ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಗುರುಪೂರ್ಣಿಮೆ
Team Udayavani, Aug 1, 2018, 2:50 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಮತ್ತು ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಹಾಗೂ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಇದರ ಸಂಯುಕ್ತ ಆಶ್ರಯದಲ್ಲಿ 19 ನೇ ವರ್ಷದ ಗುರುಪೂರ್ಣಿಮೆ ಆಚರಣೆಯು ಜು. 27 ರಂದು ಸಂಜೆ ಕುರ್ಲಾ ಪೂರ್ವ ಬಂಟರ ಭವನದಲ್ಲಿ ಶ್ರೀ ಮುಕ್ತಾನಂದ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾ ನಂದ ಸ್ವಾಮೀಜಿ ಅವರು ಜ್ಯೋತಿ ಪ್ರಜ್ವಲಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸಾಧ್ವಿ ಮಾತಾನಂದಮಯೀ ಅವರು ಉಪಸ್ಥಿತರಿದ್ದರು. ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಇದರ ಅಧ್ಯಕ್ಷ ನ್ಯಾಯವಾದಿ ಕೃಷ್ಣ ಶೆಟ್ಟಿ, ಗುರುಪೂರ್ಣಿಮೆ ಉತ್ಸವದ ರೂವಾರಿ ಪಿ. ಧನಂಜಯ ಶೆಟ್ಟಿ ಅವರು ಮಹಾಪೂಜೆಯ ಆರತಿ ಬೆಳಗಿದರು. ಶ್ರೀ ಗುರುದೇವ ಸೇವಾ ಬಳಗ ಮುಂಬಯಿ, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಬಳಗದವರಿಂದ ಭಜನ ಕಾರ್ಯಕ್ರಮ ಮತ್ತು ಗಾಯಕ ಸುರೇಶ್ ಶೆಟ್ಟಿ ಬಳಗದವರಿಂದ ಭಕ್ತಿಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಬಂಟರ ಸಂಘದ ಪದಾಧಿಕಾರಿಗಳು, ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಶ್ರೀ ಗುರುದೇವ ಸೇವಾ ಬಳಗ, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಶೆಟ್ಟಿ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.