ಹೆಗ್ಗಡೆ ಸೇವಾ ಸಂಘ ಮುಂಬಯಿ 58ನೇ ವಾರ್ಷಿಕೋತ್ಸವ ಸಂಭ್ರಮ


Team Udayavani, Jan 23, 2019, 3:51 PM IST

8.jpg

ನವಿಮುಂಬಯಿ:ಯುವ ವಿಭಾಗವು ಸಕ್ರಿಯವಾದಾಗ ಸಂಘ-ಸಂಸ್ಥೆಗಳು ಬೆಳೆಯಲು ಸಾಧ್ಯವಾಗುತ್ತದೆ. ಹೆಗ್ಗಡೆ ಸೇವಾ ಸಂಘದ ಯುವ ವಿಭಾಗದವರು ಸಂಘದ ಕಾರ್ಯಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಇದರಿಂದ ಸಂಘಟನೆ ಬಲಗೊಳ್ಳಲು ಸಾಧ್ಯವಿದೆ. ಮುಂಬರುವ ದಿನಗಳಲ್ಲಿ ಹೆಗ್ಗಡೆ ಭವನದ ದಶಮಾನೋತ್ಸವ ಸಂಭ್ರಮವು ನಡೆಯಲಿದ್ದು, ಇದರ ಯಶಸ್ವಿಗೆ ಎಲ್ಲರು ಸಹಕರಿಸಬೇಕು ಎಂದು ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ವಿಜಯ ಬಿ. ಹೆಗ್ಡೆ ನುಡಿದರು.

ಜ. 20 ರಂದು ಐರೋಲಿಯ ಹೆಗ್ಗಡೆ ಭವನದಲ್ಲಿ ನಡೆದ ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ 58 ನೇ ವಾರ್ಷಿಕೋತ್ಸವ ಸಂಭ್ರಮದ ಅಧ್ಯಕ್ಷತೆ ವಹಿಸಿ,  ಯುವ ವಿಭಾಗದ ಹೆಗ್ಡೆ ವಿವಾಹ ಡಾಟ್‌ಕಂಗೆ ಚಾಲನೆ ನೀಡಿ  ಮಾತನಾಡಿದ ಅವರು, ಇದರ ಸದುಪಯೋಗವನ್ನು ಸಮಾಜ ಬಾಂಧವರು ಪಡೆಯಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ  ಕಟ್ಟಡ ನಿರ್ಮಾಣ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಲಯನ್‌ ಗೋಪಾಲ್‌ ಎಸ್‌. ಹೆಗ್ಡೆ ಅವರು ಮಾತನಾಡಿ, ನಮ್ಮ ಸಮಾಜದ ಹಿರಿಯರು ಕಂಡ ಕನಸು ಇಂದು  ನನಸಾಗಿದೆ. 58 ವರ್ಷಗಳ ಇತಿಹಾಸವನ್ನು ಹೊಂದಿರುವ ಹೆಗ್ಗಡೆ ಸಂಘವು ಸಮಾಜದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆದಿರುವುದು ಸಂತೋಷದ ಸಂಗತಿಯಾಗಿದೆ. ನಮ್ಮ ಸಮಾಜ ಬಾಂಧವರು ಮುಂಬಯಿಯಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದರೂ ಸುಂದರವಾದ ಭವನವನ್ನು ನಿರ್ಮಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದ್ದೇವೆ ಎಂದು ನುಡಿದರು.

ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಂಡ ಹೆಗ್ಗಡೆ ಸೇವಾ ಸಂಘ ಬೆಂಗಳೂರು ಇದರ ಉಪಾಧ್ಯಕ್ಷೆ ಶೈಲಜಾ ಉದಯ್‌ ಹೆಗ್ಡೆ   ಇವರು ಮಾತನಾಡಿ, ಮುಂಬಯಿ ಹೆಗ್ಗಡೆ ಸಮಾಜದ ಕಾರ್ಯಸ್ವರೂಪವನ್ನು ಕಂಡಾಗ ಹೆಮ್ಮೆಯಾಗುತ್ತಿದೆ. ಶಿಸ್ತುಬದ್ಧ, ಅಚ್ಚುಕಟ್ಟಾಗಿ ನಡೆಯುವ ಇಲ್ಲಿನ ಕಾರ್ಯಕ್ರಮಗಳು ಮಾದರಿಯಾಗಿವೆ. ಬೆಂಗಳೂರಿನಲ್ಲೂ ಭವನ ನಿರ್ಮಾಣದ ಕನಸು ನಮ್ಮಲ್ಲಿದ್ದು, ಸದ್ಯದಲ್ಲೇ ನನಸಾಗಲಿದೆ. ಇದಕ್ಕೆ ಮುಂಬಯಿಗರ ಸಹಕಾರ ಅಗತ್ಯವಾಗಿದೆ  ಎಂದು ಹೇಳಿದರು.

