ಇನ್ನೊಬ್ಬರಿಗೆ ಜೀವದಾನ ಮಾಡುವ ಪುಣ್ಯದ ಕಾರ್ಯದಲ್ಲಿ ಕೈಜೋಡಿಸಿ
Team Udayavani, Dec 11, 2021, 12:04 PM IST
ಕಲ್ಯಾಣ್: ಹಿಂದಿನ ಕಾಲದಲ್ಲಿ ಅನ್ನದಾನ ಹಾಗೂ ವಿದ್ಯಾದಾನ ಶ್ರೇಷ್ಠ ದಾನಗಳಾಗಿದ್ದವು. ಆದರೆ ಇಂದಿನ ದಿನಗಳಲ್ಲಿ ರಕ್ತದಾನವೇ ಸರ್ವ ಶ್ರೇಷ್ಠ ದಾನವಾಗಿದೆ. ಅನ್ನದಾನದಿಂದ ಹಸಿವು ನೀಗಿದರೆ ವಿದ್ಯೆಯಿಂದ ಬದುಕು ಕಟ್ಟಿಕೊಳ್ಳಬ ಹುದು. ಒಂದು ಸಲ ರಕ್ತದಾನ ಮಾಡಿದರೆಮೂವರು ಜೀವವನ್ನು ಉಳಿಸಬಹುದು. ಆದ್ದರಿಂದ ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಲು ಸಹಕರಿಸೋಣ. ಒಬ್ಬ ದಾನಿಯಿಂದ ಹೆಚ್ಚೆಂದರೆ ಶೇ. 8ರಷ್ಟು ಮಾತ್ರ ರಕ್ತವನ್ನು ಪಡೆಯಲಾಗುತ್ತದೆ. ಆದ್ದರಿಂದ ರಕ್ತದಾನವನ್ನು ಪ್ರತಿಯೊಬ್ಬರೂ ಮಾಡಬಹುದು ಎಂದು ಮುಲುಂಡ್ ಶಿಶುತಜ್ಞ ಡಾ| ಸತ್ಯಪ್ರಕಾಶ ಶೆಟ್ಟಿ ಅವರು ಹೇಳಿದರು.
ಡಿ. 5ರಂದು ಬೆಳಗ್ಗೆ ಬಂಟರ ಸಂಘ ಮುಂಬಯಿ ಇದರ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಕಲ್ಯಾಣ್ ಪಶ್ಚಿಮದ ಗೀತಾ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಬಂಟರ ಸಂಘದ ಎಂಟು ಪ್ರಾದೇಶಿಕ ಸಮಿತಿಗಳ ಸಹಕಾರದಿಂದ ಇವರೆಗೆ 1,800 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ. ಈ ಅಭೂತಪೂರ್ವ ಕಾರ್ಯಕ್ಕೆ ತಮ್ಮೆಲ್ಲರ ಅವಿರತ ಪರಿಶ್ರಮವೇ ಕಾರಣವಾಗಿದೆ. ಇಂತಹ ಶಿಬಿರಗಳ ಮುಖಾಂತರ ರಕ್ತ ಸಂಗ್ರಹಿಸಿ ಇನ್ನೊಬ್ಬರಿಗೆ ಜೀವದಾನ ಮಾಡುವ ಪುಣ್ಯದ ಕಾರ್ಯ ಮಾಡೋಣ ಎಂದು ಹೇಳಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಬಂಟರ ಸಂಘ ಮುಂಬಯಿಯ ಪೂರ್ವ ವಲಯದ ಸಮನ್ವಯಕ ಸುಬ್ಬಯ್ಯ ಶೆಟ್ಟಿ ಅವರು ಮಾತನಾಡಿ, ಬಂಟರ ಸಂಘ ಮುಂಬಯಿ ಇದರ ಆರೋಗ್ಯ ಸಮಿತಿಯ ಕಾರ್ಯಾಧ್ಯಕ್ಷ ಡಾ| ಸತ್ಯ ಪ್ರಕಾಶ್ ಶೆಟ್ಟಿ ಅವರ ಕಾರ್ಯ ಅಭಿನಂದನೀಯ. ರಕ್ತದಾನ ಶಿಬಿರಗಳ ಮುಖಾಂತರ ರಕ್ತ ಸಂಗ್ರಹಿಸಿ ಅದನ್ನು ಆವಶ್ಯಕತೆ ಇದ್ದವರಿಗೆ ನೀಡುವುದು ನಿಜವಾದ ಮಾನವೀಯತೆಯ ಸೇವೆಯಾಗಿದೆ. ತಮ್ಮ ಅವಿರತ ಪ್ರಯತ್ನದಿಂದ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಅವರ ಪ್ರಯತ್ನಕ್ಕೆ ನಾವೆಲ್ಲರೂ ಸಹಕರಿಸೋಣ ಎಂದು ಕರೆ ನೀಡಿ ಶುಭಕೋರಿದರು.
ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತ ನಾಡಿದ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಅವರು, ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಅವರ ಸಮಾಜಪರ ಕಾರ್ಯಗಳಿಗೆ ನಮ್ಮ ಸಹಾಯ, ಸಹಕಾರ ನಿರಂತರವಾಗಿರಲಿದೆ. ಪ್ರದೇಶಿಕ ಸಮಿತಿಯ ಈ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಲು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಸುಧೀರ್ ಶೆಟ್ಟಿ ಹಾಗೂ ಎಲ್ಲ ಕಾರ್ಯಕಾರಿ ಸಮಿತಿಯ ಸದಸ್ಯರ ಅಮೂಲ್ಯ ಸಹಾಯ, ಅವಿರತ ಪರಿಶ್ರಮವೇ ಕಾರಣವಾಗಿದೆ. ಡಾ| ಸತ್ಯಪ್ರಕಾಶ ಶೆಟ್ಟಿ ಅವರ ಮಾರ್ಗದರ್ಶನ ನಮ್ಮೊಂದಿಗೆ ಸದಾ ಇರಲಿ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಗಣ್ಯರಾದ ದಿವಾಕರ ಶೆಟ್ಟಿ ಇಂದ್ರಾಳಿ, ಡಾ| ಸತ್ಯಪ್ರಕಾಶ ಶೆಟ್ಟಿ, ಸುಬ್ಬಯ್ಯ ಶೆಟ್ಟಿ, ವಿನಯ ಶೆಟ್ಟಿ, ಚಿತ್ರಾ ಆರ್. ಶೆಟ್ಟಿ, ಸುಧೀರ್ ಶೆಟ್ಟಿ, ಸುಭೋದ್ ಭಂಡಾರಿ, ಜಗದೀಶ್ ಬೆಳ್ಳಂಜೆ ಅವರನ್ನು ಸಮ್ಮಾನಿಸಲಾಯಿತು. ಗಣ್ಯರಾದ ಗುರುದೇವ ಭಾಸ್ಕರ ಶೆಟ್ಟಿ, ವಿಶ್ವನಾಥ ಶೆಟ್ಟಿ, ಕರುಣಾಕರ ಶೆಟ್ಟಿ, ಸದಾಶಿವ ಸುವರ್ಣ, ನಂದೀಶ್ ಪೂಜಾರಿ, ದೀಪಕ್ ಹಂಗೇನ, ಸಚಿನ್ ಶೆಟ್ಟಿ, ಪ್ರಜ್ವಲ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸುಲೋಚನಾ ಶೆಟ್ಟಿ, ರೋಹಿಣಿ ಶೆಟ್ಟಿ, ಸುಜಾತಾ ಶೆಟ್ಟಿ ಮೊದಲಾದವರನ್ನು ಗೌರವಿಸಲಾಯಿತು.
