ಘಾಟ್‌ಕೋಪರ್‌ ಶ್ರೀ ಗೀತಾಂಬಿಕಾ ಮಂದಿರದ 21ನೇ ವಾರ್ಷಿಕ ಪ್ರತಿಷ್ಠಾ ವರ್ಧಂತ್ಯುತ್ಸವ


Team Udayavani, Jun 6, 2019, 5:01 PM IST

0506MUM18

ಮುಂಬಯಿ: ತುಳುನಾಡ ಜನತೆ ದೈವ-ದೇವರುಗಳ ಮೇಲೆ ನಂಬಿಕೆಯನ್ನಿಟ್ಟು ಆರಾಧಿಸಿ ಬದುಕು ಸಾಗಿಸುತ್ತಿದ್ದಾರೆ. ಆದ್ದರಿಂದಲೇ ದೈವ-ದೇವಸ್ಥಾನಗಳ ಅಭಿವೃದ್ಧಿ ಕಾರ್ಯಕ್ಕೆ ಕೋಟ್ಯಂತರ ರೂ. ಗಳನ್ನು ವ್ಯಯಿಸಿ ತುಳುನಾಡ ವೈಭವವನ್ನು ರೂಪಿಸುತ್ತಿದ್ದಾರೆ. ಎಂದು ಬಂಟರ ಸಂಘ ಮುಂಬಯಿ ಇದರ ಎಸ್‌. ಎಂ. ಶೆಟ್ಟಿ ಶೈಕ್ಷಣಿಕ ಸಂಸ್ಥೆಯ ಕಾರ್ಯಾಧ್ಯಕ್ಷ ಸಿಎ ಶಂಕರ ಬಿ. ಶೆಟ್ಟಿ ನುಡಿದರು.

ಜೂ. 4ರಂದು ಸಂಜೆ ಘಾಟ್ಕೊàಪರ್‌ ಪಶ್ಚಿಮದ ಅಸಲ್ಪಾದ ಶ್ರೀ ಗೀತಾಂಬಿಕಾ ಸೇವಾ ಸಮಿತಿ ಸಂಚಾಲಕತ್ವದ ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದ 21ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಸಂದರ್ಭದಲ್ಲಿ ನಡೆದ ದಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ದೈವ ದೇವರ ಮೇಲೆ ಅಪಾರ ಭಕ್ತಿ-ನಂಬಿಕೆ ಇರುವುದರಿಂದಲೇ ಎಲ್ಲಿ ತುಳುನಾಡ ಜನತೆ ನೆಲೆಸುತ್ತಾರೋ ಅಲ್ಲೂ ಧಾರ್ಮಿಕ ಕ್ಷೇತ್ರಗಳನ್ನು ನಿರ್ಮಿಸಿ ಭಕ್ತಿಯನ್ನು ವೃದ್ಧಿಸಿ ಅಭಿವೃದ್ಧಿಯನ್ನು ಕಾಣುತ್ತಿದಾxರೆ. ಆ ಮೂಲಕ ಸಾಧನೆಯನ್ನು ಮಾಡುತ್ತಾ ಜೀವನ ಪಾವನಗೊಳಿಸುತ್ತಾರೆ. ಮಾನಸಿಕ ನೆಮ್ಮದಿ ಹಾಗೂ ಆತ್ಮವಿಶ್ವಾಸದ ವೃದ್ಧಿಗೆ ಮನುಷ್ಯನಿಗೆ ದೇವಸ್ಥಾನಗಳ ಅಗತ್ಯವಿದೆ. ಅಂತಹ ಧಾರ್ಮಿಕ ಕೇಂದ್ರಗಳು, ದೇವಸ್ಥಾನಗಳ ಅಭಿವೃದ್ಧಿ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕು. ಮಂದಿರದ ಯೋಜಿತ ಕಾರ್ಯಯೋಜನೆಗಳು ಸಫಲತೆಯನ್ನು ಕಾಣಲಿ ಎಂದು ಹಾರೈಸಿದರು.

ಶ್ರೀ ಗೀತಾಂಬಿಕಾ ಸೇವಾ ಸಮಿತಿಯ ಅಧ್ಯಕ್ಷ ಕಡಂದಲೆ ಸುರೇಶ್‌ ಎಸ್‌.ಭಂಡಾರಿ ಅಧಕ್ಷತೆಯಲ್ಲಿ ನಡೆಸಲ್ಪಟ್ಟ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸೋನಿ ಸ್ಟೀಲ್ಸ್‌ ಸಂಸ್ಥೆಯ ಆಡಳಿತ ನಿರ್ದೇಶಕ ಪಾಂಡುರಂಗ ಎಸ್‌. ಶೆಟ್ಟಿ, ಶ್ರೀ ಜಗದಂಬಾ ದೇವಸ್ಥಾನ ಡೊಂಬಿವಲಿ ಇದರ ಕಾರ್ಯದರ್ಶಿ ರಾಜೇಶ್‌ ಕೋಟ್ಯಾನ್‌, ಶ್ರೀ ಗೀತಾಂಬಿಕಾ ಯಕ್ಷಗಾನ ಮಂಡಳಿಯ ಕಾ ರ್ಯದರ್ಶಿ ಮತ್ತು ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಸ್ಥಾಪಕಾಧ್ಯಕ್ಷ ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದು ಶುಭಹಾರೈಸಿದರು.

