಗ ಭಾಗ್ಯ, ಆರೋಗ್ಯ ಹಾಗೂ ಪ್ರಯತ್ನ ಮುಖ್ಯವಾಗಿರಬೇಕು. ಆದರೆ ಆರೋಗ್ಯವಿಲ್ಲದ ಮಾನವನಿಗೆ ಮೂರು ವಿಷಯಗಳು ಅವನ ಜೀವನದ ಶ್ರೇಯಸ್ಸಿಗೆ ಸಂಗಾತಿಯಾಗಲಾರವು. ನಾವು ಕೆಲವೊಮ್ಮೆ ಅತಿಯಾದ ಸಂಪತ್ತನ್ನು ಗಳಿಸುವ ಲಾಲಸೆಯಿಂದ ನಮ್ಮ ಆರೋಗ್ಯದತ್ತ ಗಮನ ಹರಿಸುವುದಿಲ್ಲ. ಆದರೆ ಜೀವನಾಂತ್ಯದಲ್ಲಿ ನಾವು ಗಳಿಸಿದ ಹಣವನ್ನು ನಮ್ಮ ಆರೋಗ್ಯವನ್ನು ಸರಿಪಡಿಸಲು ಸಂಪೂರ್ಣವಾಗಿ ವ್ಯಯಿಸುತ್ತೇವೆ. ಇಂದಿನ ಯಾಂತ್ರಿಕ ಯುಗದಲ್ಲಿ ಮನುಷ್ಯನ ಕೇವಲ ಮೆದುಳು ಕೆಲಸ ಮಾಡುವುದೇ ವಿನಃ ಅವನ ದೇಹ ಮಾಡುವುದಿಲ್ಲ. ಆದ್ದರಿಂದಲೇ ಮನುಷ್ಯ ಕಿರಿಯ ಹರೆಯದಲ್ಲೇ ನಾನಾ ವಿಧದ ಕಾಯಿಲೆಗಳಿಗೆ ಬಲಿಯಾಗುತ್ತಾನೆ. ಇಂದಿನ ಕಾಲದಲ್ಲಿ ಪ್ರತಿಯೋರ್ವ ಮನುಷ್ಯನು ಆರೋಗ್ಯವನ್ನು ಕಾಪಾಡುವ ಆಟೋಟಗಳಲ್ಲಿ ಪಾಲ್ಗೊಳ್ಳಬೇಕು. ಮಾತ್ರವಲ್ಲದೆ ಕಡಿಮೆ ಎಂದರೂ ಪ್ರತಿ ವರ್ಷಕ್ಕೊಮ್ಮೆ ತನ್ನ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಲೇಬೇಕು ಎಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ನುಡಿದರು.
ಮಾ. 12ರಂದು ಪೂರ್ವಾಹ್ನ 10ರಿಂದ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಆವರಣದಲ್ಲಿ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಳ ಹಾಗೂ ಲಯನ್ಸ್ ಕ್ಲಬ್ ಆಫ್ ಐರೋಲಿ ಜಂಟಿಯಾಗಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಸರದ ತುಳು-ಕನ್ನಡಿಗರ ಹಿತದೃಷ್ಟಿಯಿಂದ ಸಂಸ್ಥೆಯು ಪ್ರತಿ ವರ್ಷ ಇಂತಹ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ ಸಹಕರಿಸುತ್ತಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಲಯನ್ಸ್ ಕ್ಲಬ್ ಆಫ್ ಐರೋಲಿಯ ಅಧ್ಯಕ್ಷೆರೂಪಾ ಸಂತೋಷ್ ಶೆಟ್ಟಿ ಮಾತನಾಡಿ, ಶಿಬಿರಕ್ಕೆ ಸಹಕರಿ ಸಿದ ಎಲ್ಲಾ ವೈದ್ಯರಿಗೆ, ಲಯನ್ಸ್ ಕ್ಲಬ್‌ನ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದರು.
ವೇದಿಕೆಯಲ್ಲಿ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಳದ ಅಧ್ಯಕ್ಷೆ ಜಗದೀಶ್ ಶೆಟ್ಟಿ ನಂದಿಕೂರು, ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ ದೆಪ್ಪುಣಿಗುತ್ತು, ಮೂಕಾಂಬಿಕಾ ದೇವಾಲಯದ ಕೋಶಾಧಿಕಾರಿ ಶೇಖರ್ ದೇವಾಡಿಗ, ಬಂಟರ ಸಂಘ ಮುಂಬಯಿ ಪ್ರಾದೇಶಿಕ ಸಮಿತಿಯ ನವಿಮುಂಬಯಿ ಸಮನ್ವಯಕರಾದ ತಾಳಿಪಾಡಿಗುತ್ತು ಭಾಸ್ಕರ ಶೆಟ್ಟಿ, ಲಯನ್ಸ್ ಕ್ಲಬ್‌ನ ಪ್ರಾದೇಶಿಕ ವಲಯದ ಮುಖ್ಯಸ್ಥ ಶ್ರೀ ಮೂರ್ತಿ, ಮಾಜಿ ಅಧ್ಯಕ್ಷ ಸಂಜೀವ ಸೂರ್ಯವಂಶಿ ಹಾಗೂ ಉಪಾಧ್ಯಕ್ಷ ರಾಜೇಶ್ ಬಿ. ಶೆಟ್ಟಿ ಅವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮವನ್ನು ಹರೀಶ್ ಶೆಟ್ಟಿ ಪಡುಬಿದ್ರೆ ಅವರು ನಿರ್ವಹಿಸಿದರು.
ನೂರಾರು ಮಂದಿ ತುಳು-ಕನ್ನಡಿಗರು, ಅನ್ಯಭಾಷಿಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ಡಾ| ಕುಡಾಬೆ, ಡಾ| ಪಲ್ಲವಿ ದಲಾಲ್, ಡಾ| ಪ್ರಮೋದ್ ಸಾಬ್ಲೆ, ಡಾ| ನೀತಾ ರಾಮಿನಲ್, ಡಾ| ನಲೀಮ್ ಹಾಗೂ ಇತರ ಸಿಬಂದಿಗಳು ಪಾಲ್ಗೊಂಡು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.