“ಗೋಕುಲ ಕಲಾಶ್ರೀ’ ತಾರಾ ಎಸ್‌. ರಾವ್‌ ನಿಧನ


Team Udayavani, Aug 23, 2017, 1:19 PM IST

22-Tara-B-Rao.jpg

ಮುಂಬಯಿ: ಬೆಂಗಳೂರಿನ ಟೂರಿಸ್ಟ್‌ ಹೊಟೇಲ್‌ನ  ಮಾಲಕ ಪಿ. ವಾದಿರಾಜ್‌ ಮತ್ತು ಜಯಲಕ್ಷ್ಮೀ ದಂಪತಿಯ  ಪುತ್ರಿ, ಮೂಲತಃ ಮಂಗಳೂರು ಸುರತ್ಕಲ್‌ ಬಾಳದ ಕಾಂಜೂರ್‌ ಮಾರ್ಗ್‌ ಪಶ್ಚಿಮದ ಗ್ರೇಟ್‌ ಈಸ್ಟರ್ನ್ ಗಾರ್ಡನ್ಸ್‌ ಅಪಾರ್ಟ್‌ಮೆಂಟ್‌ನ ನಿವಾಸಿ, ಮಯೂರಿ ನರ್ತಕಿ-ಅಪ್ರತಿಮ ಕಲಾವಿದೆ ಗೋಕುಲ ಕಲಾಶ್ರೀ ಬಿರುದಾಂಕಿತೆ  ತಾರಾ ಎಸ್‌. ರಾವ್‌ (55) ಅವರು ಅಸೌಖ್ಯದಿಂದ ಆ. 22ರಂದು ಭಾಂಡೂಪ್‌ ಪಶ್ಚಿಮದ ಸೆಂಟ್ರಲ್‌ ಹೆಲ್ತ್‌ ಹೋಮ್‌ನಲ್ಲಿ ನಿಧನರಾದರು. ಮೃತರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಕರ್ನಾಟಕ ಸಂಗೀತ, ಭರತನಾಟ್ಯ ಮತ್ತು ಓರಿಯಂಟಲ್‌ ನೃತ್ಯಗಳಲ್ಲಿ ವಿಶೇಷ  ಪರಿಣತಿಯನ್ನು ಹೊಂದಿರುವ ಇವರು ಅಂದಿನ ರಾಷ್ಟ್ರಪತಿ ಸಂಜೀವ ರೆಡ್ಡಿ,  ಕರ್ನಾಟಕದ ಮುಖ್ಯಮಂತ್ರಿ ದೇವರಾಜ ಅರಸು, ವೀರಪ್ಪ ಎಂ. ಮೊಲಿ ಮತ್ತು ಹಲವಾರು ಮಠಾಧೀಶರಿಂದ ಪುರಸ್ಕೃತರಾಗಿದ್ದಾರೆ. ತನ್ನ 19ನೆ ವಯಸ್ಸಿನಿಂದಲೇ  ದೆಹಲಿಯಲ್ಲಿ  11ವರ್ಷಗಳ ತನಕ ನೆಲೆಸಿ ಅಲ್ಲಿಯೂ ತನ್ನ ಕಲಾ ಸೇವೆ ಮಾಡಿದ ಹೆಗ್ಗಳಿಕೆ ಇವರಿಗಿದೆ. ಕಳೆದ 22 ವರ್ಷಗಳಿಂದ ಮುಂಬಯಿಯಲ್ಲಿ ನೆಲೆಸಿ, ಶಿಕ್ಷಕಿ, ಸಂಗೀತ-ಭಜನಾ ಗಾಯಕಿಯಾಗಿ, ಸಮಾಜ ಸೇವಕಿಯಾಗಿ, ಉತ್ತಮ ಸಂಘಟಕಿಯಾಗಿ  ಪ್ರಸ್ತುತ ನಗರದ  ಪ್ರತಿಯೊಂದು ತುಳು ಕನ್ನಡ ಸಂಘ ಸಂಸ್ಥೆಗಳಲ್ಲಿ ಚಿರಪರಿಚಿತರಾಗಿದ್ದಾರೆ.  ಮುಂಬಯಿಯ ಪ್ರತಿಷ್ಠಿತ ಬಿಎಸ್‌ಕೆಬಿ  ಅಸೋಸಿಯೇಶನ್‌ ಗೋಕುಲ  ಇದರ ಸಕ್ರಿಯ ಸದಸ್ಯೆಯಾಗಿದ್ದು, ಹಲವಾರು ವರ್ಷಗಳ ತನಕ ಕಾರ್ಯಕಾರೀ ಸಮಿತಿಯಲ್ಲಿದ್ದುಕೊಂಡು ಗೋಕುಲ ಕಲಾವೃಂದದ  ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಕಲಾವಿದರನ್ನು ಸಂಘಟಿಸಿ ಉತ್ತಮ ಕಾರ್ಯಕ್ರಮಗಳನ್ನು ನೀಡುವಲ್ಲಿ ಸಹಕರಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ಗೋಕುಲ ಕಲಾವೃಂದ  ಭಜನಾ ಮಂಡಳಿಯನ್ನು ಸ್ಥಾಪಿಸಿ ಮಹಿಳೆಯರನ್ನು ಸಂಘಟಿಸಿ, “ಮನೆ ಮನೆಯಲ್ಲಿ ಭಜನೆ’ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರುವು ದಲ್ಲದೆ, ಮುಂಬಯಿಯ ಸಂಘ ಸಂಸ್ಥಗಳು ಆಯೋಜಿಸುತ್ತಿರುವ  ಭಜನಾ ಸ್ಪರ್ಧೆಯಲ್ಲಿ  ಸ್ಪರ್ಧಿಸುವಂತೆ ಮಹಿಳೆಯರನ್ನು   ಹುರಿದುಂಬಿಸಿದವರು. ಇವರು ತಮ್ಮ ಬಹುಮುಖ  ಪ್ರತಿಭೆಗೆ  “ಗೋಕುಲ ಕಲಾಶ್ರೀ’ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ, ಸಮ್ಮಾನಗಳಿಗೆ ಭಾಜನ ರಾಗಿದ್ದಾರೆ. ರಂಗಭೂಮಿ ಕಲಾವಿದೆಯಾಗಿ ಪ್ರಸಿದ್ಧ ದಿಗªರ್ಶಕರ ನಿರ್ದೇಶನದಲ್ಲಿ ಹಲವಾರು ನಾಟಕಗಳಲ್ಲಿ ಪಾತ್ರವಹಿಸಿ “ಉತ್ತಮ ನಟಿ’ ಪ್ರಶಸ್ತಿ ಪಡೆದಿದ್ದಾರೆ.