ದಕ್ಷಿಣ ಕನ್ನಡ ಜಿÇÉಾ ಹೆಗ್ಗಡೆ ಸಮಾಜ ಸಂಘ  ಮೂಡುಬಿದ್ರಿ ಇದರ ಕಾರ್ಯದರ್ಶಿ ಪ್ರಣಿಲ್‌ ಹೆಗ್ಡೆ ಅವರು ಮಾತನಾಡಿ, ಊರಿನ ಹೆಗ್ಡೆ ಸಮಾಜದ ಸಂಘ-ಸಂಸ್ಥೆಗಳಿಗೆ ಮುಂಬಯಿಗರ ಸಹಕಾರ ಸದಾಯಿದೆ. ಇಲ್ಲಿಯ ಕಾರ್ಯಚಟುವಟಿಕೆಗಳನ್ನು ಕಂಡಾಗ ಹೆಮ್ಮೆಯಾಗುತ್ತಿದೆ ಎಂದು  ನುಡಿದರು.

ಸಮಾರಂಭದಲ್ಲಿ ಸಂಘದ ಹಿರಿಯ ಸದಸ್ಯರುಗಳಾದ ಹೆಗ್ಗಡೆ ಸೇವಾ ಸಂಘದ ಉಪಾಧ್ಯಕ್ಷ ಮನ್ಮಥ್‌ ಜಿ. ಹೆಗ್ಡೆ,  ಉದ್ಯಮಿ, ಹಿರಿಯ ಸದಸ್ಯ ರವಿ ಡಿ. ಹೆಗ್ಡೆ,  ದಕ್ಷಿಣ ಕನ್ನಡ ಜಿÇÉಾ ರಾಜ್ಯೋತ್ಸವ ಸಾಧನಾ ಪ್ರತಿಭಾ ಪುರಸ್ಕಾರ ಪಡೆದ ಬಾಲ ಪ್ರತಿಭೆಗಳಾದ ಕು| ಕುಮಾರಿ ದ್ರಿಶ್ಯಾ  ದಯಾನಂದ್‌ ಹೆಗ್ಡೆ ಮತ್ತು ಕುಮಾರಿ ಧನ್ಯಾ ಧನಂಜಯ್‌ ಹೆಗ್ಡೆ ಇವರನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತು.