ಧಾರ್ಮಿಕ ಕಾರ್ಯಕ್ರಮವಾಗಿ ಮಂದಿರದಲ್ಲಿನ ಪ್ರತಿಷ್ಠಾಪಿತ ಗಣಪತಿ, ಈಶ್ವರ, ಆಂಜನೇಯ, ನಾಗದೇವರು, ರಕ್ತೇಶ್ವರಿ ಹಾಗೂ ಭದ್ರಕಾಳಿ ದೇವರಿಗೂ ವಿಶೇಷ ಪೂಜೆ ನಡೆಯಿತು. ಬ್ರಹ್ಮಶ್ರೀ ಶಂಕರನಾರಾಯಣ ತಂತ್ರಿ ಡೊಂಬಿವಲಿ ಅವರ ಪೌರೋಹಿತ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ಅದ್ಯಗಣ ಯಾಗ, ತೋರಣ ಮೂಹೂರ್ತ, ಪರಿವಾರ ದೇವತೆಗಳ ನವಕ ಕಲಶ ಹಾಗೂ ಶ್ರೀ ದೇವಿಗೆ 25 ಕಲಶಪೂರಣ, ಪಂಚಾಮೃತ ಅಭಿಷೇಕ, ಪರಿವಾರ ದೇವತೆಗಳ ಅಭಿಷೇಕ, ಶ್ರೀ ದೇವಿಗೆ ಪ್ರಧಾನ ಹೋಮ, ಪಲ್ಲಪೂಜೆ, ಪ್ರಧಾನ ಕಲಶಾಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ ಮತ್ತು ಅನ್ನ ಸಂತರ್ಪಣೆ ಇತ್ಯಾದಿಗಳು ನಡೆಯಿತು. ಸುರೇಶ್‌ ಎಸ್‌.ಭಂಡಾರಿ ಮತ್ತು ಶೋಭಾ ಸುರೇಶ್‌ ಭಂಡಾರಿ ದಂಪತಿ ಪೂಜಾಧಿಗಳ ಯಜಮಾನತ್ವ ವಹಿಸಿದ್ದರು.

ಮಂದಿರದ ಪ್ರಧಾನ ಅರ್ಚಕ ವಿದ್ವಾನ್‌ ರಘುಪತಿ ಭಟ್‌ ಉಡುಪಿ ಮತ್ತು ಸಹ ಪುರೋಹಿತರು ಪೂಜಾಧಿಗಳನ್ನು ನೆರವೇರಿಸಿದ್ದರು. ಅಧ್ಯಕ್ಷರು ಹಾಗೂ ಆರ್ಚಕರು ವಿಶೇಷವಾಗಿ ಉಪಸ್ಥಿತರಿದ್ದ ಬಂಟ್ಸ್‌ ಸಂಘ ಮುಂಬಯಿ ಇದರ ಜತೆ ಕೋಶಾಧಿಕಾರಿ ಗುಣಪಾಲ್‌ ಶೆಟ್ಟಿ ಐಕಳ, ಬೊಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ವಿ. ಶೆಟ್ಟಿ ಸೇರಿದಂತೆ ಅನೇಕ ಗಣ್ಯನ್ನು ಗೌರವಿಸಿದರು. ಶ್ರೀ ಗೀತಾಂಬಿಕಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಜೆ ದೇವಿ ದರ್ಶನ, ರಾತ್ರಿ ರಂಗಪೂಜೆ ನಂತರ ಉತ್ಸವ ಬಲಿ, ಪ್ರಸಾದ ವಿತರಣೆ. ಮಹಾ ಅನ್ನಸಂತಾರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್‌ ಪಿ. ಕೋಟ್ಯಾನ್‌, ಉಪಾಧ್ಯಕ್ಷ ಸತೀಶ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ್‌ ಪಿ. ಕೋಟ್ಯಾನ್‌, ಕೋಶಾಧಿಕಾರಿ ವಿಕ್ರಂ ಸುವರ್ಣ, ಶ್ರೀ ಗೀತಾಂಬಿಕಾ ಯಕ್ಷಗಾನ ಮಂಡಳಿ ಅಧ್ಯಕ್ಷ ಕರ್ನೂರು ಮೋಹನ್‌ ರೈ, ಸಂಚಾಲಕ ಸುನೀಲ್‌ ಅಮೀನ್‌ ಹಾಗೂ ಮಹಿಳಾ ಮಂಡಳಿ, ಪೂಜಾ ಸಮಿತಿ ಮತ್ತು ಶ್ರೀ ಗೀತಾಂಬಿಕಾ ಭಜನಾ ಸಮಿತಿಯ ಸದಸ್ಯರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು. 21ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಅಂಗವಾಗಿ ಜೂ. 8ರಂದು ಸಂಜೆ 6ರಿಂದ ದಿ| ರಮಾನಾಥ ಪಯ್ಯಡೆ ಸ್ಮರಣಾರ್ಥ ಗಂಗಾಧರ ಪಯ್ಯಡೆ ಪ್ರಾಯೋಜಕತ್ವದಲ್ಲಿ ಶ್ರೀ ಗೀತಾಂಬಿಕಾ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರಿಂದ “ಜಾಂಬಾವತಿ ಕಲ್ಯಾಣ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

