ಜಿಎಸ್‌ಬಿ ಮಂಡಲ ಡೊಂಬಿವಲಿ: ಲಕ್ಷ ತುಳಸಿ ಅರ್ಚನೆ
Team Udayavani, Jun 5, 2018, 11:38 AM IST
ಡೊಂಬಿವಲಿ: ಜಿ. ಎಸ್. ಬಿ ಮಂಡಲ ಡೊಂಬಿವಲಿ ವತಿಯಿಂದ ಲಕ್ಷ ತುಳಸಿ ಅರ್ಚನೆ ಕಾರ್ಯಕ್ರಮವು ಜೂ. 3 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಅಧಿಕ ಮಾಸದ ಪ್ರಯುಕ್ತ ಸಮಾಜ ಕಲ್ಯಾಣಕ್ಕಾಗಿ ಲಕ್ಷ ತುಳಸಿ ಅರ್ಚನೆ ಮತ್ತು ಇನ್ನಿತರ ಪೂಜೆಗಳನ್ನು ಹಮ್ಮಿಕೊಳ್ಳಲಾಗಿದತ್ತು. ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಪೂಜನೆ ಮತ್ತು ಪಂಚಾಂಮೃತ ಅಭಿಷೇಕ ನಡೆಯಿತು. ನಂತರ ಶ್ರೀ ರಾಮಚಂದ್ರ ದೇವರ ಸಾನಿಧ್ಯದಲ್ಲಿ ಸಮಾಜ ಭಾಂದವರು ಶ್ರೀ ವಿಷ್ಣು ಸಹಸ್ರ ನಾಮ, ಶ್ರೀ ರಾಮ ಸಹಸ್ರ ನಾಮ ಲಕ್ಷ ತುಳಸಿ ಅರ್ಚನೆ ನಡೆಸಿದರು. ವೇದಮೂರ್ತಿ ಮೋಹನದಾಸ್ ಭಟ್ ಇವರ ಮಾರ್ಗದರ್ಶನ ಹಾಗೂ ವೇದ ಮೂರ್ತಿ ರಾಘವೇಂದ್ರ ಭಟ್ ಕಾರ್ಕಳ ನೇತೃತ್ವದಲ್ಲಿ ಕಾರ್ಯಕ್ರಮ ವಿಧಿವತ್ತಾಗಿ ನಡೆಯಿತು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ಮನೋಹರ್ ಪೈ, ಕಾರ್ಯಕಾರಿ ಸಮಿತಿಯ ಸದಸ್ಯರು, ಡೊಂಬಿವಲಿ ಮತ್ತು ಕಲ್ಯಾಣ್‌ನ ಸಮಾಜ ಭಾಂದವರು, ಸಮಾಜದ ವಿವಿಧ ಸಂಘಟನೆಗಳ ಪದಾ
ಧಿಕಾರಿಗಳು, ಸದಸ್ಯರು, ಸ್ಥಳೀಯ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿ ಗಳು, ಸಮಾಜ ಸೇವಕರು, ಸಮಾಜ ಬಾಂಧವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ
Bajpe: ಇನ್ಮುಂದೆ ದೀಪಗಳಿಂದ ಬೆಳಗಲಿದೆ ವಿಮಾನ ನಿಲ್ದಾಣ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.