ಗೋವಾ: ಗಡಿನಾಡಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ

ಕರ್ನಾಟಕ ಮುಖ್ಯಮಂತ್ರಿಗಳನ್ನು ನಾವು ಅಭಿನಂದಿಸಬೇಕು : ಡಾ.ಸಿ.ಸೋಮಶೇಖರ್

Team Udayavani, May 29, 2022, 7:04 PM IST

1-g

ಪಣಜಿ: ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಕರ್ನಾಟಕ ಸರ್ಕಾರವು ಇದಕ್ಕೆ ಸಕಾರಾತ್ಮಕವಾಗಿ ಸ್ಫಂದಿಸಿ ಪ್ರಸಕ್ತ ವರ್ಷದ ಕರ್ನಾಟಕದ ಆಯವ್ಯಯದಲ್ಲಿ ಕರ್ನಾಟಕ ಮುಖ್ಯಮಂತ್ರಿಗಳು ಕನ್ನಡ ಭವನ ನಿರ್ಮಾಣಕ್ಕೆ ಅನುದಾನ ಮೀಸಲಿಟ್ಟಿದ್ದಾರೆ. ಇದಕ್ಕಾಗಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳನ್ನು ನಾವು ಅಭಿನಂದಿಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಹೇಳಿದರು.

ವಾಸ್ಕೊದಲ್ಲಿ ಭಾನುವಾರ ಕರ್ನಾಟಕ ವಿದ್ಯಾವರ್ಧಕ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಅಖಿಲ ಗೋವಾ ಕನ್ನಡ ಮಹಾಸಂಘ ಇವರ ಸಂಯುಕ್ತ ಆಶ್ರಯದಲ್ಲಿ  ಆಯೋಜಿಸಿದ್ದ ” ಗಡಿನಾಡಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ” ಕಾರ್ಯಕ್ರಮದಲ್ಲಿ ಮಾತನಾಡಿ, ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಾಗ ನೀಡುವಂತೆ ಈ ಮೂಲಕ ಗೋವಾ ಸರ್ಕಾರವನ್ನು ಮನವಿ ಮಾಡುತ್ತೇನೆ. ಗೋವಾದಲ್ಲಿ ನಾಲ್ಕೈದು ಲಕ್ಷ ಜನ ಕನ್ನಡಿಗರಿದ್ದಾರೆ. ಆರ್ಥಿಕವಾಗಿ ಕನ್ನಡಿಗರು ಸಂಕಷ್ಟದಲ್ಲಿದ್ದಾರೆ. ಗೋವಾವನ್ನು ಕಟ್ಟಿದವರು ಕನ್ನಡಿಗರು. ಗೋವಾದಲ್ಲಿ ಬೆಸರು ಸುರಿಸಿ ದುಡಿಯುವವರು ಕನ್ನಡಿಗರು. ಗೋವಾದಲ್ಲಿ ಕನ್ನಡಿಗರ ರಕ್ಷಣೆ ಬಹಳ ಮುಖ್ಯ. ಕರ್ನಾಟಕದಲ್ಲಿ ನಾವು ಕೊಂಕಣಿ ಅಕಾಡಮಿ ಮಾಡಿದ್ದೇವೆ. ಕರ್ನಾಟಕ ಕೊಂಕಣಿ ಅಕಾಡಮಿಗೆ ನಮ್ಮ ಪ್ರಾಧಿಕಾರವೇ ಕಳೆದ ಒಂದು ವರ್ಷದಲ್ಲಿ 5 ಕೋಟಿ ರೂಗಳನ್ನು ನೀಡಿದೆ. ಗೋವಾದಲ್ಲಿಯೂ ಕನ್ನಡ ಸಾಹಿತ್ಯ ಅಕಾಡಮಿಯನ್ನು ಮಾಡಬೇಕು. ಕಾಸರಗೋಡಿನಲ್ಲಿಯೂ ಕಯ್ಯಾರ ಕಿಣ್ಯಣ್ಣ ರೈ ರವರ ಹೆಸರಿನಲ್ಲಿ ಸಾಹಿತ್ಯ ಅಕಾಡಮಿ ನಿರ್ಮಾಣ ಮಾಡಿ 2 ಕೋಟಿ ರೂಗಳನ್ನು ಅಲ್ಲಿನ ಸರ್ಕಾರ ನೀಡಿದೆ. ಅಂತೆಯೇ ಗೋವಾದಲ್ಲಿಯೂ ಕೂಡ ಗೋವಾ ಸರ್ಕಾರ ಕನ್ನಡ ಸಾಹಿತ್ಯ ಅಕಾಡಮಿಯನ್ನು ನಿರ್ಮಾಣ ಮಾಡಬೇಕು ಎಂದು ಡಾ.ಸಿ.ಸೋಮಶೇಖರ್ ಮನವಿ ಮಾಡಿದರು.

