ಹೆಗ್ಗಡೆ ಸೇವಾ ಸಂಘ ಮುಂಬಯಿ: ವಾರ್ಷಿಕ ಶ್ರೀ ಹನುಮಾನ್‌ ಜಯಂತಿ ಉತ್ಸವ

Team Udayavani, Apr 21, 2019, 4:39 PM IST

2004MUM06A

ನವಿಮುಂಬಯಿ: ನಗರದ ಪ್ರತಿಷ್ಠಿತ ಜಾತೀಯ ಸಂಸ್ಥೆಯಲ್ಲೊಂದಾದ ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಆಶ್ರಯದಲ್ಲಿ ಎ. 19 ಅಪರಾಹ್ನ 3ರಿಂದ ಐರೋಲಿಯ ಸೆಕ್ಟರ್‌ 15ರ ಗುರುದ್ವಾರದ ಸಮೀಪವಿರುವ ಹೆಗ್ಗಡೆ ಭವನದ ಸಭಾಂಗಣದಲ್ಲಿ ಸಮಾಜದ ಕುಲದೇವರಾದ ಶ್ರೀ ಹನುಮಾನ್‌ ಜಯಂತಿ ಮಹೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಅಪರಾಹ್ನ 3ರಿಂದ ದೇವತಾ ಪ್ರಾರ್ಥನೆ ಮತ್ತು ಕಲಶ ಪ್ರತಿಷ್ಠೆ, ಅಪರಾಹ್ನ 3.30ಕ್ಕೆ ಶ್ರೀ ಶನೀಶ್ವರ ಭಜನಾ ಮಂಡಳಿ ನೆರೂಲ್‌ ಇವರ ಬಳಗದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಜೆ 5ರಿಂದ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ನೆರವೇರಿತು. ಹೆಗ್ಗಡೆ ಸೇವಾ ಸಂಘದ ಸಂತೋಷ್‌ ಹೆಗ್ಡೆ ಮತ್ತು ಪ್ರಮೀಳಾ ಎಸ್‌. ಹೆಗ್ಡೆ ದಂಪತಿ ವಿವಿಧ ಪೂಜಾ ಕೈಂಕರ್ಯಗಳ ಯಜಮಾನತ‌Ìವನ್ನು ವಹಿಸಿ ಸಹಕರಿಸಿದರು.

ಪುರೋಹಿತ ರಮಾಕಾಂತ್‌ ಕುಂಜರಾಯ ಅವರ ಪೌರೋಹಿ ತ್ಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಗ್ಗಡೆ ಸೇವಾ ಸಂಘದ ವತಿಯಿಂದ ಅಧ್ಯಕ್ಷ ವಿಜಯ್‌ ಬಿ. ಹೆಗ್ಡೆ, ಗೌರವಾಧ್ಯಕ್ಷ ಸಂಜೀವ ಪಿ. ಹೆಗ್ಡೆ, ಉಪಾಧ್ಯಕ್ಷ ಸುರೇಶ್‌ ಎಸ್‌. ಹೆಗ್ಡೆ, ಗೌರವ ಪ್ರಧಾನ ಕಾರ್ಯದರ್ಶಿ ಶಂಕರ್‌ ಆರ್‌. ಹೆಗ್ಡೆ, ಕೋಶಾಧಿಕಾರಿ ರಮೇಶ್‌ ಎಂ. ಹೆಗ್ಡೆ, ಜೊತೆ ಕಾರ್ಯದರ್ಶಿ ರವಿ ಎಸ್‌. ಹೆಗ್ಡೆ, ಜೊತೆ ಕೋಶಾಧಿಕಾರಿ ಚಂದ್ರಶೇಖರ್‌ ಬಿ. ಹೆಗ್ಡೆ ಮತ್ತು ಆಡಳಿತ ಮಂಡಳಿ ಸದಸ್ಯರು ಮಹಿಳಾ ವಿಭಾಗದವರು, ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು.

ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ ಡಾ| ಸುರೇಂದ್ರ ಕುಮಾರ್‌ ಹೆಗ್ಡೆ, ಐರೋಲಿ ತುಳುಕೂಟದ ಅಧ್ಯಕ್ಷ ಕೆ. ಕೆ. ಹೆಬ್ಟಾರ್‌ ಅವರು ಉಪಸ್ಥಿತರಿದ್ದರು. ರಂಗಕರ್ಮಿ ಅನಿಲ್‌ ಕುಮಾರ್‌ ಹೆಗ್ಡೆ ಅವರಿಂದ ಶೃಂಗರಿಸಲ್ಪಟ್ಟ ದೇವರ ಮಂಟಪ ಭಕ್ತಾದಿಗಳನ್ನು ಆಕರ್ಷಿಸಿತು. ಹೆಗ್ಗಡೆ ಸೇವಾ ಸಂಘದ ಮಾಜಿ ಅಧ್ಯಕ್ಷರುಗಳಾದ ವಿ. ಎಸ್‌. ಹೆಗ್ಡೆ ಮತ್ತು ರತ್ನಾಕರ ಹೆಗ್ಡೆ ಅವರು ಉಪಸ್ಥಿತರಿದ್ದರು.
ಸಂಜೆ 5.30ರಿಂದ ರಾತ್ರಿ 8ರ ವರೆಗೆ ತವರೂರ ಬಹುಮುಖ ಪ್ರತಿಭಾನ್ವಿತ, ನಾಮಾಂಕಿತ ಕಲಾವಿದ, ಹರಿದಾಸ ಪುಷ್ಕಲ್‌ ಕುಮಾರ್‌ ತೋನ್ಸೆ ಇವರಿಂದ ಮತ್ತು ಬಳಗದ ಸದಸ್ಯರ ಕೂಡುವಿಕೆಯಲ್ಲಿ ಸೀತಾ-ಸ್ವಯಂವರ ಹರಿಕಥಾಮೃತ ಪ್ರಸ್ತುತಗೊಂಡಿತು. ಕಾರ್ಯಕ್ರಮದ ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಇದೇ ವೇಳೆ ಮಹಿಳಾ ವಿಭಾಗದವರ ಆಶ್ರಯದಲ್ಲಿ ಉಮಾ ಕೆ. ಶೆಟ್ಟಿ ಅವರ ನೇತೃತ್ವದ ವೈಶಾಲಿ ಸಿಲ್ಕ್ ಸಾರಿ ಇವರ ದಕ್ಷಿಣ ಭಾರತೀಯ ಸೀರೆಗಳ ಮಾರಾಟ ಮತ್ತು ಪ್ರದರ್ಶನ ಕಾರ್ಯಕ್ರಮ ಜರಗಿತು. ಬೆಳಗ್ಗೆ 11ರಿಂದ ರಾತ್ರಿ 9ರ ವರೆಗೆ ಈ ಸೀರೆಗಳ ಮಾರಾಟ ಮತ್ತು ಪ್ರದರ್ಶನವು ಜರಗಿದ್ದು, ದಕ್ಷಿಣ ಭಾರತೀಯ ಸಿಲ್ಕ… ಸೀರೆಗಳು, ಡ್ರೆಸ್‌ಪೀಸ್‌ಗಳು, ಕಾಂಜೀವರಂ ಸಿಲ್ಕ್, ಕಾಟನ್‌ ಇನ್ನಿತರ ಸೀರೆಗಳನ್ನು ಪ್ರದರ್ಶನ ಮತ್ತು ಮಾರಾಟದಲ್ಲಿ ಇಡಲಾಗಿತ್ತು.

ಸಂಘದ ಆಶ್ರಯದಲ್ಲಿ ಜರಗಿದ ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಮಹಿಳಾ ವಿಭಾಗದವರ ಸಂಪೂರ್ಣ ಮುಂದಾಳತ್ವದಲ್ಲಿ ನಡೆದ ಸೀರೆಗಳ ಮಾರಾಟ ಮತ್ತು ಪ್ರದರ್ಶನ ಕಾರ್ಯಕ್ರಮದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು, ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಸಮಾಜ ಬಾಂಧವರಲ್ಲದೆ, ಸ್ಥಳೀಯ ವಿವಿಧ ಜಾತೀಯ, ಕನ್ನಡಪರ ಹಾಗೂ ಧಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು, ಮಹಿಳಾ ವಿಭಾಗದವರು, ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ದಾನಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.