ನಾಡು-ನುಡಿ ಉಳಿಸಿ-ಬೆಳೆಸುವ ಜವಾಬ್ದಾರಿ ನಮ್ಮದು: ಗೋಪಾಲ್‌ ಶೆಟ್ಟಿ

Team Udayavani, Dec 9, 2019, 5:38 PM IST

mumbai-tdy-1

ಮುಂಬಯಿ, ಡಿ. 8: ಕನ್ನಡ ಭಾಷೆ ಉಳಿಯಬೇಕು ಅದನ್ನು ಬೆಳೆಸಬೇಕು ಎಂಬುದು ರಾಜ್ಯೋತ್ಸವ ಆಚರಣೆಯ ದಿನ ಕೇವಲ ಭಾಷಣಕ್ಕೆ ಸೀಮಿತವಾಗಿರಬಾರದು. ಕನ್ನಡವನ್ನು ಉಳಿಸಿಬೆಳೆಸುವ ಪ್ರಯತ್ನ ನಮ್ಮದಾಗಬೇಕು. ಇಂಗ್ಲಿಷ್‌ ಎಂಬುದು ಮಾಧ್ಯಮದ ಭಾಷೆ. ಆದರೆ ಕನ್ನಡವು ಜ್ಞಾನದ ಭಾಷೆಯಾಗಿದೆ. ಈ ಜ್ಞಾನದ ಭಾಷೆ ಬೆಳೆಯಬೇಕಾದರೆ ನಾವು ನಮ್ಮ ಮಾತೃಭಾಷೆಗೆ ಮಹತ್ವ ನೀಡಬೇಕು. ಕನ್ನಡ ಭಾಷೆಯ ಬಗ್ಗೆ ತಾತ್ಸಾರ ಮಾಡಬಾರದು ಎಂದು ನವಿಮುಂಬಯಿ ಕನ್ನಡ ಸಂಘ ವಾಶಿ ಅಧ್ಯಕ್ಷ ಗೋಪಾಲ್‌ ವೈ. ಶೆಟ್ಟಿ ನುಡಿದರು.

. 30ರಂದು ವಾಶಿಯ ಬಸ್‌ ಡಿಪೋ ಹಿಂದುಗಡೆಯ ನವಿ ಮುಂಬಯಿ ಕನ್ನಡದ ಎಂ. ಬಿ. ಕುಕ್ಯಾನ್‌ ಸಭಾಗೃಹದಲ್ಲಿ ನವಿಮುಂಬಯಿ ಸಂಘದ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಎಲ್ಲ ಜಾತಿ, ಧರ್ಮ,ಮತ ಭಾಷೆಯ ಬೇಧವಿಲ್ಲದೆ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುವುದು ಸಂತೋಷದ ಸಂಗತಿಯಾಗಿದೆ. ನಮ್ಮ ಸಂಸ್ಕೃತಿ, ಸಂಸ್ಕಾರದ ತವರೂರು ನಮ್ಮ ಕನ್ನಡ ನಾಡಾಗಿದೆ. ಯುವ ಪೀಳಿಗೆಯಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿರುಚಿ ಅರಿವು ಮೂಡಿಸಬೇಕು. ಮುಂಬಯಿ ಮಹಾನಗರದ ಸಂಘಸಂಸ್ಥೆಗಳು ಕನ್ನಡದ ಏಳ್ಗೆಗಾಗಿ ಶ್ರಮಿಸುತ್ತಿರುವುದು ಅಭಿನಂದನೀಯವಾಗಿದೆ ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸಾಹಿತಿ ಡಾ| ಕರುಣಾಕರ ಶೆಟ್ಟಿ ಪಣಿಯೂರು ಅವರು ಮಾತನಾಡಿ, ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಇಂತಹ ವಿಶಿಷ್ಟ ಪರಂಪರೆಯುಳ್ಳ ಕನ್ನಡ ಬ್ರಿಟಿಷರ ಆಳ್ವಿಕೆಯಲ್ಲಿ ವಿಭಿನ್ನ ಕಾರಣಗಳಿಂದ ಭೌಗೋಳಿಕವಾಗಿ ಬೇರೆ ಬೇರೆ ಪ್ರಾಂತಗಳಲ್ಲಿ ಹಂಚಿಹೋಗಿತ್ತು. ಆದರೆ ಕನ್ನಡ ನಾಡಿನ ನಮ್ಮ ಹಿರಿಯ ಚೇತನಗಳ ಹೋರಾಟದ ಫಲವಾಗಿ ಮೈಸೂರು ರಾಜ್ಯ ಉದಯವಾಯಿತು. ಬಳಿಕ ಕರ್ನಾಟಕ ಎಂದು ನಾಮಕರಣವಾಯಿತು. ನಾವು ಪ್ರತಿ ವರ್ಷ ನವೆಂಬರ್‌ 1ರಂದು ಕನ್ನಡ ರಾಜ್ಯೋತ್ಸವವನ್ನಾಗಿ ಆಚರಿಸುತ್ತಿದ್ದೇವೆ.

