ಘನ್ಸೋಲಿ ಮೂಕಾಂಬಿಕಾ ಮಂದಿರದಲ್ಲಿ ಉಚಿತ ವೈದ್ಯಕೀಯ ಶಿಬಿರ
Team Udayavani, Aug 16, 2017, 12:36 PM IST
ನವಿಮುಂಬಯಿ: ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆಯ ವತಿಯಿಂದ ಹೆಲ್ತ್‌ಸ್ಟ್ರಿಂಗ್ ನವಿಮುಂಬಯಿ ಸಂಸ್ಥೆಯ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರವು ಆ. 11ರಂದು ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ನಡೆಯಿತು.
ಹೆಲ್ತ್‌ಸ್ಟ್ರಿಂಗ್ ನವಿಮುಂಬಯಿ ಸಂಸ್ಥೆಯ ಅಧಿಕಾರಿಗಳಾದ ವೀರೇಂದ್ರ ಕೋಯಂಡೆ ಮತ್ತು ಯೋಗೀಶ್ ಅವರ ಮೇಲ್ವಿಚಾರಣೆಯಲ್ಲಿ ಸಂಸ್ಥೆಯ ನುರಿತ ವೈದ್ಯರಿಂದ ರಕ್ತ ತಪಾಸಣೆ, ರಕ್ತದೊತ್ತಡ, ಮಧುಮೇಹ, ಕೊಲೆಸ್ಟ್ರಾಲ್ ತಪಾಸಣೆ, ಇಸಿಜಿ, ಲಿಪಿಡ್ ಮೊದಲಾದ ತಪಾಸಣೆಗಳನ್ನು ನಡೆಸಿ ಸೂಕ್ತ ಆರೋಗ್ಯ ಭಾಗ್ಯದ ಸಲಹೆ- ಸೂಚನೆಗಳನ್ನು ನೀಡಿದರು.
ಶಿಬಿರದಲ್ಲಿ ನೂರಾರು ಮಂದಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು ಪಡೆ ದುಕೊಂಡರು. ದೇವಾಲಯದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಈ ಕಾರ್ಯಕ್ರಮದಮಲ್ಲಿ ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆಯ ಅಧ್ಯಕ್ಷ ನಂದಿಕೂರು ಜಗದೀಶ್ ಶೆಟ್ಟಿ, ಉಪಾಧ್ಯಕ್ಷರಾದ ಪದ್ಮನಾಭ ಸಿ. ಶೆಟ್ಟಿ, ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿ ಗುತ್ತು ಭಾಸ್ಕರ ಎಂ. ಶೆಟ್ಟಿ, ಸದಸ್ಯರಾದ ಕೆ. ಎಂ. ಶೆಟ್ಟಿ, ಶೇಖರ್ ವಿ. ದೇವಾಡಿಗ, ಕುಟ್ಟಿ ಎ. ಕುಂದರ್, ಇತರ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳದ ಸದಸ್ಯರು, ಉಪ ಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯೆಯರು ಉಪಸ್ಥಿತರಿದ್ದರು.
ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಿದ ಹೆಲ್ತ್ ಸ್ಟ್ರಿಂಗ್‌ನ ಸದಸ್ಯರನ್ನು ಗೌರವಿಸಲಾಯಿತು. ಕೊನೆಯಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಾ. ತುಂಬೆ ಮೊಯ್ದೀನ್ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Jimmy Carter Life Journey: ಜಿಮ್ಮಿ ಕಾರ್ಟರ್- ಮಾನವೀಯತೆ, ಶಾಂತಿಯ ಶಿಲ್ಪಿ
ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