Goa; ವಿವಿಧ ನಗರಗಳಲ್ಲಿ ಕರವೇ ಪ್ರವೀಣಕುಮಾರ್ ಶೆಟ್ಟಿ ಬಣ ವಿಸ್ತರಣೆ
ಕನ್ನಡಿಗರಿಗೆ ಆಗುತ್ತಿರುವ ಸಮಸ್ಯೆ ಪರಿಹರಿಸಲು ಹೆಚ್ಚಿನ ಅನುಕೂಲ..
Team Udayavani, Oct 9, 2023, 9:48 PM IST
ಪಣಜಿ(ವಾಸ್ಕೊ): ಗೋವಾ ರಾಜ್ಯದ ವಿವಿಧ ನಗರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಕುಮಾರ್ ಶೆಟ್ಟಿ ಬಣ ಸಂಘಟನೆಯನ್ನು ವಿಸ್ತರಣೆ ಮಾಡಲಾಗುವುದು. ಇದರಿಂದಾಗಿ ಆಯಾ ಭಾಗದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸಲು ಇದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಕುಮಾರ ಶೆಟ್ಟಿ ಬಣದ ಗೋವಾ ರಾಜ್ಯಾಧ್ಯಕ್ಷ ಮಂಜು ನಾಟೀಕರ್ ನುಡಿದರು.
ಗೋವಾ ವಾಸ್ಕೊದ ಮುರ್ಗಾಂವ ಕ್ಷೇತ್ರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಘಟಕವನ್ನು ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉಧ್ಘಾಟನೆ ನೆರವೇರಿಸಿ ಮಂಜು ನಾಟೀಕರ್ ಮಾತನಾಡುತ್ತಿದ್ದರು. ಗೋವಾ ರಾಜ್ಯದ ಎಲ್ಲೆಡೆಯಿಂದ ಕನ್ನಡಿಗರಿಂದ ಕರ್ನಾಟಕ ರಕ್ಷಣಾ ವೇದಿಕೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಕ್ಟೋಬರ್ 22 ರಂದು ಗೋವಾ ವಾಸ್ಕೊದ ಬಿರ್ಲಾ ನಗರ ಘಟಕ ಸ್ಥಾಪನೆ ಮಾಡಲಾಗುವುದು. ಗೋವಾದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಸಂಘಟನೆ ಸೇರ್ಪಡೆಯಾಗಬೇಕು ಎಂದು ಮಂಜು ನಾಟೀಕರ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯ ಘಟಕದ ಕಾರ್ಯದರ್ಶಿ ಶಿವಾನಂದ ಮಸಬಿನಾಳ, ಮಹಾಂತೇಶ ಕಾರಗೇರಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಾಲ್ಮಿಕಿ, ಯುವ ಮೋರ್ಚಾ ಅಧ್ಯಕ್ಷ ಯಶವಂತ್ ಕಿಂಗ್, ಮಹಿಳಾ ಸಂಘಟನೆ ಮುಖಂಡರಾದ ಪಾರ್ವತಿ ಛಲವಾದಿ, ವೀರಶೈವ ಲಿಂಗಾಯತ ಸಮಾಜದ ಬಿರ್ಲಾ ಅಧ್ಯಕ್ಷ ರುದ್ರಯ್ಯಸ್ವಾಮಿ ಹಿರೇಮಠ, ರಮೇಶ ಗೌಡರ್, ಸಡಾ ನಗರದ ಕರವೇ ಮುಖಂಡ ಶಿವು ಛಲವಾಧಿ, ಸಂಗಮೇಶ ಹಗರಿ, ಬಸು,ಐಯ್ಯಪ್ಪ, ಲಕ್ಕಪ್ಪ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.