ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರ:ಶ್ರೀಕೃಷ್ಣ ಜನ್ಮಾಷ್ಟಮಿ
Team Udayavani, Sep 7, 2018, 4:18 PM IST
ನವಿಮುಂಬಯಿ: ಸಣ್ಣ ಮಕ್ಕಳಲ್ಲಿ ನಾವು ದೇವರನ್ನು ಕಾಣಲು ಸಾಧ್ಯ. ಕಾರಣ ಅವರಿಗೆ ಏನೂ ತಿಳಿದಿರುವುದಿಲ್ಲ. ಅವರು ಮುಗ್ಧರಾಗಿರುತ್ತಾರೆ. ನಮ್ಮ ಜನ್ಮ ಜನ್ಮದ ಬಂಧು ಪರಮಾತ್ಮ. ಅವ ನಮಗೆ ಎಲ್ಲಾ ನೀಡುತ್ತಾನೆ. ನಾವು ಅವನಿಗೆ ಏನೂ ನೀಡಲು ಸಾಧ್ಯವಿಲ್ಲ. ಆದರೆ ಭಜನೆಯ ಮುಖಾಂತರ ಅವನನ್ನು ಒಲಿಸಲು ಸಾಧ್ಯ. ಭಜನೆ ಅಂದರೆ ಭಜಿಸು, ಜಪಿಸು, ನಾರಾಯಣ ಎಂದು ಅರ್ಥ. ನಾವು ಮಕ್ಕಳಿಗೆ ಸಣ್ಣ ಪ್ರಾಯದಲ್ಲೇ ಭಜನೆ ಕಲಿಸಿದರೆ ಅವರಿಗೆ ಭಗವಂತನಲ್ಲಿ ಭಕ್ತಿ ಹೆಚ್ಚುತ್ತದೆ. ನಾವು ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಬೇಕು. ನಾವು ಸಣ್ಣಗಿರುವಾಗ ಊರಿನಲ್ಲಿ ಸಂಜೆ ಭಜನೆ ಮಾಡದೆ ಊಟ ಹಾಕುತ್ತಿರಲಿಲ್ಲ. ಅದನ್ನು ಅನುಸರಿಸಿದ್ದರಿಂದ ಇಂದು ಈ ಕ್ಷೇತ್ರದಲ್ಲಿ ಅಧ್ಯಕ್ಷನಾಗಿದ್ದೇನೆ ಎಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ನುಡಿದರು.
ಸೆ. 2 ರಂದು ಶ್ರೀ ಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಆಯೋಜಿಸಲಾಗಿದ್ದ ಭಕ್ತಿಗೀತೆ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ಹರೀಶ್ ಶೆಟ್ಟಿ ಪಡುಬಿದ್ರೆ ಮತ್ತು ಸಂತೋಷ್ ಶೆಟ್ಟಿ ಅವರ ಮುತುವರ್ಜಿಯಿಂದ ಭಜನಾ ಸ್ಪರ್ಧೆ ಆಯೋಜಿಸಿದ್ದೇವೆ. ಅವರೀರ್ವರನ್ನೂ ನಾವು ಅಭಿನಂದಿಸುತ್ತಿದ್ದೇನೆ. ಎಲ್ಲ ಸ್ಪರ್ಧಿಗಳು ಉತ್ತಮವಾಗಿ ಹಾಡಿದ್ದಾರೆ. ತಾಯಿ ಮೂಕಾಂಬಿಕೆಯ ಅನುಗ್ರಹ ಸದಾ ಮಕ್ಕಳ ಮೇಲಿರಲಿ ಎಂದು ನುಡಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ನಂದಿಕೂರು ಜಗದೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಸದಸ್ಯರಾದ ಹರೀಶ್ ಕುರ್ಕಾಲ್, ಹರೀಶ್ ಶೆಟ್ಟಿ ಪಡುಬಿದ್ರೆ, ದೇವಾಲಯದ ಹಿತೈಷಿಗಳಾದ ಶಂಕರ್ ಶೆಟ್ಟಿ, ಉಪಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಆರ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಶಾ ವಿ. ಶೆಟ್ಟಿ ಉಪಸ್ಥಿತರಿದ್ದರು.
