ಬಂಟರ ಭವನದಲ್ಲಿ ಸಂತೋಷ್ ನಾಯರ್ ಅವರಿಂದ ಜ್ಞಾನವೃದ್ಧಿ ಶಿಬಿರ
Team Udayavani, Jul 15, 2018, 5:33 PM IST
ಮುಂಬಯಿ: ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ವತಿಯಿಂದ ಬಂಟರ ಸಂಘ ಮುಂಬಯಿ ಇದರ ಸಹಕಾರದೊಂದಿಗೆ ಉದ್ಯಮ ಕ್ಷೇತ್ರದಲ್ಲಿ ಜ್ಞಾನವೃದ್ಧಿ ವಿಶೇಷ ಶಿಬಿರವು ಜು. 14 ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಿತು.
ಅಂತಾರಾಷ್ಟಿrಯ ಮಟ್ಟದ ಸಂಪನ್ಮೂಲ ವ್ಯಕ್ತಿ ಸಂತೋಷ್ ನಾಯರ್ ಅವರು ಶಿಬಿರದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು. ಬಂಟ ಸಮಾಜದ ಉದ್ಯಮಿಗಳಿಗಾಗಿ ಆಯೋಜಿಸಲಾಗಿದ್ದ ಈ ಶಿಬಿರವನ್ನು ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ ಅಧ್ಯಕ್ಷ, ಉದ್ಯಮಿ ಕೆ. ಸಿ. ಶೆಟ್ಟಿ ಮತ್ತು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಹಾಗೂ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಇದರ ಪದಾಧಿಕಾರಿಗಳು ದೀಪಪ್ರಜ್ವಲಿಸಿ ಉದ್ಘಾಟಿಸಿದರು.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಇವರು ಮಾತನಾಡಿ, ಬೆಳೆಯುತ್ತಿರುವ ಹಾಗೂ ಸ್ಪರ್ಧಾತ್ಮಕ ಉದ್ಯಮ ರಂಗದಲ್ಲಿ ನಾವು ತುಂಬಾ ಜಾಗೃತರಾಗಿರಬೇಕು. ಇಂತಹ ಜ್ಞಾನವೃದ್ಧಿ ಶಿಬಿರಗಳ ಆಯೋಜನೆಯಿಂದ ಸಮಾಜದ ಉದ್ಯಮಿಗಳಿಗೂ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರಿಗೆ ಬಹಳಷ್ಟು ಮಾಹಿತಿ, ತಿಳುವಳಿಕೆ ಲಭಿಸುತ್ತದೆ. ಉತ್ತಮ ಸಮಯದಲ್ಲಿ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟಿÅàಸ್ ಸಂಸ್ಥೆಯು ಅರ್ಥಪೂರ್ಣ ಶಿಬಿರವನ್ನು ಆಯೋಜಿಸಿರುವುದು ಹೆಮ್ಮೆಯ ವಿಷಯವಾಗಿದೆ. ಸಂಸ್ಥೆಯ ಎಲ್ಲಾ ಕಾರ್ಯಕ್ರಮಗಳಿಗೆ ಬಂಟರ ಸಂಘದ ಪ್ರೋತ್ಸಾಹ, ಸಹಕಾರ ಸದಾಯಿದೆ ಎಂದರು.
ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟಿÅàಸ್ ಇದರ ಗೌರವ ಪ್ರಧಾನ ಕಾರ್ಯದರ್ಶಿ ಕೆ. ಜಯ ಸೂಡ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಸಿದ್ದಿ-ಸಾಧನೆಗಳನ್ನು ವಿವರಿಸಿದರು. ಸಂಸ್ಥೆಯ ನಿರ್ದೇಶಕ ನಿಶಿತ್ ಶೆಟ್ಟಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಂತೋಷ್ ನಾಯರ್ ಇವರನ್ನು ಪರಿಚಯಿಸಿದರು.
