“ಕಲ್ಯಾಣ್‌-ಡೊಂಬಿವಲಿಯತ್ತ ಸರಕಾರದ ಗಮನ ಅಗತ್ಯ’

Team Udayavani, Jul 7, 2020, 5:30 PM IST

“ಕಲ್ಯಾಣ್‌-ಡೊಂಬಿವಲಿಯತ್ತ ಸರಕಾರದ ಗಮನ ಅಗತ್ಯ’

ಮುಂಬಯಿ, ಜು. 6: ಕಲ್ಯಾಣ್‌-ಡೊಂಬಿವಲಿ ಪ್ರದೇಶದಲ್ಲಿ ವೇಗವಾಗಿ ಹೆಚ್ಚುತ್ತಿರುವ ಕೋವಿಡ್‌ -19 ಬಗ್ಗೆ ಮಹಾರಾಷ್ಟ್ರ ಸರಕಾರ ತತ್‌ಕ್ಷಣ ಗಮನ ಹರಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ದೇವೇಂದ್ರ ಫ‌ಡ್ನವಿಸ್‌ ಹೇಳಿದ್ದಾರೆ.

ಪರಿಸ್ಥಿತಿಯ ಬಗ್ಗೆ ವಿಶ್ಲೇಷಿಸಲು ಫ‌ಡ್ನವೀಸ್‌ ಅವರು ಕಲ್ಯಾಣ್‌-ಡೊಂಬಿವಲಿಯ ಕೋವಿಡ್‌ -19 ಆಸ್ಪತ್ರೆಗಳಿಗೆ ಭೇಟಿ ನೀಡಿದರು. ಕಲ್ಯಾಣ್‌ ಪಶ್ಚಿಮದ ಹೋಲಿಕ್ರಾಸ್‌ ಕೋವಿಡ್‌ -19 ಆಸ್ಪತ್ರೆಗೆ ಭೇಟಿ ನೀಡಿದ ಅವರು ರೋಗಿಗಳ ಯೋಗಕ್ಷೇಮ ವಿಚಾರಿಸಿ ವೈದ್ಯರೊಂದಿಗೆ ಚರ್ಚಿಸಿದರು. ಕಲ್ಯಾಣ್‌ -ಡೊಂಬಿವಲಿ ಮುನ್ಸಿಪಲ್‌ ಕಾರ್ಪೊರೇಷನ್‌ (ಕೆಡಿಎಂಸಿ) ಶನಿವಾರ 555 ಹೊಸ ಪ್ರಕರಣ ಗಳನ್ನು ದಾಖಲಿಸಿದ್ದು, ಒಟ್ಟು ಪಾಸಿಟಿವ್‌ ಪ್ರಕರಣಗಳ ಸಂಖ್ಯೆ 8,604 ಕ್ಕೆ ಏರಿಕೆಯಾಗಿದೆ. ಪ್ರತಿ ದಿನವೂ 400-500 ಪ್ರಕರಣಗಳು ದಾಖಲಾಗುತ್ತಿರುವುದು ಆತಂಕತದ ವಿಷಯವಾಗಿದೆ. ಈಗ ಇದರ ಬಗ್ಗೆ ಎಚ್ಚರಿಕೆ ವಹಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಲ್ಯಾಣ್‌-ಡೊಂಬಿವಲಿಯಲ್ಲಿನ ಕೋವಿಡ್‌ -19 ಪ್ರಕರಣಗಳು ನಿಯಂತ್ರಣಕ್ಕೆ ಬರುವುದಿಲ್ಲ. ಕಡಿಮೆ ಮಾನವಶಕ್ತಿಯೊಂದಿಗೆ, ನಾಗರಿಕ ಸಂಸ್ಥೆಯು ಅಸ್ತಿತ್ವದಲ್ಲಿರುವ ಸಾಕಷ್ಟುಮೂಲಸೌಕರ್ಯ ಹೊಂದಿರದ ಆಸ್ಪತ್ರೆಗಳಲ್ಲಿ ರೋಗಿಗಳನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾಗರಿಕ ಸಂಸ್ಥೆಗೆ ಹೆಚ್ಚುವರಿ ಮಾನವಶಕ್ತಿಯನ್ನು ಒದಗಿಸಬಹುದೇ ಎಂಬುವುದನ್ನು ರಾಜ್ಯ ಸರಕಾರವು ಪರಿಶೀಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವಿಸ್‌ ಹೇಳಿದರು.

27 ಗ್ರಾಮಗಳ ಕುರಿತು ಮಹಾರಾಷ್ಟ್ರ ಸರಕಾರದ ಇತ್ತೀಚಿನ ನಿರ್ಧಾರದ ಕುರಿತು ಮಾತನಾಡಿದ ಅವರು, ರಾಜ್ಯವು ಇಡೀ 27 ಹಳ್ಳಿಗಳಿಗೆ ವಿಭಜನೆಯಾಗದಂತೆ ನಾಗರಿಕ ಸಂಸ್ಥೆಯನ್ನು ಪರಿಗಣಿಸಬೇಕಾಗಿತ್ತು. ಕೋವಿಡ್‌-19 ಅನ್ನು ತಡೆಗಟ್ಟಲು ರಾಜ್ಯವು ಉತ್ತಮವಾಗಿ ಯೋಜನೆ ರೂಪಿಸಬೇಕಾಗಿದೆ. 27 ಹಳ್ಳಿಗಳ ಬಗ್ಗೆ ನಿರ್ಧಾರವನ್ನು ಜಾರಿಗೆ ತರಬೇಕು. ಇಲ್ಲವಾದಲ್ಲಿ ಭವಿಷ್ಯದಲ್ಲಿ ಇದು ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಡಲಿದೆ ಎಂದು ಎಚ್ಚರಿಕೆ ನೀಡಿದರು.

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಕಲ್ಯಾಣ್‌-ಡೊಂಬಿವಲಿ ಮಹಾನಗರ ಪಾಲಿಕೆ(ಕೆಡಿಎಂಸಿ) ಯ ಚುನಾವಣೆಯ ಹಿನ್ನೆಲೆಯಲ್ಲಿ, ಕಳೆದ ತಿಂಗಳು ಮಹಾರಾಷ್ಟ್ರ ಸರಕಾರವು 18 ಗ್ರಾಮಗಳಿಗೆ ಪ್ರತ್ಯೇಕ ಪುರಸಭೆ ರಚಿಸುವ ಅಧಿಸೂಚನೆಯನ್ನು ಜಾರಿಗೊಳಿಸಿದ್ದರೆ, ಉಳಿದಒಂಬತ್ತು ಗ್ರಾಮಗಳು ಕೆಡಿಎಂಸಿಯೊಂದಿಗೆ ಉಳಿಯಲಿವೆ. ಈ ಒಂಬತ್ತು ಗ್ರಾಮದ ಗ್ರಾಮಸ್ಥರು ಅಧಿಸೂಚನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಡಿಎಂಸಿಯಿಂದ ಬೇರ್ಪಡಿಸುವಂತೆ ಒತ್ತಾಯಿಸಿದ್ದಾರೆ. ಈ 27 ಗ್ರಾಮಗಳನ್ನು ಈ ಹಿಂದೆ 2015 ರಲ್ಲಿ ನಡೆದ ನಾಗರಿಕ ಚುನಾವಣೆಗೆ ಮುನ್ನ ಕೆಡಿಎಂಸಿಗೆ ಸೇರಿಸಲಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.