ವೇದಿಕೆಯಲ್ಲಿ  ಗೌರವಾಧ್ಯಕ್ಷ ಸಂಜೀವ ಹೆಗ್ಡೆ, ಉಪಾಧ್ಯಕ್ಷ ಸುರೇಶ್‌ ಎಸ್‌. ಹೆಗ್ಡೆ, ಕಾರ್ಯದರ್ಶಿ  ಶಂಕರ ಹೆಗ್ಡೆ, ಕೋಶಾಧಿಕಾರಿ  ರಮೇಶ್‌  ಹೆಗ್ಡೆ ಅವರು ಉಪಸ್ಥಿತರಿದ್ದರು. ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ಕಾರ್ಯದರ್ಶಿ ಶಂಕರ ಹೆಗ್ಡೆ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ವಿಶ್ವನಾಥ ಹೆಗ್ಡೆ, ಸುಜಾತಾ ಸದಾಶಿವ ಹೆಗ್ಡೆ, ಭಾರತಿ ಮೋಹನ್‌ದಾಸ್‌ ಹೆಗ್ಡೆ ಅತಿಥಿಗಳನ್ನು ಪರಿಚಯಿಸಿದರು. ರಂಗನಟ ಅನಿಲ್‌ ಹೆಗ್ಡೆ ಸಮ್ಮಾನ ಪತ್ರ ವಾಚಿಸಿದರು. ಜತೆ ಕಾರ್ಯದರ್ಶಿ ರವಿ ಎಸ್‌. ಹೆಗ್ಡೆ ಹೆರ್ಮುಂಡೆ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ರಮೇಶ್‌ ಎಂ. ಹೆಗ್ಡೆ ವಂದಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಬೆಳಗ್ಗೆ ಪುರೋಹಿತ ರಮಾಕಾಂತ್‌ ಕುಂಜಿತ್ತಾಯ ಇವರ ನಿರ್ದೇಶನದಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಿತು. ಪೂಜಾ ಕಾರ್ಯಕ್ರಮದ ನಂತರ ಮಹಿಳೆಯರಿಂದ ಅರಸಿನ ಕುಂಕುಮ ಕಾರ್ಯಕ್ರಮ, ಸದಸ್ಯ ಬಾಂಧವರು, ಮಕ್ಕಳು, ಸದಸ್ಯೆಯರಿಂದ ಸಾಂಸ್ಕೃತಿಕ ವೈವಿಧ್ಯ, ಮಧ್ಯಾಹ್ನ ರಾಜೇಶ್‌ ಆಚಾರ್ಯ ಪರ್ಕಳ  ರಚಿಸಿರುವ ಈ ಪೊರ್ಲು ತೂವೊಡಿc  ಎಂಬ ತುಳು ಸಾಮಾಜಿಕ ಹಾಸ್ಯಮಯ ನಾಟಕವನ್ನು ಖ್ಯಾತ ರಂಗ ನಟ ನಿರ್ದೇಶಕ ಮನೋಹರ ಶೆಟ್ಟಿ ನಂದಳಿಕೆ   ಇವರ ನಿರ್ದೇಶನದಲ್ಲಿ ಸಂಘದ ಸದಸ್ಯರು ಹಾಗೂ ಮುಂಬಯಿಯ ಖ್ಯಾತ ಅತಿಥಿ ಕಲಾವಿದರ ಸಹಕಾರದೊಂದಿಗೆ  ಪ್ರದರ್ಶನಗೊಂಡಿತು. ಸದಸ್ಯ ಬಾಂಧವರು, ಸಮಾಜ ಬಾಂಧವರು, ತುಳು-ಕನ್ನಡಿಗರು  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ  ಶಶಿಧರ ಎಸ್‌. ಹೆಗ್ಡೆ, ಜೊತೆ ಕಾರ್ಯದರ್ಶಿ ಹಾಗೂ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ  ರವಿ ಎಸ್‌. ಹೆಗ್ಡೆ, ಜೊತೆ ಕೋಶಾಧಿಕಾರಿ  ಚಂದ್ರಶೇಖರ್‌  ಬಿ. ಹೆಗ್ಡೆ,  ಯುವ ವಿಭಾಗದ ಕಾರ್ಯಾಧ್ಯಕ್ಷ  ಅಭಿಷೇಕ್‌ ಎಸ್‌. ಹೆಗ್ಡೆ,  ಕ್ಯಾಟರಿಂಗ್‌ ಸಮಿತಿಯ ಕಾರ್ಯಾಧಕ್ಷ  ಬಿ. ಗೋಪಾಲ್‌ ಹೆಗ್ಡೆ,  ಸದಸ್ಯತನ ಸಮಿತಿಯ ಕಾರ್ಯಾಧ್ಯಕ್ಷ  ಜಯರಾಮ್‌ ಹೆಗ್ಡೆ ಕಲ್ಯಾಣ್‌, ಕಟ್ಟಡ ಸ್ವತ್ಛತಾ ಸಮಿತಿಯ  ಕಾರ್ಯಾಧ್ಯಕ್ಷ ಕೆ. ಪ್ರಸನ್ನ ಹೆಗ್ಡೆ, ಶೈಕ್ಷಣಿಕ ಸಮಿತಿಯ ಕಾರ್ಯಾಧ್ಯಕ್ಷೆ  ಲೀಲಾವತಿ ರವೀಂದ್ರ ಹೆಗ್ಡೆ ಮತ್ತು ಆಡಳಿತ ಮಂಡಳಿ ಸದಸ್ಯರು, ಮಹಿಳಾ ಸದಸ್ಯೆಯರು, ಯುವ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಸಮಾರಂಭದಲ್ಲಿ  ಸಂಘದ ಮಾಜಿ ಕಾರ್ಯದರ್ಶಿ,  ಹಿರಿಯ ಸದಸ್ಯ ಆನಂದ ಎನ್‌. ಹೆಗ್ಡೆ ಮತ್ತು ಶಕುಂತಳಾ ಎ. ಹೆಗ್ಡೆ ದಂಪತಿಯನ್ನು ಹೆಗ್ಗಡೆ ಸೇವಾ ಸಂಘದ ಜೀವನ ಶ್ರೇಷ್ಠ ಸಾಧಕ ಪುರಸ್ಕಾರವನ್ನಿತ್ತು ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ, ಇತ್ತೀಚೆಗೆ ಡಾಕ್ಟರೇಟ್‌ ಪದವಿ ಪುರಸ್ಕೃತ ಡಾ|  ಸುರೇಂದ್ರ ಕುಮಾರ್‌  ಹೆಗ್ಡೆ ಮತ್ತು ವಿನೋದಿನಿ ಎಸ್‌. ಹೆಗ್ಡೆ ದಂಪತಿ,  ದಕ್ಷಿಣ ಕನ್ನಡ  ಜಿÇÉಾ ಹೆಗ್ಗಡೆ ಸಮಾಜ ಸಂಘ ಇದರ ಅಧ್ಯಕ್ಷ ಹಾಗೂ ರಂಗ ನಟ ಸುಂದರ ಹೆಗ್ಡೆ   ಹಾಗೂ ಎರ್ಲಪಾಡಿ ಗ್ರಾಮದ ಜನತೆಗೆ  ಪ್ರೀತಿ ಪಾತ್ರರಾಗಿರುವ  ಉದಯಕುಮಾರ್‌ ಹೆಗ್ಡೆ, ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು ಇದರ ಆಡಳಿತ ಮೊಕ್ತೇಸರ  ಕೆ. ಶ್ಯಾಮ ಹೆಗ್ಡೆ ಹಾಗೂ ಬೆಂಗಳೂರು ಹೆಗ್ಗಡೆ ಸೇವಾ ಸಂಘ ಇದರ ಮಾಜಿ ಅಧ್ಯಕ್ಷ, ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ಇದರ ಮಾಜಿ ಆಡಳಿತ ಮೊಕ್ತೇಸರ, ಸಮಾಜ ಸೇವಕ, ಧಾರ್ಮಿಕ ನೇತಾರ ದೇವೇದ್ರ ಹೆಗ್ಡೆ ಕೊಕ್ರಾಡಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಗೌರವಿಸಲಾಯಿತು.
 
ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.