ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ : ವಾರ್ಷಿಕ ಬಹಿರಂಗ ಅಧಿವೇಶನ


Team Udayavani, Oct 8, 2018, 5:02 PM IST

0710mum14.jpg

ಮುಂಬಯಿ: ಸಮುದ್ರ ಮಾಲಿನ್ಯ ತಡೆ ಮತ್ತು ಉದ್ದಿಮೆಗಳಿಂದ ಪರಿಸರಕ್ಕೆ ಆಗುವ ತೊಂದರೆ ಹಾಗೂ ಸ್ಥಳೀಯ ಜನರು ಅನುಭವಿಸುವ ಸಮಸ್ಯೆಗಳಿಗೆ ಪರಿಹಾರ ಸೇರಿದಂತೆ ಸ್ಥಳೀಯರಿಗೆ ನೀಡಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ನಿರಂತರವಾಗಿ ಹೋರಾಟ ಮಾಡುತ್ತಿದೆ. ಪರಿಸರದ ಕಾಳಜಿಯನ್ನು ಇಟ್ಟುಕೊಂಡು ಬರುವ ಉದ್ದಿಮೆಗಳಿಗೆ ನಾವು ಪ್ರೋತ್ಸಾಹ ನೀಡುತ್ತೇವೆ. ಪ್ರಸ್ತುತ ಅವಿಭಜಿತ ಜಿಲ್ಲೆಗಳಲ್ಲಿ ಹಲವಾರು ಸಮಸ್ಯೆಗಳು ಮತ್ತೆ ಎದುರಾಗಿರುವುದು ವಿಷಾದ ನೀಯ. ನಂದಿಕೂರು ವಿದ್ಯುತ್‌ ಸ್ಥಾವರದಿಂದ ಸ್ಥಳೀಯ 50 ಕಿ. ಮೀ. ವ್ಯಾಪ್ತಿಯ ಪ್ರದೇಶದಲ್ಲಿ ನಿರಂತರ ವಿದ್ಯುತ್‌ ಸೌಲಭ್ಯವನ್ನು ಒದಗಿಸಬೇಕು. ವಿಮಾನ ನಿಲ್ದಾಣದಲ್ಲಿರುವ ಕೆಲವು ಸಮಸ್ಯೆಗಳು, ಮೀನುಗಾರರು ಅನುಭವಿಸುವ ತೊಂದರೆಗಳು ಸೇರಿದಂತೆ ಇನ್ನಿತರ ಸಮಸ್ಯೆಗಳಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಮುಂದೆಯೂ ಹೋರಾಟ ನಡೆಸಲಿದೆ. ಅವಿಭಜಿತ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಯ ಕನಸು ಸಮಿತಿಯದ್ದಾಗಿದೆ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ನೂತನ ಅಧ್ಯಕ್ಷ ತೋನ್ಸೆ ಜಯಕೃಷ್ಣ ಎ. ಶೆಟ್ಟಿ  ನುಡಿದರು.

ಅ. 5ರಂದು ಕುರ್ಲಾ ಪೂರ್ವದ ಬಂಟರ ಭವನದ ಅನೆಕ್ಸ್‌ ಕಟ್ಟಡದ ಸಭಾಗೃಹದಲ್ಲಿ ನಡೆದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವಾರ್ಷಿಕ ಬಹಿರಂಗ ಅಧಿವೇಶನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನನ್ನ ಮೇಲಿನ ಪ್ರೀತಿ, ಗೌರವ, ಅಭಿಮಾನದಿಂದ ಇದೀಗ ನನ್ನನ್ನು ಅಧ್ಯಕ್ಷನನ್ನಾಗಿ ಪುನಃ ಸರ್ವಾನುಮತದಿಂದ ಆಯ್ಕೆ ಮಾಡಿದ್ದೀರಿ. ಅದಕ್ಕೆ ನಿಮಗೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತಿದ್ದೇನೆ.  ಅವಿಭಜಿತ ಜಿಲ್ಲೆಗಳ ಅಭಿವೃದ್ಧಿಗಾಗಿ ನಾನು ಸದಾ ಪ್ರಯತ್ನಶೀಲನಾಗಿರುತ್ತೇನೆ. ಅದಕ್ಕೆ ನನಗೆ ಎಲ್ಲ ಜಾತೀಯ ಸಂಘ-ಸಂಸ್ಥೆಗಳ ಬೆಂಬಲದ ಅಗತ್ಯವಿದೆ. ಎಲ್ಲರ ಸಹಕಾರ ದೊರೆತರೆ ನಮ್ಮ ಜಿಲ್ಲೆಯು ಅಭಿವೃದ್ಧಿ ಹೊಂದುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಅಧಿವೇಶನದಲ್ಲಿ ಭಾಗ ವಹಿಸಿದ್ದ ಮುಂಬಯಿಯ ವಿವಿಧ ಜಾತಿಯ ಸಂಘಟನೆಗಳ ಅಧ್ಯಕ್ಷರನ್ನು ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.

