ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರ: ಯಕ್ಷಗಾನ ,ಕಲಾವಿದರಿಗೆ ಸಮ್ಮಾನ
Team Udayavani, Aug 14, 2018, 4:56 PM IST
ನವಿ ಮುಂಬಯಿ: ಇಂದು ನಮ್ಮ ಕರ್ನಾಟಕದ ಗಂಡು ಕಲೆ ಎಂದೇ ಪ್ರಸಿದ್ಧಿ ಪಡೆದ ಯಕ್ಷಗಾನದ ಮೇರು ಕಲಾವಿದರು ಪ್ರಸಿದ್ಧ ಹಾಸ್ಯಗಾರರು ಆದಂತಹ ಹಳ್ಳಾಡಿ ಜಯರಾಮ್ ಶೆಟ್ಟಿ ಮತ್ತು ಸೀತಾರಾಮ್ ಕುಮಾರ್ ಕಟೀಲು ಅವರನ್ನು ಉದ್ಯಮಿ ರಾಜೇಂದ್ರ ಶೆಟ್ಟಿ ಅವರ ವತಿಯಿಂದ ಸಮ್ಮಾನಿಸಿದ್ದು ಮೆಚ್ಚುವಂಥದ್ದಾಗಿದೆ. ಕಲಾವಿದರನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮ ಈ ದೇವಾಲಯದಲ್ಲಿ ವರ್ಷದಿಂದ ವರ್ಷಕ್ಕೆ ಯಕ್ಷಗಾನ ಪ್ರದರ್ಶನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಾರಣ ತಾಯಿ ಮೂಕಾಂಬಿಕೆ ಯಕ್ಷಗಾನ ಪ್ರಿಯೆ. ಈ ವರ್ಷ ಈಗಾಗಲೇ 40 ಯಕ್ಷಗಾನ ಪ್ರದರ್ಶನಗಳು ಮುಂಗಡವಾಗಿ ಬುಕ್ಕಿಂಗ್ ಆಗಿವೆ ಎನ್ನಲು ಸಂತೋಷವಾಗುತ್ತಿದೆ. ರಾಜೇಂದ್ರ ಶೆಟ್ಟಿ ಅವರು ಪ್ರತೀ ವರ್ಷ ಅನ್ನದಾನದೊಂದಿಗೆ ಯಕ್ಷಗಾನ ಸೇವೆಯನ್ನು ನೀಡುತ್ತಿದ್ದಾರೆ. ಅವರ ಮನದ ಇಷ್ಟವನ್ನು ತಾಯಿ ನೆರವೇರಿಸಲಿ. ಮಹಮ್ಮದ್ ಗೌಸ್ ಅವರೋರ್ವ ಮುಸ್ಲಿಂ ಧರ್ಮದವರಾಗಿದ್ದು, ನಮ್ಮ ಧರ್ಮ, ನಮ್ಮ ಸಂಸ್ಕೃತಿಯ ಬಗ್ಗೆ ಅವರ ಅಭಿಮಾನವನ್ನು ಮೆಚ್ಚುವಂಥದ್ದು. ಕಳೆದ ಒಂಭತ್ತು ವರ್ಷಗಳಿಂದ ತಾಯಿ ಮೂಕಾಂಬಿಕೆಯ ಸನ್ನಿಧಿಯಲ್ಲಿ ಯಕ್ಷಗಾನ ಸೇವೆಯನ್ನು ಮಾಡುತ್ತಾ ಬಂದಿದ್ದಾರೆ. ಮುಂದಿನ ವರ್ಷ ದಶಮಾನೋತ್ಸವವನ್ನು ಇಲ್ಲಿ ಆಚರಿಸಲಿದ್ದಾರೆ. ಅವರಿಗೆ ನಾವೆಲ್ಲರೂ ಸಹಕರಿಸೋಣ ಎಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಉಪಾಧ್ಯಕ್ಷ ನಂದಿಕೂರು ಜಗದೀಶ್ ಶೆಟ್ಟಿ ನುಡಿದರು.
ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಸಭಾಂಗಣದಲ್ಲಿ ಯಕ್ಷಗಾನ ಕಲಾವಿದ ಮಹಮ್ಮದ್ ಗೌಸ್ ಅವರ ಸಂಚಾಲಕತ್ವದ ಯಕ್ಷ ಸೌರಭ ಪ್ರವಾಸಿ ಮೇಳ ಕುಂದಾಪುರ ಇದರ ಒಂಭತ್ತನೇ ವಾರ್ಷಿಕ ಮುಂಬಯಿ ಪ್ರವಾಸದ ದೇವಾಲಯದಲ್ಲಿ ಜರಗಿದ ಯಕ್ಷ ನವಮಿ ಕಾರ್ಯಕ್ರಮದ ಐದನೇ ದಿನದ ಯಕ್ಷಗಾನ ಪ್ರದರ್ಶನದ ಮಧ್ಯೆ ಜರಗಿದ ಸಮ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಮಗೆಲ್ಲರಿಗೂ ತಾಯಿ ಮೂಕಾಂಬಿಕೆಯ ಅನುಗ್ರಹ ಸದಾಯಿರಲಿ ಎಂದು ಹಾರೈಸಿದರು.
ವೇದಿಕೆಯಲ್ಲಿ ಅತಿಥಿಗಳಾಗಿ ಬೋಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ, ಕಲಾ ಪೋಷಕ ಶ್ಯಾಮ್ ಎನ್. ಶೆಟ್ಟಿ, ಯಕ್ಷಗಾನದ ಹಿರಿಯ ಕಲಾವಿದ ಕೆ. ಕೆ. ಶೆಟ್ಟಿ, ದೇವಾಲಯ ಸಮಿತಿಯ ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ ಪಿ. ಶೆಟ್ಟಿ, ಸದಸ್ಯರಾದ ವಿಶ್ವನಾಥ್ ಎಸ್. ಶೆಟ್ಟಿ, ಪ್ರಭಾಕರ ಆಳ್ವ, ಯಕ್ಷಗಾನದ ಪ್ರಾಯೋಜಕರಾದ ಪ್ರವೀಣಾ ರಾಜೇಂದ್ರ ಶೆಟ್ಟಿ ದಂಪತಿ ಉಪಸ್ಥಿತರಿದ್ದರು. ದೇವಾಲಯದ ಗೌರವ ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್ ಸ್ವಾಗತಿಸಿದರು. ಮಹಮ್ಮದ್ ಗೌಸ್ ಅವರು ಅತಿಥಿಗಳನ್ನು ಗೌರವಿಸಿದರು.
ಉದ್ಯಮಿ ರಾಜೇಂದ್ರ ಶೆಟ್ಟಿ ಅವರ ವತಿಯಿಂದ ಹಾಸ್ಯ ಕಲಾವಿದರುಗಳಾದ ಹಳ್ಳಾಡಿ ಜಯರಾಮ್ ಶೆಟ್ಟಿ, ಸೀತಾರಾಮ್ ಕುಮಾರ್ ಕಟೀಲು ಅವರನ್ನು ಗಣ್ಯರ ಉಪಸ್ಥಿತಿಯಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಮೇಳದ ವತಿಯಿಂದ ಪ್ರವೀಣಾ ರಾಜೇಂದ್ರ ಶೆಟ್ಟಿ ದಂಪತಿಯನ್ನು ಗೌರವಿಸಲಾಯಿತು.
ದೇವಾಲಯ ಸಮಿತಿ ಸದಸ್ಯರು, ಸಿಬಂದಿ ವರ್ಗ, ಮಹಿಳಾ ಮಂಡಳಿಯ ಸದಸ್ಯೆಯರನ್ನು ಪುಷ್ಪಗುತ್ಛವನ್ನಿತ್ತು ಅಭಿನಂದಿಸಲಾಯಿತು.
ಸುರೇಶ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಯಕ್ಷ ಸೌರಭದ ಪ್ರವಾಸಿ ಮೇಳದ ಪ್ರಸಿದ್ಧ ಕಲಾವಿದರಿಂದ ರಾಜೇಂದ್ರ ಶೆಟ್ಟಿ ಅವರ ಸೇವಾರ್ಥಕವಾಗಿ ದಮಯಂತಿ ಪುನರ್ ಸ್ವಯಂವರ -ಶ್ರೀನಿವಾಸ
ಕಲ್ಯಾಣ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಕೊನೆಯಲ್ಲಿ ರಾಜೇಂದ್ರ ಶೆಟ್ಟಿ ಅವರ ವತಿಯಿಂದ ಅನ್ನದಾನ ನಡೆಯಿತು. ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.