ಆಯವ್ಯಯ ಶಾಸ್ತ್ರದ ಕಾರ್ಯಸಾಧನೆ ಕಷ್ಟಕರ: ಡಾ| ಹೆಗ್ಗಡೆ
ನಗರದ ಸಿಎ ಜಗದೀಶ್ ಬಿ. ಶೆಟ್ಟಿ ಸಂಸ್ಥೆಯ ವಾರ್ಷಿಕ "ಡೈರಿ-2021' ಬಿಡುಗಡೆ
Team Udayavani, Dec 31, 2020, 5:13 PM IST
ಮುಂಬಯಿ: ನಗರದ ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್, ಶೆಟ್ಟಿ ನಾಯ್ಕ ಆ್ಯಂಡ್ ಅಸೋಸಿಯೇಟ್ಸ್ ಚಾರ್ಟರ್ಡ್ ಅಕೌಂಟೆಂಟ್ಸ್‌ನ ನಿರ್ದೇಶಕ ಸಿಎ ಜಗದೀಶ್ ಬಿ. ಶೆಟ್ಟಿ ಸುರತ್ಕಲ್ ಇವರ ಸಂಸ್ಥೆಯ 2021ನೇ ಸಾಲಿನ ವಾರ್ಷಿಕ “ಡೈರಿ-2021′ ಅನ್ನು ಮಂಗಳವಾರ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.
ತುಳುನಾಡ ಕುವರನಾಗಿ ಹುಟ್ಟಿ ಬೆಳೆದು, ಹಣಕಾಸು ವಲಯದಲ್ಲಿ ಹಲವಾರು ಪುರಸ್ಕಾರಗಳನ್ನು ಪಡೆದು, ಆರ್ಥಿಕ ಕ್ಷೇತ್ರದ ಅಪಾರ ಅನುಭವವುಳ್ಳವರಾಗಿ ದೇಶದ ವಾಣಿಜ್ಯ ನಗರಿ ಮುಂಬಯಿಯಲ್ಲಿ ಓರ್ವ ಸಾಧಕ ಯುವ ಲೆಕ್ಕಪರಿಶೋಧಕರಾಗಿ ಜಗದೀಶ್ ಶೆಟ್ಟಿ ಅವರು ಅಂತಾರಾಷ್ಟ್ರೀಯ ಹಿರಿಮೆಗೆ ಪಾತ್ರರಾಗಿರುವುದು ಅಭಿನಂದನೀಯ. ಇಂತಹ ಸಾಧನೆ ತುಳುನಾಡ ಮಣ್ಣಿನ ಗುಣವೇ ಸರಿ. ಆಧುನಿಕ ಯುಗದಲ್ಲಿ ಆಯವ್ಯಯ ಶಾಸ್ತ್ರದ ಸೇವೆಯಾಗಲಿ, ಹಣಕಾಸಿನ ಆಡಳಿತ, ವ್ಯಕ್ತಿ ಅಥವಾ ಸಂಸ್ಥೆಯ ವರಮಾನದ ಲೆಕ್ಕಾಚಾರ ಕಾನೂನಾತ್ಮಕವಾಗಿ ಸರಿದೂಗಿಸುವುದು ತುಂಬಾ ಕಷ್ಟದ ಕಾಯಕವಾಗಿದೆ. ಇಂತಹ ಸಮಯದಲ್ಲೂ ನಮ್ಮವರ ಕಾರ್ಯಕ್ಷಮತೆ ಸ್ತುತ್ಯರ್ಹ ಎಂದು ರಾಜರ್ಷಿ ಡಾ| ವೀರೇಂದ್ರ ಹೆಗ್ಗಡೆ ಅವರು ತಿಳಿಸಿ, ಸಿಎ ಜಗದೀಶ್ ಶೆಟ್ಟಿ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.
ಇದನ್ನೂ ಓದಿ:ಥಾಣೆಯ ಫ್ಲೈ ಓವರ್ ಬಂದ್
ಈ ಸಂದರ್ಭದಲ್ಲಿ ಡಾ| ವೀರೇಂದ್ರ ಹೆಗ್ಗಡೆ ಅವರ ಆಪ್ತ ಸಹಾಯಕ ಎ. ವಿ. ಶೆಟ್ಟಿ, ಶ್ರೀ ಮಂಜುನಾಥೇಶ್ವರ ಕಾಲೇಜು ಉಜಿರೆ ಇದರ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಎಂ. ಪಿ. ಶ್ರೀನಾಥ್ ಅರಸಿನಮಕ್ಕಿ, ಪತ್ರಕರ್ತ ಆರಿಫ್ ಕಲಕಟ್ಟಾ ಉಪಸ್ಥಿತರಿದ್ದರು.
ಅಪರಾಹ್ನ ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನಮ್ ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠಕ್ಕೆ ತೆರಳಿದ ಸಿಎ ಜಗದೀಶ್ ಶೆಟ್ಟಿ ಅವರು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ತಮ್ಮ ವಾರ್ಷಿಕ “ಡೈರಿ-2021′ ಅನ್ನು ಶ್ರೀಪಾದರಿಗೆ ನೀಡಿ ಅನುಗ್ರಹ ಪಡೆದರು.
ಇದನ್ನೂ ಓದಿ:ತ್ರಾಸಿ: ಮದುವೆ ಮಂಟಪದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.