ಬೈನಾದಲ್ಲಿ ಕನ್ನಡಿಗರ ಮನೆ ತೆರವಾದಾಗ ಇಲ್ಲಿ ಮನೆ ಕಳೆದುಕೊಂಡ ಸಾವಿರಾರು ಕನ್ನಡಿಗರ ಕುಟುಂಬದ ಆಕ್ರಂದನವನ್ನು ನಾವು ಕಂಡಿದ್ದೇವೆ. ಹಿಂದಿನ ಸರ್ಕಾರಗಳು ಈ ಕನ್ನಡಿಗರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಿಕೊಡಲು ಪ್ರಯತ್ನ ನಡೆಸಿತ್ತು. ಪ್ರಸಕ್ತ ಸರ್ಕಾರ ಕೂಡ ಈ ಕನ್ನಡಿಗರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ಗಡಿನಾಡ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ .ಸಿ ಸೋಮಶೇಖರ್ ಆಗ್ರಹಿಸಿದರು.

ಕಾರ್ಯಕ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ವಾಸ್ಕೊ ಶಾಸಕ ದಾಜಿ ಸಾಲ್ಕರ್, ಗೋವಾದಲ್ಲಿ ಎಲ್ಲ ಕ್ಷೇತ್ರದಲ್ಲಿಯೂ ಕನ್ನಡಿಗರ ಯೋಗದಾನವಿದೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ಗೋವಾ ಸರ್ಕಾರದಿಂದ ಜಾಗ ಕೊಡಿಸಲು ಅಗತ್ಯ ಪ್ರಯತ್ನ ಮಾಡುತ್ತೇನೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಲೇ ಬೇಕು. ದೆಹಲಿಯಲ್ಲಿಯೂ ಗೋವಾ ಭವನವಿದೆ. ಅಂತೆಯೇ ಗೋವಾಕ್ಕೆ ಆಗಮಿಸುವ ಕನ್ನಡಿಗರಿಗೂ ಕೂಡ ಅನುಕೂಲದ ದೃಷ್ಠಿಯಿಂದ ಗೋವಾದಲ್ಲಿ ಕನ್ನಡ ಭವನದ ಅಗತ್ಯವಿದೆ. ನಾನು ಈ ಕುರಿತು ನಮ್ಮ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಧಾರವಾಡ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಕದ್ ಮಾತನಾಡಿ, ಗೋವಾದಲ್ಲಿ ಒಂದು ಕನ್ನಡ ಭವನ ನಿರ್ಮಾಣವಾಗಬೇಕು. ಕನ್ನಡಿಗರು ಮತ್ತು ಗೋವಾದ ಜನತೆ ಒಬ್ಬರೊಬ್ಬರು ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು. ವಿವಿಧೆಡೆಯ ಸಂಸ್ಕ್ರತಿಯನ್ನು ಕಾರ್ಯಕ್ರಮಗಳ ಮೂಲಕ ಮುಂದಿನ ಪೀಳಿಗೆಗೆ ಮುಂದುವರೆಸಿಕೊಂಡು ಹೋಗುವತಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ  ಉಪಸ್ಥಿತರಿದ್ದ ಕನ್ನಡ ಸಾಹಿತ್ಯ ಪರಿಷತ್ ಗೋವಾ ಅಧ್ಯಕ್ಷ ಸಿದ್ಧಣ್ಣ ಮೇಟಿ ಮಾತನಾಡಿ- ವಿಜಯಪುರ ಬಾಗಲಕೋಟೆಯ ಜನರು ಕಟ್ಟಡ ನಿರ್ಮಾಣದಂತಹ ಕೆಲಸ ಮಾಡಿದರೆ ಧಾರವಾಡಭಾಗದ ಜನರು ಗೋವಾದಲ್ಲಿ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ವೇದಿಕೆಯ ಮೇಲೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾದ ದಾಮೋದರ ಮಾವಜೊ,  ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರ್ ರೆಡ್ಡಿ,ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗೋವಾದ ವಿವಿಧ ಕನ್ನಡ ಸಂಘಟನೆಗಳ ಪದಾಧಿಕಾರಿಗಳು, ಕರ್ನಾಟಕ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಕನ್ನಡಿಗರು ಉಪಸ್ಥಿತರಿದ್ದರು. ಮಕ್ಕಳ ಸಾಹಿತ್ಯ ಪರಿಷತ್ತಿನ ಗೋವಾ ಘಟಕದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ನಂತರ “ಗಡಿನಾಡ ಕನ್ನಡಿಗರ ಸಮಸ್ಯೆಗಳು ಮತ್ತು ಸವಾಲುಗಳು” ಎಂಬ ವಿಷಯದ ಮೇಲೆ ಒಂದು ಅವಲೋಕನ ಕಾರ್ಯಕ್ರಮ ನಡೆಯಿತು. ಸಾಂಸ್ಕೃತಿಕಸಂಭ್ರಮ ಕಾರ್ಯಕ್ರಮ ನಡೆದು, ಸಂಜೆ 5 ಗಂಟೆಯಿಂದ ಕವಿಗೋಷ್ಠಿ, ಸಂಜೆ 6.30 ಕ್ಕೆ ಸಮಾರೋಪ ಸಮಾರಂಭ ನಡೆಯಿತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.