ಘನ್ಸೋಲಿ ಮೂಕಾಂಬಿಕಾ ಮಂದಿರ: ವಿಜೃಂಭಣೆಯ ವಾರ್ಷಿಕ ಮಹೋತ್ಸವ

Team Udayavani, Feb 21, 2017, 2:06 PM IST

20-Mum08a.jpg

ನವಿಮುಂಬಯಿ: ಶ್ರೀಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯದ  14ನೇ ವಾರ್ಷಿಕ ಮಹೋತ್ಸವವು ಫೆ. 17ರಂದು ಪ್ರಾರಂಭಗೊಂಡಿದ್ದು, ಫೆ. 21ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ  ವಿಜೃಂಭಣೆಯಿಂದ ಜರಗಲಿದೆ.

ಫೆ. 20ರಂದು ಸೂರ್ಯೋದಯಕ್ಕೆ ಕವಾಟ ಉದ್ಘಾಟನೆ,  ಪಂಚಾಮೃತ ಅಭಿಷೇಕ,  ದೇವಿಗೆ 49 ಕಲಶಾಭಿಷೇಕ,  ಸಹಸ್ರ ನಾಮಾರ್ಚನೆ ಪೂರ್ವಕ ಮಹಾಪೂಜೆ, ಉತ್ಸವ ಬಲಿ, ಪಲ್ಲ ಪೂಜೆ, ಮಧ್ಯಾಹ್ನ 1 ರಿಂದ ಮಹಾ ಅನ್ನ ಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.  ಸಂಜೆ 5ರಿಂದ ಸಂಕೀರ್ತನೆ, ಮಹಾಪೂಜೆ, ಮಹಾರಂಗಪೂಜೆ, ಉತ್ಸವ ಬಲಿ, ಕಟ್ಟೆ ಪೂಜೆ, ಅವಭೃತ ಸ್ನಾನ, ಜಳಕದ ಬಲಿ  ಹಾಗೂ  ಅನ್ನಪ್ರಸಾದ ವಿತರಣೆ ನಡೆಯಿತು.

ಫೆ. 18ರಂದು ಬೆಳಗ್ಗೆ 7 ರಿಂದ ಸಾಮೂಹಿಕ ಶ್ರೀ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ತೋರಣ ಮುಹೂರ್ಹ,  ಶ್ರೀ ದೇವಿಗೆ ನವಕ ಪ್ರಧಾನ ಕಲಶಾಭಿಷೇಕ, ನವಗ್ರಹ ಯಾಗ, ದ್ವಾದಶ ನಾಳಿಕೇರ ಅಷ್ಟದ್ರವ್ಯ ಮಹಾಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನದಾನ  ಮತ್ತು ಸಂಜೆ 5ರಿಂದ  ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ಉತ್ಸವ ಬಲಿ, ಅನ್ನ ಪ್ರಸಾದ ವಿತರಣೆ ಜರಗಿತು. ಫೆ. 19ರಂದು ಬೆಳಗ್ಗೆ 7ರಿಂದ  ಶ್ರೀ ದೇವಿಗೆ ನವಕ ಪ್ರಧಾನ ಕಲಶಾಭಿಷೇಕ,ಗಣಪತಿ ದೇವರಿಗೆ ನವಕ ಪ್ರಧಾನ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಮಹಾಪೂಜೆ, ಅನ್ನದಾನ ಮತ್ತು ಸಂಜೆ 5ರಿಂದ ಗಣಪತಿ ದೇವರಿಗೆ ರಂಗಪೂಜೆ, ಮಹಾಪೂಜೆ, ಉತ್ಸವ ಬಲಿ, ಅನ್ನ ಪ್ರಸಾದ ವಿತರಣೆ, ಮಹಾಭೂತ ಬಲಿ, ಕವಾಟ ಬಂಧನ ನಡೆಯಿತು.