ಕೇವಲ ಸಂಗೀತ, ನೃತ್ಯ ನಾಟಕಗಳು ಮಾತ್ರವಲ್ಲದೆ ಗಂಡು ಕಲೆಯಾದ  ಯಕ್ಷಗಾನದಲ್ಲಿಯೂ  ತರಬೇತಿ ಪಡೆದು  ಮುಂಬಯಿಯ ಪ್ರತಿಷ್ಠಿತ ಯಕ್ಷಗಾನ ನಿರ್ದೇಶಕರ ನಿರ್ದೇಶನದಲ್ಲಿ  ಹಲವಾರು ಯಕ್ಷಗಾನ ಪ್ರಸಂಗಗಳಲ್ಲಿ ಭಾಗವಹಿಸಿ ಜನಪ್ರಿಯತೆಯನ್ನು ಗಳಿಸಿದ್ದಾರೆ. ಯಕ್ಷಗಾನದ ವೇಷ ಧರಿಸಿ ಮುಂಬಯಿ ಮ್ಯಾರಥಾನ್‌ ಹಾಗೂ ಬೆಳಗಾವಿಯಲ್ಲಿ ನಡೆದ ಎರಡನೇ ವಿಶ್ವ ಕನ್ನಡ ಸಮ್ಮೇಳನ ವೇದಿಕೆಯಲ್ಲಿಯೂ ಮಿಂಚಿದ್ದಾರೆ. ದೇಶ-ವಿದೇಶಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ ಹೆಗ್ಗಳಿಕೆ ಇವರದ್ದು.

