ನಾಳೆ ನವೀಕೃತ ಬಂಟ್ಸ್‌ ಸೆಂಟರ್‌ ಕಟ್ಟಡ, ಕಿರು ಸಭಾಗೃಹ ಉದ್ಘಾಟನೆ

ಬೋಂಬೆ ಬಂಟ್ಸ್‌ ಅಸೋಸಿಯೇಶನ್‌

Team Udayavani, Jul 6, 2019, 4:34 PM IST

0507MUM10ADVTSUBHASHSHETTY

ಮುಂಬಯಿ: ನಗರದ ಪ್ರತಿಷ್ಠಿತ ಸಂಘ-ಸಂಸ್ಥೆಗಳಲ್ಲೊಂದಾದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ ಬಂಟ್ಸ್‌ ಸೆಂಟರ್‌, ಬಂಟ್ಸ್‌ ಸೆಂಟರ್‌ ಮಾರ್ಗ, ಸೆಕ್ಟರ್‌-24, 3ನೇ ಮಹಡಿ, ಪ್ಲಾಟ್‌ ನಂಬರ್‌ 6-ಜಿ ಇಲ್ಲಿ ಪುನರ್‌ ನಿರ್ಮಾಣಗೊಂಡ ಬಂಟ್ಸ್‌ ಸೆಂಟರ್‌ ಕಟ್ಟಡದ ಉದ್ಘಾಟನಾ ಸಮಾರಂಭವು ಜು. 7ರಂದು ಅಪರಾಹ್ನ 2ರಿಂದ ಅಸೋಸಿಯೇಶನ್‌ನ ಅಧ್ಯಕ್ಷ ನ್ಯಾಯವಾದಿ ಸುಭಾಷ್‌ ಬಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಲಿದೆ.

ಈ ಸಂದರ್ಭದಲ್ಲಿ ಕಿರು ಸಭಾಂಗಣದ ಉದ್ಘಾಟನೆಯು ನಡೆಯಲಿದೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹೊಟೇಲ್‌ ಅವೆನ್ಯೂ ಕಾಂದಿವಲಿ ಸಿಎಂಡಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ವಿಶ್ವಸ್ತ ರಘುರಾಮ ಕೆ. ಶೆಟ್ಟಿ, ಶಿವಾನಿ ಮದರ್‌ ಆ್ಯಂಡ್‌ ಚೈಲ್ಡ್‌ ಕೇರ್‌ ಹಾಸ್ಪಿಟಲ್‌ ಮುಲುಂಡ್‌ ಇದರ ಸಿಎಂಡಿ ಡಾ| ಸತ್ಯಪ್ರಕಾಶ್‌ ಶೆಟ್ಟಿ, ಸೋನಿ ಸ್ಟೀಲ್‌ ಆ್ಯಂಡ್‌ ಎಪ್ಲೈಯನ್ಸಸ್‌ ಪ್ರೈವೇಟ್‌ ಲಿಮಿಟೆಡ್‌ ಗೋರೆಗಾಂವ್‌ ಇದರ ಸಿಎಂಡಿ ಪಾಂಡುರಂಗ ಶೆಟ್ಟಿ, ಬಂಟರ ಸಂಘ ಮುಂಬಯಿ ಪೊವಾಯಿ ಶಿಕ್ಷಣ ಸಂಸ್ಥೆಯ ಮಾಜಿ ಕಾರ್ಯಾಧ್ಯಕ್ಷ ಜಯರಾಮ ಎನ್‌. ಶೆಟ್ಟಿ, ನ್ಯಾಯವಾದಿ ಪ್ರದೀಪ್‌ ಕೆ. ಶೆಟ್ಟಿ ಅವರು ಆಗಮಿಸಲಿದ್ದಾರೆ.