ರೋಹಿಣಿ ಶೆಟ್ಟಿ, ಸುಜಾತಾ ಸುಕುಮಾರ್ ಶೆಟ್ಟಿ ಅವರ ಪ್ರಾರ್ಥನೆ ಯೊಂದಿಗೆ ಗಣ್ಯರು ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆ ನೀಡಿದರು. ಜಗದೀಶ್ ಬೆಳ್ಳಂಜೆ ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಶೆಟ್ಟಿ ವಂದಿಸಿದರು. ಬಂಟರ ಸಂಘ ಮುಂಬಯಿ ಇದರ ಜತೆ ಕಾರ್ಯದರ್ಶಿ, ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಬಂಟರ ಸಂಘ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ, ರವೀಂದ್ರ ಶೆಟ್ಟಿ, ಸುಭೋದ್ ಭಂಡಾರಿ, ಭಾಸ್ಕರ ಶೆಟ್ಟಿ ದೊಂಡೆರಂಗಡಿ, ಸುಧೀರ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ವಿನಯ್ ಶೆಟ್ಟಿ, ಹರೀಶ್ ಶೆಟ್ಟಿ, ದಯಾನಂದ ಶೆಟ್ಟಿ, ಪ್ರವೀಣಾ ಪಿ. ಶೆಟ್ಟಿ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅನ್ನದಾನ ಹಾಗೂ ವಿದ್ಯಾದಾನ ಹಣವಂತರಷ್ಟೇ ಮಾಡಬಹುದು. ಆದರೆ ರಕ್ತದಾನವನ್ನು ಜನಸಾಮಾನ್ಯರೂ ಮಾಡಬಹುದು. ಇಂದು ಈ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಿದ್ದ ಬಂಟರ ಸಂಘ ಮುಂಬಯಿ ಇದರ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯ ಅಭಿನಂದನೀಯ. ಬಂಟರ ಸಂಘದ ಆರೋಗ್ಯ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ| ಸತ್ಯಪ್ರಕಾಶ್ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದ ಹರಿಕಾರ ಎಂದರೆ ತಪ್ಪಾಗಲಾರದು. ಕೊರೊನಾ ಕಾಲಘಟ್ಟದಲ್ಲಿಯೂ ಸುಮಾರು 1,800 ಯುನಿಟ್ ರಕ್ತ ಸಂಗ್ರಹಿಸುವ ಜತೆಗೆ ಸೋಂಕಿನಿಂದ ಸಂಕಷ್ಟಕ್ಕೊಳಗಾದ 700 ಕ್ಕೂ ಅಧಿಕ ಮಂದಿಯ ಉಪಚಾರಗೈದು ವೈದ್ಯೋ ನಾರಾಯಣೋ ಹರಿ ಎಂಬುದನ್ನು ಸಾಭೀತುಪಡಿಸಿದ್ದಾರೆ ಪ್ರತಿಯೊಬ್ಬರೂ ರಕ್ತದಾನದ ಈ ಮಹಾಯಜ್ಞದಲ್ಲಿ ಭಾಗವಹಿಸಿ ಜೀವದಾನದ ಮಹತ್ಕಾರ್ಯದಲ್ಲಿ ಭಾಗಿಯಾಗೋಣ.-ಇಂದ್ರಾಳಿ ದಿವಾಕರ ಶೆಟ್ಟಿ, ಜತೆ ಕಾರ್ಯದರ್ಶಿ, ಬಂಟರ ಸಂಘ ಮುಂಬಯಿ
ಮುಂಬಯಿ ಬಂಟರ ಸಂಘದ ಪ್ರತಿ ಪ್ರಾದೇಶಿಕ ಸಮಿತಿಗಳಲ್ಲೂ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಜನರಿಗೆ ರಕ್ತದಾನದ ಮಹತ್ವವನ್ನು ಸಾರಿ ಹೇಳುವುದರ ಜತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ಡಾ| ಸತ್ಯಪ್ರಕಾಶ್ ಶೆಟ್ಟಿ ಅವರ ಕಾರ್ಯಕ್ಕೆ ನಮ್ಮೆಲ್ಲರ ಸಹಾಯ, ಸಹಕಾರ ನಿರಂತರವಾಗಿರಲಿ. ಮುಂಬರುವ ದಿನಗಳಲ್ಲಿ ಪ್ರಾದೇಶಿಕ ಸಮಿತಿಯ ವತಿಯಿಂದ ಬೃಹತ್ ಆರೋಗ್ಯ ಶಿಬಿರವನ್ನು ಆಯೋಜಿಸುವ ಯೋಜನೆ ನಮ್ಮದಾಗಿದೆ. ಸಮಿತಿಯ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರ ಪ್ರೋತ್ಸಾಹ, ಸಹಕಾರ ಸದಾಯಿರಲಿ. -ಚಿತ್ರಾ ಆರ್. ಶೆಟ್ಟಿ, ಉಪಕಾರ್ಯಾಧ್ಯಕ್ಷೆ, ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗ
-ಚಿತ್ರ-ವರದಿ: ಗುರುರಾಜ ಪೋತನೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.