ಸಮ್ಮಾನ ಸ್ವೀಕರಿಸಿ ಮಾತನಾಡಿದ ವಿಶ್ವ ಬಂಟ್ಸ್‌ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಜಯಕೃಷ್ಣ ಶೆಟ್ಟಿಯವರ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಮಾಡಿದ ಕಾರ್ಯ ಅಭಿನಂದನೀಯ. ಎಲ್ಲ  ಜಾತಿಯ ಸಂಸ್ಥೆಗಳನ್ನು ಒಟ್ಟು ಸೇರಿಸಿ ಒಂದೇ ವೇದಿಕೆಗೆ ತಂದು ಅವರ ಬೆಂಬಲದೊಂದಿಗೆ ಕೆಲಸ ಮಾಡುತ್ತಿರುವುದು ಅಭಿನಂದನಿಯ. ಜಿಲ್ಲೆಯ ಅಭಿವೃದ್ಧಿಯ ಮೇಲೆ ಅವರಿಗಿರುವ ಕಾಳಜಿಯನ್ನು ನೋಡಿದಾಗ ಸಂತೋಷವಾಗುತ್ತದೆ. ಒಳ್ಳೆಯ ಕೆಲಸ ಮಾಡುವವರಿಗೆ ಟೀಕೆ ಟಿಪ್ಪಣಿ ಬರುವುದು ಸಹಜ. ನಾವೆಲ್ಲರೂ ಅವರ ಜನಪರ ಕಾರ್ಯಗಳಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದು ನುಡಿದರು.

ಇನ್ನೋರ್ವ ಅತಿಥಿ ನ್ಯಾಯವಾದಿ ಮಹೇಶ್‌ ಕೋಟ್ಯಾನ್‌ ಇವರು ಮಾತನಾಡಿ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಯೋಜನೆಗಳನ್ನು ನೋಡುವಾಗ ಇದು ಒಂದು ಉತ್ತಮ ಕೆಲಸ ಮಾಡುವ ಸರಕಾರೇತರ ಸಂಸ್ಥೆ ಎಂದು ತಿಳಿಯುತ್ತದೆ. ಜಯಕೃಷ್ಣ ಶೆಟ್ಟಿ ಅವರೋರ್ವ ಹಠವಾದಿ ಮತ್ತು ಪರಿಶ್ರಮಿಗಳು. ಅವರು ಕೈಗೆತ್ತಿಕೊಂಡ ಕಾರ್ಯವನ್ನು ಮಾಡಿಯೇ ತೀರುತ್ತಾರೆ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ. ಪ್ರಸ್ತುತ ಅವರು ಸಮಿತಿಯ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುವುದು ಅಭಿನಂದನೀಯ. ಅವರ ಮುಂದಿನ ಯೋಜನೆ- ಯೋಚನೆಗಳಿಗೆ ನಮ್ಮೆಲ್ಲರ ಸಹಕಾರ ಅಗತ್ಯ. ನನ್ನಿಂದಾಗುವ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡಲು ಸಿದ್ಧನಿದ್ದೇನೆ ಎಂದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಐಕಳ ಹರೀಶ್‌ ಶೆಟ್ಟಿ, ವಿರಾರ್‌ ಶಂಕರ್‌ ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಎಲ್‌. ವಿ. ಅಮೀನ್‌, ದೇವಾಡಿಗ ಸಂಘದ ಮಾಜಿ ಅಧ್ಯಕ್ಷ ಧರ್ಮಪಾಲ್‌ ಯು. ದೇವಾಡಿಗ, ಗಾಣಿಗ ಸಮಾಜದ ರಾಮಚಂದ್ರ ಗಾಣಿಗ, ತೀಯಾ ಸಮಾಜದ ಮಾಜಿ ಅಧ್ಯಕ್ಷ ಚಂದ್ರಶೇಖರ್‌ ಬೆಳ್ಚಡ, ನ್ಯಾಯವಾದಿ ಮಹೇಶ್‌ ಕೋಟ್ಯಾನ್‌, ಸಮಾಜ ಸೇವಕ ಡಿ. ಎಂ. ಶೇರಿಗಾರ್‌, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ| ಸುರೇಂದ್ರ ಕುಮಾರ್‌ ಹೆಗ್ಡೆ ಅವರನ್ನು ಸಮಿತಿಯ ವತಿಯಿಂದ ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಗೌರವಿಸಲಾಯಿತು.

ಸಮಿತಿಯ ನಿರ್ಗಮನ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ ಅವರು ಸ್ವಾಗತಿಸಿದರು. ಎಲ್‌. ವಿ. ಅಮೀನ್‌ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷರುಗಳಾದ ಜಗದೀಶ್‌ ಅಧಿಕಾರಿ, ರಾಮಚಂದ್ರ ಬೆಳ್ತಂಗಡಿ, ಫೆಲಿಕ್ಸ್‌ ಡಿಸೋಜಾ, ಕಾರ್ಯದರ್ಶಿ ಸುರೇಂದ್ರ ಮೆಂಡನ್‌ ಮೊದಲಾದವರು ಉಪಸ್ಥಿತರಿದ್ದರು.

