ಶಿಕ್ಷಣದೊಂದಿಗೆ ಸುಸಂಸ್ಕೃತರಾಗಿ ಬೆಳೆಯಿರಿ: ಭಾಸ್ಕರ್ ಶೆಟ್ಟಿ
Team Udayavani, Feb 26, 2020, 6:10 PM IST
ಥಾಣೆ, ಫೆ. 25: ಶ್ರೀ ಆದಿಶಕ್ತಿ ಕನ್ನಡ ಮಾಧ್ಯಮಿಕ ಶಾಲೆಯ ಎಸ್ ಎಸ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವು ಫೆ. 14 ರಂದು ಶಾಲಾ ಸಭಾಗೃಹದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಆದಿಶಕ್ತಿ ಕನ್ನಡ ಸಂಘ ಮತ್ತು ಶಾಲೆಯ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಅವರು ವಹಿಸಿ ಮಾತನಾಡಿ, ನಿಮಗೆ ನಮ್ಮ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಸಂಸ್ಕಾರ ದೊರೆತಿದೆ. ಶಿಕ್ಷಕರಿಂದ ಕಲಿತ ಪಾಠಗಳನ್ನು ಉತ್ತಮ ರೀತಿಯಲ್ಲಿ ಮನದಟ್ಟು ಮಾಡಿಕೊಂಡು ಇನ್ನುಳಿದ ಸಮಯವನ್ನು ವ್ಯಯ ಮಾಡದೆ ಶಾಲೆಗೆ ಕೀರ್ತಿ ತರಬೇಕು ಎಂದು ನುಡಿದರು.
ಶ್ರೀ ಆದಿಶಕ್ತಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಜಯರಾಮ ಜಿ. ಶೆಟ್ಟಿ ಅವರು ಮಾತನಾಡಿ, ಪ್ರಯತ್ನವೇ ಜೀವನದ ಯಶಸ್ಸಿನ ಗುಟ್ಟು. ಸ್ವಪ್ರಯತ್ನದಿಂದ ಪ್ರಾಮಾಣಿಕವಾಗಿ ಕಲಿತು ಜೀವನದಲ್ಲಿ ಸಾಧನೆ ಮಾಡಬೇಕು ಎಂದು ನುಡಿದರು. ಇನ್ನೋರ್ವ ಮಾಜಿ ಅಧ್ಯಕ್ಷ ಶಿಮಂತೂರು ಶಂಕರ್ ಶೆಟ್ಟಿ ಅವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭಹಾರೈಸಿ, ಶೇ. 100 ಫರಿತಾಂಶ ತಂದು ಮುಂದಿನ ಪೀಳಿಗೆಗೆ ಆದರ್ಶರಾಗಬೇಕು ಎಂದು ಹಾರೈಸಿದರು.
ಸಂಘದ ಜತೆ ಕೋಶಾಧಿಕಾರಿ ಏಕನಾಥ್ ಕೈಂದರ್ ಅವರು ಮಾತನಾಡಿ, ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸುತ್ತಾ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭಹಾರೈಸಿದರು. ಮಾಧ್ಯಮಿಕ ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ನಳಿನಾ ಶೆಟ್ಟಿ, ಸಹ ಶಿಕ್ಷಕರಾದ ಪ್ರಮೋದಾ ಮಾಡಾ, ವೆಂಕಟರಮಣ ಶೆಣೈ, ಮಮತಾ ಶೆಟ್ಟಿ, ಸಂತೋಷ್ ದೊಡ್ಮನಿ, ಪ್ರಕಾವ್ ಚಿಂತಾಮಣಿ ಇವರು ಮಾತನಾಡಿ ಶುಭಹಾರೈಸಿದರು.
ವೇದಿಕೆಯಲ್ಲಿ ಸಂಘದ ಗೌರವ ಕಾರ್ಯದರ್ಶಿ ವಾದಿರಾಜ್ ಶೆಟ್ಟಿ ಉಪಸ್ಥಿತರಿದ್ದರು. 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಘದ ಅಧ್ಯಕ್ಷ ಭಾಸ್ಕರ್ ಎಂ. ಶೆಟ್ಟಿ ಅವರು ಲೇಖನಿಯನ್ನು ವಿತರಿಸಿ ಶುಭಹಾರೈಸಿದರು. ಎಸ್‌ಎಸ್‌ಸಿ ವಿದ್ಯಾರ್ಥಿಗಳು ಶಾಲೆಗೆ ಕಿರುಕಾಣಿಕೆಯನ್ನು ನೀಡಿದರು. ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಎಂಟನೇ ತರಗತಿಯ ವಿದ್ಯಾರ್ಥಿ ಕರಿನಾ ರಾಥೋಡ್ ಸ್ವಾಗತಿಸಿದರು. 9 ನೇ ತರಗತಿಯ ವಿದ್ಯಾರ್ಥಿಗಳಾದ ವಿಜಯ್ ರಾಥೋಡ್ ಮತ್ತು ರಾಹುಲ್ ರಾಥೋಡ್ ಅವರು ಕಾರ್ಯಕ್ರಮ ನಿರ್ವಹಿಸಿದರು. 8 ನೇ ತರಗತಿಯ ಕು| ಶ್ವೇತಾ ಮೇಲ್ಕೇರಿ ವಂದಿಸಿದರು. ಕೊನೆಯಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.