ಮಹಿಳಾ ವಿಭಾಗದ ಸದಸ್ಯೆಯರು ಪ್ರಾರ್ಥನೆಗೈದರು. ಸುರೇಶ್ ಎಸ್. ಕೋಟ್ಯಾನ್ ಸ್ವಾಗತಿಸಿದರು. ಭಕ್ತಿ ಸಂಗೀತ ಸ್ಪರ್ಧೆಯ ವಿಜೇತರಿಗೆ ಬಹುಮಾನದ ಪ್ರಾಯೋಜಕತ್ವ ವಹಿಸಿದ್ದ ಹರೀಶ್ ಕುರ್ಕಾಲ್ ಅವರನ್ನು ಗೌರವಿಸಲಾಯಿತು. ಐದು ವರ್ಷದಿಂದ 8 ವರ್ಷದೊಳಗಿನ ಮಕ್ಕಳ ವಿಭಾಗದ ಸ್ಪರ್ಧೆಯಲ್ಲಿ ಆದಿತ್ಯ ಭಟ್ ಪ್ರಥಮ, ಸ್ಪರ್ಶ್ ಆಳ್ವ ದ್ವಿತೀಯ, ಇನ್ಶಿಕಾ ದೇವಾಡಿಗ ತೃತೀಯ ಹಾಗೂ 9 ರಿಂದ 15 ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ನಿತ್ಯಶ್ರೀ ಜಯರಾಮನ್ ಪ್ರಥಮ, ಅದಿತಿ ಶೆಟ್ಟಿ ದ್ವಿತೀಯ, ಆಶ್ನಾ ಪಿ. ಶೆಟ್ಟಿ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ಹರೀಶ್ ಕುರ್ಕಾಲ್ ಅವರ ವತಿಯಿಂದ ನಗದು ಶಾಲು ಹೊದೆಸಿ, ಸ್ಮರಣಿಕೆ, ನಗದು ಬಹುಮಾನವದೊಂದಿಗೆ ಗೌರವಿಸಲಾಯಿತು.
ತೀರ್ಪುಗಾರರಾಗಿ ಸಹಕರಿಸಿದ ಗಾಯಕರುಗಳಾದ ಚಂದ್ರಹಾಸ ರೈ ಪುತ್ತೂರು, ಮೋಹನ್‌ದಾಸ್ ರೈ, ಆಶಾ ಕುಲಕರ್ಣಿ ಅವರನ್ನು ಗೌರವಿಸಲಾಯಿತು. ಸಹಕರಿಸಿದ ಎಲ್ಲರನ್ನು ಗೌರವಿಸಲಾಯಿತು.
ಜಗದೀಶ್ ಶೆಟ್ಟಿ ಅವರು ಮಾತನಾಡಿ, ನಮ್ಮ ದೇವಾಲಯ ಆರಂಭಗೊಂಡಂದಿನಿಂದ ನಮ್ಮ ಹಿಂದು ಸಂಸ್ಕೃತಿಯ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದೇವೆ. ಈ ವರ್ಷ ಪ್ರಥಮ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಭಕ್ತಿಗೀತೆಗಳ ಸ್ಪರ್ಧೆ ಆಯೋಜಿಸಿದ್ದೇವೆ. ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸಬೇಕು. ಅದಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಆದ್ದರಿಂದ ಪಾಲಕರು ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದು ನುಡಿದರು.
ಸುರೇಶ್ ಕೋಟ್ಯಾನ್ ಅವರು ಮಾತನಾಡಿ, ನಾವು ನಮ್ಮ ದೇವಾಲಯದಲ್ಲಿ ಹಿಂದೂ ಧರ್ಮದ ಪ್ರತಿಯೊಂದು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾ ಬಂದಿದ್ದೇವೆ. ಇಂದು ಮೊದಲ ಬಾಸಿಗೆ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪಾಲಕರು ಮಕ್ಕಳನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು. ಕಾರ್ಯಕ್ರಮವನ್ನು ಆಯೋಜಿಸಿದ ಎಲ್ಲರು ಅಭಿನಂದನಾರ್ಹರು ಎಂದರು.
ಭಕ್ತಿಗೀತೆ ಮತ್ತು ಶ್ರೀಕೃಷ್ಣ ವೇಷದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು. ಹರೀಶ್ ಶೆಟ್ಟಿ ಪಡುಬಿದ್ರೆ ಕಾರ್ಯಕ್ರಮ ನಿರ್ವಹಿಸಿ ವಿಜೇತರ ಯಾದಿಯನ್ನು ಘೋಷಿಸಿದರು. ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ ವಂದಿಸಿದರು. ಬೆಳಗ್ಗೆಯಿಂದ ಶ್ರೀಕ್ಷೇತ್ರದಲ್ಲಿ ವಿವಿಧ ಪೂಜೆ, ರಾತ್ರಿ ಮಂಡಳಿಯವರಿಂದ ಭಜನೆ, ಕುಣಿತ ಭಜನೆ, ರಾತ್ರಿ ಚಂದ್ರೋದಯಕ್ಕೆ ಶ್ರೀ ಕೃಷ್ಣ ದೇವರಿಗೆ ಅಘÂì ಅರ್ಪಣೆ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಆನಂತರ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ವತಿಯಿಂದ ಅನ್ನಪ್ರಸಾದ ವಿತರಣೆ ನಡೆಯಿತು.
ದೇವಾಲಯದ ಪ್ರಧಾನ ಅರ್ಚಕರಾದ ಗುರುಪ್ರಸಾದ್ ಭಟ್ ಅವರ ಪೌರೋಹಿತ್ಯದಲ್ಲಿ ದೇವತ ಕಾರ್ಯ ಜರಗಿತು. ದಿವಾಕರ್ ಶೆಟ್ಟಿ ಮತ್ತು ಬಳಗದವರು ಶ್ರೀ ಕೃಷ್ಣ ದೇವರ ಮಂಟಪವನ್ನು ಶೃಂಗರಿಸಿದರು. ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಯ ಸದಸ್ಯರು, ಮಹಿಳಾ ವಿಭಾಗದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.