ಎಸ್.ಎಂ.ಶೆಟ್ಟಿ ಕಾಲೇಜಿಗೆ ಹೆಲ್ದೀ ವರ್ಕ್ ಪ್ಲೇಸ್ ಪ್ರಶಸ್ತಿ
Team Udayavani, Dec 5, 2017, 4:17 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಪ್ರತಿಷ್ಠಿತ ಎಸ್. ಎಂ. ಶೆಟ್ಟಿ ವಿಜ್ಞಾನ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕಾಲೇಜಿಗೆ ಆರೋಗ್ಯ ವರ್ಲ್ಡ್-ಎನ್‌ಜಿಓ ಸಂಸ್ಥೆಯ ಪ್ರತಿಷ್ಠಿತ ವಾರ್ಷಿಕ ಹೆಲ್ದೀ ವರ್ಕ್ ಪ್ಲೇಸ್-2017 ಪ್ರಶಸ್ತಿ ಲಭಿಸಿದೆ.
ನ. 9 ರಂದು ಬೆಂಗಳೂರಿನ ವಿವಾಂತ ತಾಜ್‌ನಲ್ಲಿ ಜರಗಿದ ಸಮಾರಂಭದಲ್ಲಿ ಆರೋಗ್ಯ ವಲ್ x ಟ್ರಸ್ಟ್ ಕಾರ್ಯಾಧ್ಯಕ್ಷ ಡಾ| ನಳಿನಿ ಸಾಲಿಗ್ರಾಮ ಹಾಗೂ ಗಣ್ಯರು ಬಂಟರ ಸಂಘ ಎಸ್. ಎಂ. ಶೆಟ್ಟಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ್ ಶೆಟ್ಟಿ ಅವರಿಗೆ ಕಾಲೇಜಿನ ಪರವಾಗಿ ಪ್ರಶಸ್ತಿ ಪ್ರದಾನಿಸಿದರು.
ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹೆಸರಾಂತ ಉತ್ಪಾದನಾ ಕಂಪೆನಿಗಳು, ಸಾಮಾಜಿಕ ಸಂಸ್ಥೆಗಳು, ಸಾಫ್ಟ್‌ವೇರ್ ಕಂಪೆನಿಗಳು, ಶಿಕ್ಷಣ ಸಂಸ್ಥೆಗಳು ಹೀಗೆ ಸುಮಾರು 50 ಸಂಸ್ಥೆಗಳ ಈ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ಪಾಲ್ಗೊಂಡಿದ್ದವು. ಇದೇ ಸಂದರ್ಭದಲ್ಲಿ ಚರ್ಚಾಗೋಷ್ಠಿ, ಅನುಭವಗಳ ಹಂಚಿಕೆಯನ್ನು ನಡೆಸಲಾಯಿತು.
ಯಾವುದೇ ಸಂಸ್ಥೆಯು ಆರೋಗ್ಯ ಪೂರ್ಣವಾಗಿ ಬೆಳೆಯಬೇಕಾದರೆ ಮಾಲಕರು ಮತ್ತು ಸಿಬಂದಿಗಳ ಆರೋಗ್ಯಪೂರ್ಣ ಸಂಬಂಧ ಅಗತ್ಯವಿರುತ್ತದೆ. ಕೆಲಸ ಕಾರ್ಯಗಳ ಒತ್ತಡದಿಂದಾಗಿ ಇಂದು ಮಾನಸಿಕ ಅಸಮತೋಲನ, ಆತಂಕ, ಖನ್ನತೆ, ರಕ್ತದೊತ್ತಡ, ಡಯಾ ಬಿಟೀಸ್ ಮೊದಲಾದ ಆತಂಕಕಾರಿ ಬೆಳವಣಿಗೆಗಳು ಸಾಮಾನ್ಯವಾಗಿವೆ. ಅದನ್ನು ತಡೆಗಟ್ಟುವಲ್ಲಿ ಸಂಸ್ಥೆಯ ಮಾಲಕರು ಸಿಬಂದಿಗಳೊಂದಿಗೆ ಅನ್ಯೋನ್ಯತೆಯಿಂದ ಇರಬೇಕಾಗದ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಆರೋಗ್ಯ ವರ್ಲ್ಡ್ ಎನ್‌ಜಿಓ ಸಂಸ್ಥೆ ಈ ಸಂಬಂಧ ಉತ್ತಮ ಕಾರ್ಯನಿರ್ವಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.