ಈ ಸಂದರ್ಭದಲ್ಲಿ ಅಸೋಸಿ ಯೇಶನ್‌ನ ಮಾಜಿ ಅಧ್ಯಕ್ಷರಾದ ಶ್ಯಾಮ್‌ ಎನ್‌. ಶೆಟ್ಟಿ, ಹೆಜಮಾಡಿ ದಿ| ವಿಟuಲ ಶೆಟ್ಟಿ, ಸರ್ವೋತ್ತಮ ಎಚ್‌. ಶೆಟ್ಟಿ, ದಿ| ಬಾಬು ಎನ್‌. ಶೆಟ್ಟಿ, ದಿ| ಹಿರಿಯಣ್ಣ ವೈ. ಶೆಟ್ಟಿ, ತೋಕೂರುಗುತ್ತು ಭಾಸ್ಕರ ವೈ. ಶೆಟ್ಟಿ, ತೋಕೂರುಗುತ್ತು ಭಾಸ್ಕರ್‌ ಶೆಟ್ಟಿ, ಎನ್‌. ಸಿ. ಶೆಟ್ಟಿ, ಜಯರಾಮ ಎಸ್‌. ಮಲ್ಲಿ, ನ್ಯಾಯವಾದಿ ಕೆ. ಪಿ. ಪ್ರಕಾಶ್‌ ಎಲ್‌. ಶೆಟ್ಟಿ, ನ್ಯಾಯವಾದಿ ದಿ| ಆನಂದ ವಿ. ಶೆಟ್ಟಿ, ಮಧ್ಯಗುತ್ತು ಜಯ ಎನ್‌. ಶೆಟ್ಟಿ, ಜಯ ಕೆ. ಶೆಟ್ಟಿ, ನ್ಯಾಯವಾದಿ ಅಶೋಕ್‌ ಡಿ. ಶೆಟ್ಟಿ, ಜಯಂತ್‌ ಕೆ. ಶೆಟ್ಟಿ, ನ್ಯಾಯವಾದಿ ರತ್ನಾಕರ ವಿ. ಶೆಟ್ಟಿ, ಶ್ಯಾಮ್‌ ಎನ್‌. ಶೆಟ್ಟಿ, ನ್ಯಾಯವಾದಿ ಉಪ್ಪೂರು ಶೇಖರ್‌ ಶೆಟ್ಟಿ, ನ್ಯಾಯವಾದಿ ಸುಭಾಷ್‌ ಬಿ. ಶೆಟ್ಟಿ ಇವರ ಭಾವಚಿತ್ರಗಳನ್ನು ಅನಾವರಣಗೊಳಿಸಲಾಗುವುದು.

ಕಾರ್ಯಕ್ರಮವು ಬೆಳಗ್ಗೆ 8.30 ರಿಂದ ಗಣಹೋಮದೊಂದಿಗೆ ಆರಂಭಗೊಂಡು ಪೂರ್ವಾಹ್ನ 10.30ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ, ಅನಂತರ ಅನ್ನ ಪ್ರಸಾದ ಕಾರ್ಯಕ್ರಮವು ಜರಗಲಿದೆ. ಅಪರಾಹ್ನ 3ರಿಂದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಂಗವಾಗಿ ಊರಿನ ನುರಿತ ಕಲಾವಿದರಿಂದ ಹಾಗೂ ಅಸೋಸಿಯೇಶನ್‌ನ ಸದಸ್ಯರಿಂದ ಕರ್ಣಾವಸಾನ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಸಂಸ್ಥೆಯ ಅಧ್ಯಕ್ಷ ನ್ಯಾಯವಾದಿ ಸುಭಾಷ್‌ ಬಿ. ಶೆಟ್ಟಿ, ಉಪಾಧ್ಯಕ್ಷ ಮುರಳಿ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಎಸ್‌. ಶೆಟ್ಟಿ,. ಜತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ್‌ ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಶ್ಯಾಮಸುಂದರ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾರದಾ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಚರಣ್‌ ಆರ್‌. ಶೆಟ್ಟಿ ಅವರು ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

BY-Vijayendara

By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ

Jodo model yatra demanding abolition of EVMs: AICC President Kharge

EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.