ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ನೂತನ ಅಧ್ಯಕ್ಷರಾಗಿ ಎಲ್‌. ವಿ. ಅಮೀನ್‌ ಪದಗ್ರಹಣ

Team Udayavani, Dec 6, 2021, 12:07 PM IST

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ನೂತನ ಅಧ್ಯಕ್ಷರಾಗಿ ಎಲ್‌. ವಿ. ಅಮೀನ್‌ ಪದಗ್ರಹಣ

ಮುಂಬಯಿ: ಕರಾವಳಿಯ ಅಭಿವೃದ್ಧಿಗಾಗಿ ಸೇವಾ ನಿರತವಾಗಿ, ಮಹಾನಗರದಲ್ಲಿ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರು ಕ್ರಿಯಾಶೀಲ ರಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 21ನೇ ವಾರ್ಷಿಕ ಮಹಾಸಭೆ ನ. 5ರಂದು ಸಂಜೆ ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್‌ ಸಭಾಗೃಹದಲ್ಲಿ  ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಉದ್ಯಮಿ, ಸಮಾಜ ಸೇವಕ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮಾಜಿ ಅಧ್ಯಕ್ಷ ಎಲ್‌. ವಿ. ಅಮೀನ್‌ ಅವರನ್ನು ಸವಾರ್ನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರನ್ನು ನಿರ್ಗಮನ ಅಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿ ಅವರು ಪುಷ್ಪಗುತ್ಛ ನೀಡಿ ಅಭಿನಂದಿಸಿ ಸ್ವಾಗತಿಸಿದರು.

ಎಲ್‌. ವಿ. ಅಮೀನ್‌: 

ಮೂಲತಃ ಮಂಗಳೂರಿನ ಬಜಪೆಯವ ರಾದ ಎಲ್‌. ವಿ. ಅಮೀನ್‌ 1970ರಲ್ಲಿ ಬಜಪೆಯ ಸೈಂಟ್‌ ಜೋಸೆಫ್‌ ಪ್ರೀ ಯುನಿ ವರ್ಸಿಟಿ ಕಾಲೇಜಿನಲ್ಲಿ  ಶಿಕ್ಷಣ ಪಡೆದು ಮುಂಬಯಿ ಸೇರಿದರು. 1972ರಲ್ಲಿ  ಮುಂಬಯಿಯ ದಾದರ್‌ ಎಂಜಿನಿಯರಿಂಗ್‌ ಇನ್‌ಸ್ಟಿಟ್ಯೂಟ್‌ನಲ್ಲಿ  ಮೆಕಾನಿಕಲ್‌ ಡ್ರಾಫ್ಟ್‌ ಮೇನ್‌ ಪದವಿ ಗಳಿಸಿದರು. 1974ರಲ್ಲಿ ಅಂಬಿಕಾ ಗ್ರೂಫ್‌ ಆಫ್‌ ಕಂಪೆನಿಯನ್ನು ಸ್ಥಾಪಿಸಿ ತನ್ನ ಉದ್ಯಮವನ್ನು ಮುಂಬಯಿ ಮಾತ್ರವಲ್ಲದೆ ಗುಜರಾತ್‌ಗೂ ಪಸರಿಸಿದರು. ರಾಜಕೀಯದಲ್ಲೂ  ಕ್ರಿಯಾಶೀಲರಾಗಿರುವ ಅಮೀನರು ಬಿಜೆಪಿಯಲ್ಲಿ  1980ರಿಂದ ವಿವಿಧ ಜವಾಬ್ದಾರಿಯನ್ನು ಹೊಂದಿ ಸಮಾಜ ಸೇವೆ ಮಾಡುತ್ತಿದ್ದಾರೆ.

ದೀರ್ಘ‌ಕಾಲದಿಂದ ಬಿಲ್ಲವರ ಅಸೋಸಿ ಯೇಶನ್‌ ಮುಂಬಯಿ ಇದರಲ್ಲಿ  ಕಾರ್ಯ ನಿರತರಾಗಿರುವ ಎಲ್‌. ವಿ. ಅಮೀನ್‌ ಭಾರತ್‌ ಬ್ಯಾಂಕ್‌ನ ನಿರ್ದೇಶಕರಾಗಿಯೂ ಕನ್ನಡ ಸಂಘ ಸಂತಾಕ್ರೂಜ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷರಾಗಿ ದೀರ್ಘ‌ಕಾಲದಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಇವರು ಬಜಪೆ ದೊಡ್ಡಿಕಟ್ಟೆ ಶ್ರೀ ಸ್ವಯಂಭೂಲಿಂಗೇಶ್ವರ ಕ್ಷೇತ್ರದ ಅಧ್ಯಕ್ಷರಾಗಿ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಬಜ್ಪೆ ಕರಂಬಾರ್‌ ಇದರ ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ನಗರದ ಮಾತ್ರವಲ್ಲದೆ ನಾಡಿನ ಅನೇಕ ಸಂಘಟನೆಗಳು ಇವರನ್ನು ಗೌರವಿಸಿವೆ. ಇವರ ಸಾಧನೆಗಳಿಗೆ ಸಮಾಜರತ್ನ ಪುರಸ್ಕಾರ, ಭಾರತ ಜ್ಯೋತಿ ಪ್ರಶಸ್ತಿ, ಸುವರ್ಣ ಕನ್ನಡಿಗ ಪುರಸ್ಕಾರ, ಸಮಾಜ ಭೂಷಣ ಪ್ರಶಸ್ತಿ, ಯಶಸ್ವಿ ಸಂಧಾನಕಾರ, ಚಾರ್ಕೋಪ್‌ ಕನ್ನಡಿಗರ ಬಳಗದಿಂದ ಪ್ರಶಸ್ತಿ, ಏಶಿಯಾ ಸ್ಪೆಸಿಫಿಕ್‌ ಅವಾರ್ಡ್‌ ಇನ್ನಿತರ ಪ್ರಶಸ್ತಿ, ಪುರಸ್ಕಾರಗಳು ಸಂದಿವೆ.

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.