ಅ.ಭಾ.ಹೊರನಾಡ ಕನ್ನಡ ಸಂಘಗಳ 7ನೇ ಮಹಾಮೇಳ ಸಮಾಪ್ತಿ

Team Udayavani, Apr 13, 2017, 5:04 PM IST

12-Mum02a.jpg

ಮುಂಬಯಿ: ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರದ ಜಂಟಿ ಆಯೋಜನೆಯಲ್ಲಿ ಅಖೀಲ ಭಾರತ ಹೊರನಾಡ ಕನ್ನಡ ಸಂಘಗಳ ಏಳನೇ ಮಹಾಮೇಳವು ಎ. 8 ಮತ್ತು ಎ. 9ರಂದು ಎರಡು ದಿನಗಳ ಕಾಲ ಹೈದರಾಬಾದಿನ ಗಚ್ಚಿಬೌಲಿಯ ಮೌಲನಾ ಆಜಾದ್‌ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದ ಆವರಣದಲ್ಲಿ ವಿವಿಧ ಸಾಹಿತ್ಯಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ದೇಶದಾದ್ಯಂತದ ಸುಮಾರು 450 ಮಂದಿ ಹೊರನಾಡ ಕನ್ನಡ ಸಂಘಗಳ ಪದಾಧಿಕಾರಿಗಳು ಎರಡು ದಿನ ಪಾಲ್ಗೊಂಡು ಮಹಾಮೇಳದ ಯಶಸ್ಸಿಗಾಗಿ ಸಹಕರಿಸಿದರು. ಹಿರಿಯ ಸಾಹಿತಿ, ಕವಿ ನಾಡೋಜ ಪ್ರೊ| ಕೆ. ಎಸ್‌. ನಿಸಾರ್‌ ಅಹಮದ್‌ ಅವರು ಮಹಾಮೇಳವನ್ನು ಉದ್ಘಾಟಿಸಿ  ಶುಭ ಹಾರೈಸಿದರು. ಮಹಾಮೇಳದ ಅಧ್ಯಕ್ಷತೆಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅವರು ವಹಿಸಿದ್ದರು.

ಬೀದರ್‌ನ ಪೂಜ್ಯಶ್ರೀ ಬಸವಾನಂದ ಸ್ವಾಮಿಗಳು ಹಾಗೂ ತೋಂಟದಾರ್ಯ ಮಠದ ಪೂಜ್ಯಶ್ರೀ ನಿಜಗುಣ ಪ್ರಭು ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಮಹಾಮೇಳವು ಉದ್ಘಾಟನೆಗೊಂಡಿತು. ಭಾಷಾ ಬಾಂಧವ್ಯ, ಮಹಿಳಾ ಅಂತಶಕ್ತಿ, ಕಲಾ ಪ್ರತಿಭೋತ್ಸವ, ಕವಿ ಮಿಲನ, ಗಡಿನಾಡು ಮತ್ತು ಹೊರನಾಡಿನಲ್ಲಿ ಕನ್ನಡ ಮತ್ತು ಕನ್ನಡಿಗರು ಹೀಗೆ ಐದು ಗೋಷ್ಠಿಗಳು ನಡೆದವು.

ಏಳನೇ ಮಹಾಮೇಳದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಗಡಿನಾಡ ಹಾಗೂ ಹೊರನಾಡ ಕನ್ನಡ ಶಾಲೆಗಳಿಗೆ ಕನ್ನಡದ ಬೆಳವಣಿಗೆಗೆ ಹೆಚ್ಚಿನ ಅನುದಾನ ನೀಡಲು ಸರಕಾರ ಬದ್ಧವಾಗಿದೆ ಎಂದು ಘೋಷಿಸಿದರು.

ಒಳನಾಡು ಕನ್ನಡ ಶಾಲೆ ಮತ್ತು ವಿದ್ಯಾರ್ಥಿಗಳಿಗೆ ನೀಡುವ ಎಲ್ಲ ಸವಲತ್ತುಗಳನ್ನು ಗಡಿ ಹಾಗೂ ಹೊರನಾಡು ಕನ್ನಡ ಶಾಲೆಗಳಿಗೂ ಒದಗಿಸಬೇಕು ಎಂಬ ಒಕ್ಕೊರಲಿನ ಆಗ್ರಹಗಳನ್ನೊಳಗೊಂಡ ನಾಲ್ಕು ನಿರ್ಣಯಗಳನ್ನು ಮಹಾ ಮೇಳದಲ್ಲಿ ಕೈಗೊಂಡು, ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶಂಕರ ಹಲಗತ್ತಿ ಮಂಡಿಸಿದ ನಿರ್ಣಯಗಳನ್ನು ಸಭೆಯು ಅನುಮೋದಿಸಿತು.

ಮುಂಬಯಿಯಿಂದ  ಕನ್ನಡ ಭವನ ಎಜುಕೇಶನ್‌ ಸೊಸೈಟಿಯ ಅಧ್ಯಕ್ಷ ಎ. ಬಿ. ಶೆಟ್ಟಿ, ಉಪಾಧ್ಯಕ್ಷ ಡಿ. ಬಿ. ಅಮೀನ್‌, ಕೋಶಾಧಿಕಾರಿ ಪುರುಷೋತ್ತಮ ಪೂಜಾರಿ, ಮಾಟುಂಗ ಪೂರ್ವದ ಮುಂಬಯಿ ಕನ್ನಡದ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸತೀಶ್‌ ಎನ್‌. ಬಂಗೇರ, ಕೋಶಾಧಿಕಾರಿ ಸುಧಾಕರ ಸಿ. ಪೂಜಾರಿ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಶೋಕ್‌ ಸುವರ್ಣ ಮತ್ತು ದಯಾನಂದ ಬಂಗೇರ ಅವರು ಮಹಾಮೇಳದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.