ಗಣ್ಯರ ಸಂತಾಪ 
ತಾರಾ ರಾವ್‌ ಅವರ ಅಗಲುವಿಕೆಗೆ ಅವರ ಅಪಾರ ಸಂಖ್ಯೆಯ ಹಿತೈಷಿಗಳು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಬಿಎಸ್‌ಕೆಬಿಎ ಸಂಸ್ಥೆಯ ಅಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌ ಕಟೀಲು, ಗೌರವ ಪ್ರಧಾನ ಕಾರ್ಯದರ್ಶಿ ಅನಂತ ಪದ್ಮನಾಭ ಕೆ. ಪೋತಿ ಗೋಪಾಲಕೃಷ್ಣ ಪಬ್ಲಿಕ್‌ ಟ್ರಸ್ಟ್‌ನ ವಿಶ್ವಸ್ತ ಮಂಡಳಿ, ಗೋಕುಲವಾಣಿ ಮಾಸಿಕದ ಗೌರವ ಸಂಪಾದಕ ಡಾ| ವ್ಯಾಸರಾಯ ನಿಂಜೂರು, ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ,  ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌, ಪೂರ್ವಾಧ್ಯಕ್ಷ ಎಲ್‌. ವಿ. ಅಮೀನ್‌, ಭಾರತ್‌ ಬ್ಯಾಂಕ್‌ನ ಉಪಕಾರ್ಯಾಧ್ಯಕ್ಷೆ ನ್ಯಾಯವಾದಿ  ರೋಹಿಣಿ ಜೆ. ಸಾಲ್ಯಾನ್‌, ಮಾಜಿ ಕಾರ್ಯಾಧ್ಯಕ್ಷ ವಿ. ಆರ್‌. ಕೋಟ್ಯಾನ್‌, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಅಧ್ಯಕ್ಷ ಸುರೇಂದ್ರ ಕುಮಾರ್‌ ಹೆಗ್ಡೆ, ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ್‌ ಎಲ್‌. ಶೆಟ್ಟಿ, ಮಹಿಳಾ ವಿಭಾಗಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ, ತೀಯಾ ಸಮಾಜ, ಮುಂಬಯಿ ಇದರ ಅಧ್ಯಕ್ಷ ಚಂದ್ರಶೇಖರ್‌ ಆರ್‌. ಬೆಳ್ಚಡ, ರಾಮರಾಜ ಕ್ಷತಿಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ರಾಜ್‌ಕುಮಾರ್‌ ಕಾರ್ನಾಡ್‌, ಭಂಡಾರಿ ಮಹಾ ಮಂಡಲ ಸ್ಥಾಪಕಾಧ್ಯಕ್ಷ ಕಡಂದಲೆ ಸುರೇಶ್‌ ಭಂಡಾರಿ, ಎಚ್‌. ಬಿ. ಎಲ್‌. ರಾವ್‌, ಬಿ. ರಮಾನಂದ ರಾವ್‌, ಕಲೀನ, ಐ. ಕೆ. ಪ್ರೇಮಾ ಎಸ್‌.ರಾವ್‌, ಕೃಷ್ಣ ಆಚಾರ್ಯ, ಪೆರ್ಣಂಕಿಲ ಹರಿದಾಸ್‌ ಭಟ್‌, ಎಸ್‌.ಎನ್‌ ಉಡುಪ, ಕೈರಬೆಟ್ಟು ವಿಶ್ವನಾಥ ಭಟ್‌, ಪೇಜಾವರ ಮಠ ಮುಂಬಯಿ ಶಾಖೆಯ ರಾಮದಾಸ ಉಪಾಧ್ಯಾಯ ರೆಂಜಾಳ, ಪ್ರಕಾಶ ಆಚಾರ್ಯ ರಾಮಕುಂಜ, ಅದಮಾರು ಮಠದ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ ಪಡುಬಿದ್ರಿ, ವಿ. ರಾಜೇಶ್‌, ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ಅಜೆಕಾರು ಬಾಲಕೃಷ್ಣ ಶೆಟ್ಟಿ, ಪಂಡಿತ್‌ ನವೀನ್‌ಚಂದ್ರ ಆರ್‌. ಸನೀಲ್‌, ಹಿರಿಯ ಕಲಾವಿದರಾದ ಮೋಹನ್‌ ಮಾರ್ನಾಡ್‌, ಚಂದ್ರಪ್ರಭಾ ಸುವರ್ಣ, ಜ್ಯೂಲಿಯೆಟ್‌ ಪಿರೇರಾ,  ಚಂದ್ರವತಿ ದೇವಾಡಿಗ, ಸುಧಾ ಶೆಟ್ಟಿ, ವಿಜಯಲಕ್ಷ್ಮೀ ಆರ್‌. ಪೂಜಾರಿ, ಕೆ. ಭೋಜರಾಜ್‌, ಕನ್ನಡ ವಿಭಾಗ ಮುಂಬಯಿ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ, ಡಾ| ಸುನೀತಾ ಎಂ. ಶೆಟ್ಟಿ, ತೋನ್ಸೆ ಸಂಜೀವ ಪೂಜಾರಿ, ಎನ್‌. ಟಿ. ಪೂಜಾರಿ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.