ಮುಂಬಯಿಯ ಉದ್ದಗಲಕ್ಕೂ ಸಮಾಜಕ್ಕೆ ಕನ್ನಡದ ನಾಡುನುಡಿಗೆ ಸೇವೆಯನ್ನು ಸಲ್ಲಿಸುತ್ತಿರುವ ಸಂಘಸಂಸ್ಥೆಗಳು ವಿಭಿನ್ನ ಕಾರ್ಯಕ್ರಮಗಳ ಮೂಲಕ ಕನ್ನಡದ ಕಂಪನ್ನು ಪಸರಿಸುವ ಕಾರ್ಯವನ್ನು ಮಾಡುತ್ತಿದೆ. ಕನ್ನಡ ನಾಡಿನಲ್ಲಿ ನಡೆಯದಷ್ಟು ಕನ್ನಡದ ಕಾರ್ಯಕ್ರಮಗಳು ಮುಂಬಯಿಯಲ್ಲಿ ನಡೆಯುತ್ತಿದೆ ಎನ್ನಲು ಹೆಮ್ಮೆಯಾಗುತ್ತಿದೆ. ಇಲ್ಲಿನ ಹೆಚ್ಚಿನ ಸಂಘಸಂಸ್ಥೆಗಳಲ್ಲಿ ಕನ್ನಡಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಮುಂಬಯಿಯಲ್ಲಿ ಕನ್ನಡ ಖಂಡಿತ ಅಳಿಯುವುದಿಲ್ಲ. ಕನ್ನಡ ಮುಂಬಯಿ ಮಹಾನಗರದಲ್ಲಿ ಉಳಿದು ಬೆಳೆಯುತ್ತದೆ. ನಾವೆಲ್ಲ ಕನ್ನಡಕ್ಕೆ ಮಹತ್ವವನ್ನು ನೀಡಿ ಕನ್ನಡವನ್ನು ಉಳಿಸಿಕೊಂಡರೆ ನಮ್ಮ ರಾಜ್ಯೋತ್ಸವ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದರು.

ಸಮಾರಂಭದಲ್ಲಿ ಸಂಘದ ವತಿಯಿಂದ ನವಿಮುಂಬಯಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಬಿ. ಎಚ್‌. ಕಟ್ಟಿ ಅವರನ್ನು ಶಾಲು ಹೊದೆಸಿ, ಮೈಸೂರು ಪೇಟ ತೊಡಿಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಸಮ್ಮಾನಕ್ಕೆ ಉತ್ತರಿಸಿದ ಬಿ. ಎಚ್‌. ಕಟ್ಟಿ ಅವರು, ಸಂಘದ ಅಭಿವೃದ್ಧಿಗೆ ಎಲ್ಲರ ಸಹಕಾರ ದೊರಕಿದೆ. ಸಂಘದ ಏಳ್ಗೆಗಾಗಿ ಶ್ರಮಿಸಿರುವ ಎಲ್ಲ ಹಿರಿಯ ಸದಸ್ಯರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ. ನನ್ನ ಅಳಿಲು ಸೇವೆಗಾಗಿ ನೀವೆಲ್ಲಾ ನನ್ನನ್ನು ಗುರುತಿಸಿ ಸಮ್ಮಾನಿಸಿದ್ದೀರಿ. ನಿಮಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ಪರಿವಾರದವರ ಪ್ರೋತ್ಸಾಹ, ಬೆಂಬಲದಿಂದ ನನಗೆ ಸಂಘದ ಮುಖೇನ ಸಮಾಜಪರ ಸೇವೆ ಮಾಡಲು ಸಾಧ್ಯವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿ ಡಾ| ಕರುಣಾಕರ ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘದ ಸದಸ್ಯೆಯರು ನಾಡಗೀತೆಯನ್ನು ಹಾಡಿದರು. ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥ ರಘು ಮೂಲ್ಯ ಸ್ವಾಗತಿಸಿದರು.

ಅತಿಥಿಗಳನ್ನು ಸದಸ್ಯೆ ಸುಧಾ ಮೂರ್ತಿ ಪರಿಚಯಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಜಗದೀಶ್‌ ರೈ ಸಮ್ಮಾನ ಪತ್ರ ವಾಚಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ದಿನೇಶ್‌ ಉಪರ್ಣ, ಜ್ಯೋತಿ ಪ್ರಸಾದ್‌, ಜಯರಾಮ್‌ ಶೆಟ್ಟಿ, ಕೋಶಾಧಿಕಾರಿ ಅನಿಲ್‌ ಕೆ. ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಮಧುಸೂದನ್‌ ರಾವ್‌ ಟಿ. ಆರ್‌. ಅವರು ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ವಿಭಾಗದ ಮುಖ್ಯಸ್ಥೆ ಸುಜಾತಾ ರಾವ್‌ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಾಷೆಯ ಕಿತಾಪತಿ ಕನ್ನಡ ಕಿರು ಹಾಸ್ಯ ನಾಟಕ ಹಾಗೂ ಸಂಘದ ಸದಸ್ಯರ ಮಕ್ಕಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.