ಶತಮಾನದ‌ ಹಿಂದೆ ಮುಂಂಬಯಿ ಸೇರಿದ ನಮ್ಮ ಪೂರ್ವಜರು ಒಳ್ಳೆಯ ಸದುದ್ದೇಶದಿಂದ ದೇವಸ್ಥಾನಗಳನ್ನು, ಧಾರ್ಮಿಕ ಕೇಂದ್ರಗಳನ್ನು ಕಟ್ಟಿ ಬೆಳೆಸಿದ್ದಾರೆ. ಶ್ರೀ ಗೀತಾಂಬಿಕಾ ಕ್ಷೇತ್ರಕ್ಕೆ ಸುಮಾರು ಐದೂವರೆ ದಶಕಗಳ ಇತಿಹಾಸವಿದೆ. ದೂರದೃಷ್ಟಿತ್ವವುಳ್ಳ ನಮ್ಮ ಹಿರಿಯರು ಸಂಘಟಿತರಾಗಿ ನಮ್ಮ ಧಾರ್ಮಿಕ ಪರಂಪರೆ, ಕಲೆ, ಸಂಸ್ಕೃತಿ ಉಳಿದು ಬೆಳೆಯಬೇಕೆಂಬ ಉದ್ದೇಶದಿಂದ ಶ್ರೀ ಗೀತಾಂಬಿಕೆಯ ಆರಾಧನೆಯೊಂದಿಗೆ ದೇವಸ್ಥಾನವನ್ನು ನಿರ್ಮಾಣ ಮಾಡಿದಾxರೆ. ಈ ಪರಿಸರದಲ್ಲಿ ಧಾರ್ಮಿಕ ಕೇಂದ್ರದೊಂದಿಗೆ ಯಕ್ಷಗಾನ ಮಂಡಳಿ, ಶಾಲೆಯನ್ನು ನಮ್ಮ ಹಿರಿಯರು ಕಟ್ಟಿ ಬೆಳೆಸಿ ಸಮಾಜಕ್ಕೆ ನೀಡಿದ್ದಾರೆ. ಅಂದು ನಮ್ಮ ಹಿರಿಯರು ಕಟ್ಟಿ ಬೆಳೆಸಿದ ದೇವಸ್ಥಾನಗಳು ಜೀರ್ಣಾವಸ್ಥೆಯಲ್ಲಿದ್ದಾಗ ಅದನ್ನು ದುರಸ್ತಿ ಇಲ್ಲವೇ ಜೀಣೊìàದ್ಧಾರ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದ ಕೆಲವೊಂದು ಅಭಿವೃದ್ಧಿಪರ ಕಾರ್ಯಗಳು ನಡೆಯಲಿವೆ. ಅದಕ್ಕೆ ಭಕ್ತರೆಲ್ಲರೂ ಸಹಕರಿಸಿ ಶ್ರೀ ಗೀತಾಂಬಿಕೆಯ ಅನುಗ್ರಹಕ್ಕೆ ಪಾತ್ರರಾಗಬೇಕು
-ಕಡಂದಲೆ ಸುರೇಶ್‌ ಭಂಡಾರಿ
ಅಧ್ಯಕ್ಷರು , ಶ್ರೀ ಗೀತಾಂಬಿಕಾ ಸೇವಾ ಸಮಿತಿ ಘಾಟ್‌ಕೋಪರ್‌

ಚಿತ್ರ-ವರದಿ : ರೊನಿಡಾ ಮುಂಬಯಿ.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.