ಗೋರೆಗಾಂವ್‌ ಕರ್ನಾಟಕ ಸಂಘದಲ್ಲಿ  ಅಡಿಗರ ಸಂಸ್ಮರಣೆ 


Team Udayavani, Jan 5, 2018, 12:24 PM IST

02-Mum02a.jpg

ಮುಂಬಯಿ: ನವ್ಯದ ಕಾಲವನ್ನು ಪ್ರಾರಂಭಿಸಿದವರು ಗೋಕಾಕರು.  ಅದನ್ನು ಮುಂದುವರಿಸಿದವರು ಅಡಿಗರು. ಅಡಿಗರ ಕಾವ್ಯದಲ್ಲಿ ನೆಲದ ಮಹತ್ವವನ್ನು ಕಾಣಬಹುದು. ಅವರ ಕವಿತೆಗಳಲ್ಲಿ ನಾಡು-ನುಡಿ ಹಾಗೂ ನೆಲದ ಪ್ರೀತಿಯನ್ನು ಅರುಹಿದ್ದಾರೆ ಎಂದು ನಗರದ ವಿಮರ್ಶಕ, ಆರ್‌. ಜೆ. ಕಾಲೇಜು ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ಡಾ| ಕೆ. ರಘುನಾಥ್‌ ಅವರು ನುಡಿದರು.

ಮಯೂರ ವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ ಹಾಗೂ ಕರ್ನಾಟಕ ಸಂಘ ಗೋರೆಗಾಂವ್‌ ಅವರ ಜಂಟಿ ಆಯೋಜನೆ ಯಲ್ಲಿ  ಗೋರೆಗಾಂವ್‌ ಕರ್ನಾಟಕ ಸಂಘದ ಸಭಾಗೃಹದಲ್ಲಿ ನಡೆದ ಅಡಿಗರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ  ವಿಶೇಷ ಉಪನ್ಯಾಸ ನೀಡಿದ ಅವರು, ಈ ಸಂಸ್ಮರಣ ಕಾರ್ಯಕ್ರಮ ಅರ್ಥಪೂರ್ಣವಾದದ್ದು. ಮಯೂರವರ್ಮ ಶಾಸ್ತ್ರ ತ್ಯಾಗಮಾಡಿ ಶಸ್ತ್ರ  ಕೈಗೆತ್ತಿಕೊಂಡವನು, ಅಡಿಗರು ಅದೇ ಸಾಲಿನವರು ತಮ್ಮ ಬರಹದಿಂದ ನಿಜದ ನೆಲೆಯನ್ನು ಅರುಹಿದ ಅಡಿಗರ ಕವನಗಳನ್ನು ಸುಶ್ರಾವ್ಯವಾಗಿ ಹಾಡಿ ದವರನ್ನು ಅಭಿನಂದಿಸಿದ ಡಾ| ರಘುನಾಥರು, ಅಡಿಗರ ಕಾವ್ಯ ಪ್ರಪಂಚದ ವಿಸ್ತಾರವನ್ನು ರಾಮಾಯಣದ ಉದಾಹರಣೆ ಯೊಂದಿಗೆ ಪರಿಚಯಿಸಿ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡದ ಸೇನಾನಿ ಎಸ್‌. ಕೆ. ಸುಂದರ್‌ ಅವರು ಮಾತನಾಡಿ,  ಅಡಿಗರ ಜನ್ಮ ಶತಮಾನೋತ್ಸವ ಸಂಸ್ಮರಣ ಕಾರ್ಯಕ್ರಮದ ಅಧ್ಯಕ್ಷತೆಯು ಒಂದು ಸುಯೋಗವಾಗಿದೆ. ಪ್ರತಿಷ್ಠಾನವು ಕಳೆದ ಒಂಬತ್ತು ವರ್ಷಗಳಿಂದ ಅರ್ಥಪೂರ್ಣವಾದ ಸಾಹಿತ್ಯ, ಸಾಂಸ್ಕೃತಿಕ ಹಾಗು ಐತಿಹಾಸಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುವುದನ್ನು ಉಲ್ಲೇಖೀಸಿದರಲ್ಲದೇ. ಅಡಿಗರ ಮೊಗೆರಿ ಮನೆಗೆ ತಾವು ಭೇಟಿ ನೀಡಿರುವುದನ್ನು ಪ್ರಸ್ತಾಪಿಸಿ,  ತೆಂಗು-ಕಂಗುಗಳಿಂದ ಕಂಗೊಳಿಸುವ ಆ ಸುಂದರ ಪರಿಸರವನ್ನು ನೆನಪಿಸಿದರಲ್ಲದೇ  ಕಾರ್ಯಕ್ರಮದ ಉದ್ದೇಶವನ್ನು ಶ್ಲಾಘಿಸಿದರು.

ವಿದ್ಯಾ ದೇಶಪಾಂಡೆ, ಸೀಮಾ ಕುಲಕರ್ಣಿ, ವಾಸಂತಿ ಕೋಟೆಕಾರ್‌, ದಾûಾಯಿಣಿ ಯಡಹಳ್ಳಿ, ಶೈಲಜಾ ಹೆಗಡೆ ಕಾವ್ಯಗಳನ್ನು ಸುಶ್ರಾವ್ಯವಾಗಿ ಹಾಡಿದರು. ಕು| ಅನಘಾ, ಸುದುಘಾ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಹೇಮಾ ಸದಾನಂದ ಅಮೀನ್‌ ನಿರೂಪಿಸಿದರು. ತನುಜಾ  ಭಟ್‌ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಷ್ಠಾನದ ಕಾರ್ಯದರ್ಶಿ ವಿಶ್ವನಾಥ ದೊಡ್ಮನೆ ವಂದಿಸಿದರು.

ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಿದ ಗೋಪಾಲ್‌ ಉಳ್ಳೂರು ನೆರುಲ್‌ ಅವರ ಸಹಕಾರವನ್ನು ಸ್ಮರಿಸಲಾಯಿತು.  ಹಿರಿಯ ಸಾಹಿತಿ ಆಲುಮೇಲು ಅಯ್ಯರ್‌, ಶಕುಂತಲಾ ಪ್ರಭು, ಗಿರಿಜಾ ಶಾಸ್ತ್ರಿ ಸೇರಿದಂತೆ ಹಿರಿ-ಕಿರಿಯ ಸಾಹಿತ್ಯಾಸಕ್ತರು ಭಾಗವಹಿಸಿ ಅಡಿಗರ ಶ್ರೇಷ್ಠತೆಯನ್ನು ನೆನಪಿಸಿದರು.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.