ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯದ ವಾರ್ಷಿಕ ಕ್ರೀಡೋತ್ಸವ
Team Udayavani, Jan 30, 2018, 4:14 PM IST
ನವಿಮುಂಬಯಿ: ನಮ್ಮ ದೇಹದ ಸಮತೋಲನ ಕಾಪಾಡಲು ಕ್ರೀಡೆ ಅಗತ್ಯವಾಗಿದೆ. ಮಕ್ಕಳಿಗೆ ಶಿಕ್ಷಣ ಹೇಗೆ ಅಗತ್ಯವೋ ಹಾಗೆಯೇ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅಷ್ಟೇ ಅಗತ್ಯ. ಕ್ರೀಡೆ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ನಮ್ಮ ಆರೋಗ್ಯ ವೃದ್ಧಿಯಾಗುತ್ತದೆ. ಪ್ರಸಿದ್ಧ ಕ್ರೀಡಾಪಟು ತನಿಷ್ಕಾ ಶೆಟ್ಟಿಯ ಹಾಗೆ ನೀವೆಲ್ಲರೂ ಕ್ರೀಡೆಯಲ್ಲಿ ಭಾಗವಹಿಸಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಬೇಕು. ಮಕ್ಕಳನ್ನು ಆದಷ್ಟು ಮೊಬೈಲ್‌ನಿಂದ ದೂರ ಇಡಬೇಕು. ಇಂತಹ ಕ್ರೀಡಾಕೂಟಗಳಲ್ಲಿ ಮಕ್ಕಳು ಭಾಗವಹಿಸುವಂತೆ ಹಿರಿಯರು ಪ್ರೋತ್ಸಾಹಿಸಬೇಕು. ನಮ್ಮ ಜನ್ಮಭೂಮಿ, ಕಲಿತ ಶಾಲೆ ಹಾಗೂ ನಮ್ಮನ್ನು ಪ್ರೋತ್ಸಾಹಿಸಿದ ಸಂಘ-ಸಂಸ್ಥೆಗಳನ್ನು ಎಂದಿಗೂ ಮರೆಯಬಾರದು ಎಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ನುಡಿದರು.
ಜ. 28 ರಂದು ಬೆಳಗ್ಗೆ ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯದ ಆವರಣದಲ್ಲಿ, ಮಂದಿರದ ಅಂಗಸಂಸ್ಥೆ ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳದ ವತಿಯಿಂದ ಆಯೋಜಿಸಲಾಗಿದ್ದ 10ನೇ ವಾರ್ಷಿಕ ಕ್ರೀಡಾಕೂಟದ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದ ಕ್ರೀಡಾಳುಗಳಿಗೆ ಶುಭಹಾರೈಸಿದರು.
ಅತಿಥಿಗಳಾಗಿ ಮಂಡಳದ ಅಧ್ಯಕ್ಷ ನಂದಿಕೂರು ಜಗದೀಶ್ ಶೆಟ್ಟಿ, ಚಿತ್ರನಿರ್ಮಾಪಕ ಅರವಿಂದ ಸಿಂಗ್ ಚೌಹಾಣ್, ದೇವಾಲಯ ಸಮಿತಿಯ ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಮಂಡಳದ ಸದಸ್ಯರಾದ ಸತೀಶ್ ಎಸ್. ಪೂಜಾರಿ, ಪದ್ಮನಾಭ ಸಿ. ಶೆಟ್ಟಿ, ಉದ್ಯಮಿಗಳಾದ ಸುರೇಶ್ ಶೆಟ್ಟಿ, ಮೋಹನ್ ಶೆಟ್ಟಿ, ರಾಜೇಂದ್ರ ಶೆಟ್ಟಿ, ತುಳುಕೂಟ ಐರೋಲಿಯ ಅಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ, ಉಪ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಆರ್. ಶೆಟ್ಟಿ, ಕ್ರೀಡಾಪಟುಗಳಾದ ಸ್ವೀಕೃತ್ ಎಸ್. ಶೆಟ್ಟಿ, ಕು| ತನಿಷ್ಕಾ ಎಸ್. ಶೆಟ್ಟಿ ಅವರು ಉಪಸ್ಥಿತರಿದ್ದರು.
ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ಕು| ಮೈಥಿಲಿ, ಕು| ಅಶ್ನಾ ಮತ್ತು ಕು| ಸಾಕ್ಷಿ ಪ್ರಾರ್ಥನೆಗೈದರು. ಮಂಡಳದ ಅಧ್ಯಕ್ಷ ನಂದಿಕೂರು ಜಗದೀಶ್ ಶೆಟ್ಟಿ ಅವರು ಸ್ವಾಗತಿಸಿ ಮಾತನಾಡಿ, ದೇವಾಲಯದ ಅಧ್ಯಕ್ಷರಾದ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ದೇವಾಲಯ ದಿನದಿಂದ ದಿನಕ್ಕೆ ಪ್ರಗತಿಯ ಪಥದತ್ತ ಸಾಗುತ್ತಿದೆ. ಕಳೆದ 10 ವರ್ಷಗಳಿಂದ ಕ್ರೀಡೆಯನ್ನು ಪ್ರೋತ್ಸಾಹಿಸುತ್ತಾ ಬಂದಿದ್ದೇವೆ. ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ ಹೆಸರು ಗಳಿಸಬೇಕು ಎಂದು ನುಡಿದು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಗೌರವಾರ್ಪಣೆ, ಸಮ್ಮಾನ
ಅತಿಥಿ-ಗಣ್ಯರುಗಳನ್ನು ಮಂಡಳದ ಪದಾಧಿಕಾರಿಗಳು ಗೌರವಿಸಿದರು. ಕ್ರೀಡಾಪಟುಗಳಾದ ಸ್ವೀಕೃತ್ ಶೆಟ್ಟಿ ಮತ್ತು ತನಿಷ್ಕಾ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.
ಹರೀಶ್ ಶೆಟ್ಟಿ ನಲ್ಲೂರು, ತುಷಾರ್ ವಿ. ಶೆಟ್ಟಿ ಮತ್ತು ಚಿತ್ರನಟಿ ಪಾರ್ಥ್ ಚೌಹಾಣ್ ಅವರನ್ನು ಗೌರವಿಸಲಾಯಿತು. ಸುರೇಶ್ ಎಸ್. ಕೋಟ್ಯಾನ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಹರೀಶ್ ಪಡುಬಿದ್ರೆ ಅವರು ವಂದಿಸಿದರು. ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ಬಲೂನ್ ಹಾರಿಸುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು.
ವಿವಿಧ ವಯೋಮಿತಿಯವರಿಗೆ ವೈವಿಧ್ಯಮಯ ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪುರುಷರಿಗೆ ಹಗ್ಗಜಗ್ಗಾಟ, ವಾಲಿಬಾಲ್, ಕ್ರಿಕೆಟ್ ಮತ್ತು ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ತೆಂಗಿನ ಗರಿ ಹೆಣೆಯುವುದು ಇನ್ನಿತರ ಸ್ಪರ್ಧೆಗಳು ನಡೆಯಿತು.
ಹರೀಶ್ ಶೆಟ್ಟಿ ನಲ್ಲೂರು ಅವರ ವತಿಯಿಂದ ಬೆಳಗ್ಗೆಯ ಉಪಾಹಾರ, ಮಂಡಳದ ವತಿಯಿಂದ ಮಧ್ಯಾಹ್ನದ ಊಟ ಹಾಗೂ ತುಷಾರ್ ವಿ. ಶೆಟ್ಟಿ ಅವರ ವತಿಯಿಂದ ಸಂಜೆಯ ಉಪಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
ಮಂಡಳದ ಉಪಾಧ್ಯಕ್ಷರುಗಳಾದ ಸುರೇಶ್ ಎಸ್. ಕೋಟ್ಯಾನ್, ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶಂಕರ್ ಮೊಲಿ, ಜತೆ ಕಾರ್ಯದರ್ಶಿ ಹರೀಶ್ ಪಡುಬಿದ್ರೆ, ಕೋಶಾಧಿಕಾರಿ ಹರೀಶ್ ಶೆಟ್ಟಿ ನಲ್ಲೂರು, ಜತೆ ಕೋಶಾಧಿಕಾರಿ ರತ್ನಾ ಟಿ. ಗೌಡ, ಸಮಿತಿಯ ಸರ್ವ ಸದಸ್ಯರು, ಶ್ರೀ ಸಂತೋಷಿ ಮಾತಾ ದೇವಾಲಯ ಟ್ರಸ್ಟ್, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಮಿತಿಯ ಸದಸ್ಯರು, ಉಪಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಆರ್. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಪ್ರವೀಣ್ ಕೆ. ಶೆಟ್ಟಿ ಸಮಿತಿಯ ಸರ್ವ ಸದಸ್ಯರು, ಮಹಿಳಾ ಮಂಡಳಿಯ ಕಾರ್ಯಾಧ್ಯಕ್ಷೆ ಆಶಾ ವಿ. ಶೆಟ್ಟಿ ಮತ್ತು ಸರ್ವ ಸದಸ್ಯೆಯರು ಸಹಕರಿಸಿದರು.
ತೀರ್ಪುಗಾರರಾಗಿ ಶೇಖರ್ ಸತ್ತೀಕರ್ ಮತ್ತು ರಿತೇಶ್ ಬಿ. ಶೆಟ್ಟಿ ಸಹಕರಿಸಿದರು. ತಾಳಿಪಾಡಿಗುತ್ತು ಭಾಸ್ಕರ್ ಶೆಟ್ಟಿ, ಹರೀಶ್ ಪಡುಬಿದ್ರೆ, ಹರೀಶ್ ನಲ್ಲೂರು, ವಿದ್ಯಾ ಅಂಚನ್, ರಾಧಾ ಪೂಜಾರಿ, ಜಯಂತಿ ಪೂಜಾರಿ ಮೊದಲಾದವರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.