ವಾರ್ಷಿಕ ಮಹೋತ್ಸವದ ದೇವತಾ ವೈದಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದ  ತಂತ್ರಿವರ್ಯರಾದ  ವಿದ್ವಾನ್‌ ರಾಮಚಂದ್ರ ಬಾಯರಿ ಕಾರ್ಕಳ ಇವರ ನೇತೃತ್ವದಲ್ಲಿ ದೇವಾಲಯದ ಪ್ರಧಾನ ಅರ್ಚಕರಾದ ಗುರುಪ್ರಸಾದ್‌ ವಿ. ಭಟ್‌ ಅವರ ಸಹಕಾರದೊಂದಿಗೆ ನಡೆಯಿತು. ಗುರುರಾಜ ಭಟ್‌, ನಾಗರಾಜ್‌ ಭಟ್‌, ಮಂಜು ಭಟ್‌, ಅಶೋಕ್‌ ಭಟ್‌ ಮೊದಲಾದವರು ಸಹಕರಿಸಿದರು. ದೇವರ ಬಲಿ ಉತ್ಸವದಲ್ಲಿ ಕುಂಟಾಡಿ ಸುರೇಶ್‌ ಭಟ್‌, ಪದಾತಿಗಳಾಗಿ ವಿಟuಲ ದೇವಾಡಿಗ, ರತ್ನಾಕರ ಪೂಜಾರಿ, ಗಣೇಶ್‌ ಶೆಟ್ಟಿ, ವಾದ್ಯದಲ್ಲಿ ದಿನೇಶ್‌ ಕೋಟ್ಯಾನ್‌ ಮತ್ತು ಬಳಗದವರು ಸಹಕರಿಸಿದರು.

ದೇವಾಲಯದ  ಅಧ್ಯಕ್ಷರಾದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಉತ್ಸವದಲ್ಲಿ ಉಪಾಧ್ಯಕ್ಷ ನಂದಿಕೂರು ಜಗದೀಶ್‌ ಶೆಟ್ಟಿ,  ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್‌ ಎಸ್‌. ಕೋಟ್ಯಾನ್‌,  ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್‌ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ ಪಿ. ಶೆಟ್ಟಿ,  ಸದಸ್ಯರಾದ  ರಾಘು ಆರ್‌. ಕೋಟ್ಯಾನ್‌, ಕುಟ್ಟಿ  ಎ. ಕುಂದರ್‌,  ಶಂಕರ್‌ ಮೊಲಿ, ಸುಧಾಕರ ಸಿ. ಪೂಜಾರಿ, ವಿಶ್ವನಾಥ ಎಸ್‌. ಶೆಟ್ಟಿ, ಅಣ್ಣು ಎಂ. ಶೆಟ್ಟಿ,  ಶ್ರೀಧರ ಬಿ. ಪೂಜಾರಿ, ಮಹಾಬಲ ಟಿ. ಶೆಟ್ಟಿ, ಹರೀಶ್‌ ಕುರ್ಕಾಲ್‌,  ಹರೀಶ್‌ ಪಡುಬಿದ್ರೆ, ಹರೀಶ್‌ ನಲ್ಲೂರು, ಶಕುಂತಳಾ ಎಸ್‌. ಶೆಟ್ಟಿ ಮತ್ತು ಶ್ರೀ ಮೂಕಾಂಬಿಕ ಧರ್ಮಶಾಸ್ತ ಸೇವಾ ಸಂಸ್ಥೆ, ಉಪಸಮಿತಿಯ ಸದಸ್ಯರು ಹಾಗೂ ಮಹಿಳಾ ಮಂಡಳಿಯ ಸದಸ್ಯೆಯರು ಸಹಕರಿಸಿದರು.      

   ಫೆ. 21ರಂದು ಬೆಳಗ್ಗೆ 6ರಿಂದ ಮಹಾ ಸಂಪ್ರೋಕ್ಷಣೆ, ಚಂಡಿಕಾ ಯಾಗ, ಮಧ್ಯಾಹ್ನ   ಮಹಾಪೂಜೆ,  ಮಹಾಮಂತ್ರಾಕ್ಷತೆ, ಅನ್ನ ಪ್ರಸಾದ ವಿತರಣೆ ಜರಗಲಿದೆ. ಸಂಜೆ 5ರಿಂದ ನೃತ್ಯ ವೈಭವ, ರಾತ್ರಿ 8.30ಕ್ಕೆ ಅನ್ನ ಪ್ರಸಾದ ವಿತರಣೆ, ರಾತ್ರಿ 9ರಿಂದ  ಧಾರ್ಮಿಕ ಸಭೆ, ರಾತ್ರಿ 10ರಿಂದ ಶ್ರೀಧರ ಬಿ. ಪೂಜಾರಿ ಮತ್ತು ಕುಟುಂಬಸ್ಥರ ಸೇವೆಯ ರೂಪದಲ್ಲಿ ಶ್ರೀ ಸದ್ಗುರು ನಿತ್ಯಾನಂದ ಕೃಪಾ ಪೋಷಿತ ಯಕ್ಷಗಾನ ಮಂಡಳಿ ದಹಿಸರ್‌ ಮುಂಬಯಿ ಇವರಿಂದ ಶ್ರೀ ದೇವಿ ಮಹಾತೆ¾ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. 

  ಚಿತ್ರ-ವರದಿ: ಸುಭಾಷ್‌ ಶಿರಿಯಾ 

ಟಾಪ್ ನ್ಯೂಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.