ಉದ್ಘಾಟನಾ ಸಂದರ್ಭದಲ್ಲಿ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟಿÅàಸ್ ಇದರ ಉಪಾಧ್ಯಕ್ಷ ಎಸ್. ಬಿ. ಶೆಟ್ಟಿ, ಗೌರವ ಕೋಶಾಧಿಕಾರಿ ಡಿ. ಪಿ. ರೈ, ಜತೆ ಕಾರ್ಯದರ್ಶಿ ಪಿ. ಕೆ. ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಸಾದ್ ಶೆಟ್ಟಿ, ಬಂಟರ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಭೋಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕರುಗಳಾದ ಹಿತೇಶ್ ಶೆಟ್ಟಿ, ಸಿಎ ಶಂಕರ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಕೆ. ಎಂ. ಶೆಟ್ಟಿ, ಪಾಂಡುರಂಗ ಶೆಟ್ಟಿ ಮೊದಲಾದವರ ನೇತೃತ್ವದಲ್ಲಿ ಶಿಬಿರವು ನಡೆಯಿತು.
ಸಂಪನ್ಮೂಲ ವ್ಯಕ್ತಿ ಸಂತೋಷ್ ನಾಯರ್ ಅವರು, ಪ್ರಸ್ತುತ ಮಾರುಕಟ್ಟೆಯ ರಹಸ್ಯಗಳನ್ನು ಸುಲಭ ಹಾಗೂ ಪರಿಣಾಮಕಾರಿ ಶೈಲಿಯಲ್ಲಿ ತಮ್ಮ ನಿರರ್ಗಳ ಮಾತುಗಳಿಂದ ತಿಳಿಸಿದರು. ಸಮಾಜದ ಪ್ರಸಿದ್ಧ ಉದ್ಯಮಿಗಳು, ವಿವಿಧ ಬಂಟ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ವಿವಿಧ ಕ್ಷೇತ್ರಗಳ ಗಣ್ಯರು ಶಿಬಿರದ ಪ್ರಯೋಜನ ° ಪಡೆದುಕೊಂಡರು.
ಎಲ್ಲ ಬಂಟ ಉದ್ಯಮಿಗಳನ್ನು ಹಾಗೂ ತಜ್ಞರನ್ನು ಒಂದೇ ವೇದಿಕೆಯಡಿಯಲ್ಲಿ ಒಗ್ಗೂಡಿಸುವುದು, ಔದ್ಯೋಗಿಕ ರಂಗದಲ್ಲಿ ಅಭಿವೃದ್ಧಿ ಸಾಧಿಸಲು ಉತ್ಸುಕರಾದ ಬಂಟ ಯುವ ಜನಾಂಗಕ್ಕೆ ಪ್ರೇರಣೆ ಯನ್ನು ಕಲ್ಪಿಸುವ ಶಿಬಿರಗಳನ್ನು ಆಯೋಜಿಸುವುದು ಇನ್ನಿತರ ಧ್ಯೇಯೋದ್ದೇಶಗಳೊಂದಿಗೆ ಸಂಸ್ಥೆಯು ಮುನ್ನಡೆಯುತ್ತಿರುವುದು ವಿಶೇಷತೆಯಾಗಿದೆ. ಬಂಟ ಸಮಾಜವು ಉದ್ಯಮ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಸಮಾಜವಾಗಿದ್ದು, ಈಗಾಗಲೇ ಹಲವಾರು ಮಂದಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಬೆಳೆಯುವ ಮತ್ತು ಬೆಳೆಯುತ್ತಿರುವ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಬಂಟರ ಸಂಘ ಮುಂಬಯಿ ಹಾಗೂ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಇದರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉತ್ತಮ ರೀತಿಯಲ್ಲಿ ಸಹಕಾರ ನೀಡಿರುವುದು ಹೆಮ್ಮೆಯ ವಿಚಾರ. ಎರಡೂ ಸಂಸ್ಥೆಗಳ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ. ಈ ಶಿಬಿರದ ಸದುಪಯೋಗವನ್ನು ಸಮಾಜದ ಉದ್ಯಮಿಗಳು ಪಡೆದುಕೊಂಡು ಭವಿಷ್ಯದಲ್ಲಿ ಇನ್ನಷ್ಟು ಅಭಿವೃದ್ಧಿಯನ್ನು ಕಾಣಬೇಕು ಎಂಬುವುದೇ ನಮ್ಮ ಉದ್ದೇಶವಾಗಿದೆ
– ಕೆ. ಸಿ. ಶೆಟ್ಟಿ (ಅಧ್ಯಕ್ಷರು : ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ)
ಚಿತ್ರ-ವರದಿ : ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.