ವಿವಿಧ ಜಾತೀಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳಾದ ಬಿಎಸ್‌ಕೆಬಿ ಅಸೋಸಿಯೇಶನ್‌ನ ಉಪಾಧ್ಯಕ್ಷ ವಾಮನ್‌ ಹೊಳ್ಳ, ಬಂಟರ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಕೆ. ಎಲ್‌. ಬಂಗೇರ, ದೇವಾಡಿಗ ಸಂಘದ ಅಧ್ಯಕ್ಷ ರವಿ ದೇವಾಡಿಗ, ಗಾಣಿಗ ಸಮಾಜದ ಅಧ್ಯಕ್ಷ ರಾಮಚಂದ್ರ ಗಾಣಿಗ, ಕುಲಾಲ ಸಂಘದ ಅಧ್ಯಕ್ಷ ದೇವದಾಸ್‌ ಕುಲಾಲ್‌, ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ವಿಜಯ ಬಿ. ಹೆಗ್ಡೆ, ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ನ್ಯಾಯವಾದಿ ಸುಭಾಶ್‌ ಶೆಟ್ಟಿ, ಹೆಜಮಾಡಿ ಮೊಗವೀರ ಸಭಾದ ಅಧ್ಯಕ್ಷ ಕರುಣಾಕರ ಹೆಜ್ಮಾಡಿ, ಶಾಫಿ ವೆಲ್ಫೆàರ್‌ ಅಸೋಸಿಯೇಶನ್‌ ಇದರ ಮೊಯಿದೀನ್‌ ಮುಂಡ್ಕೂರು, ಮಹಾರಾಷ್ಟ್ರ ಒಕ್ಕಲಿಗರ ಸಂಘದ ಅಧ್ಯಕ್ಷ ಜಿತೇಂದ್ರ ಗೌಡ, ಭಂಡಾರಿ ಸೇವಾ ಸಂಘದ ಅಧ್ಯಕ್ಷ ನ್ಯಾಯವಾದಿ ಆರ್‌. ಎಂ. ಭಂಡಾರಿ, ಕ್ರಿಶ್ಚಿಯನ್‌ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀಸ್‌ ಇದರ ಆಂಟೋನಿ ಸಿಕ್ವೇರ, ಅಖೀಲ ಕರ್ನಾಟಕ ಜೈನ ಸಂಘದ ಅಧ್ಯಕ್ಷ ಮುನಿರಾಜ್‌ ಜೈನ್‌, ಸಾಫಲ್ಯ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಸಾಫಲ್ಯ, ರಾಮರಾಜ ಕ್ಷತ್ರಿಯ ಸಂಘದ ಗಣಪತಿ ಬಿ., ವಿಶ್ವಕರ್ಮ ಅಸೋಸಿಯೇಶನ್‌ನ ಅಧ್ಯಕ್ಷ ಸದಾನಂದ ಆಚಾರ್ಯ, ಬಿಎಸ್‌ಕೆಬಿ ವಡಾಲದ ಕಮಲಾಕ್ಷ ಸರಾಫ್‌, ತೀಯಾ ಸಮಾಜ ಮುಂಬಯಿ ಇದರ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ ಮೊದಲಾದವರು ಮಾತನಾಡಿ ಸೂಕ್ತ ಸಲಹೆ-ಸೂಚನೆಗಳನ್ನು ನೀಡಿದರು. ಚಂದ್ರಶೇಖರ ಬೆಳ್ಚಡ ಅವರು ಕಾರ್ಯಕ್ರಮ ನಿರ್ವಹಿಸಿದರು. ಜಿ. ಟಿ. ಆಚಾರ್ಯ ಅವರು  ವಂದಿಸಿದರು. ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಕಳೆದ ಹದಿನೇಳು ವರ್ಷಗಳಿಂದ ಪರಿಸರ ಪ್ರೇಮಿ ಸಮಿತಿಯು ಮಾಡುತ್ತಿರುವ ಕೆಲಸವನ್ನು ಕಣ್ಣಾರೆ ಕಂಡಿದ್ದೇನೆ. ಜಯಕೃಷ್ಣ ಶೆಟ್ಟಿ ಅವರು ಜಾರ್ಜ್‌ ಫೆರ್ನಾಂಡಿಸ್‌ ಅವರ ಸಹಕಾರದೊಂದಿಗೆ ಹಲವು ಅರ್ಥಪೂರ್ಣ ಕಾರ್ಯಯೋಜನೆಗಳನ್ನು ತಂದಿರುವುದು ಅಭಿನಂದನೀಯ. ಅವರ ಮುಂದಿನ ಯೋಜನೆಗಳಿಗೆ ಎಲ್ಲಾ ಸಂಘಟನೆಗಳು ಪ್ರೋತ್ಸಾಹಿಸಬೇಕು. ಪ್ರಸ್ತುತ ಅಧ್ಯಕ್ಷರಾಗಿ ಮತ್ತೆ ಆಯ್ಕೆಯಾಗಿರುವುದು ಸಮಿತಿಗೆ ಮತ್ತಷ್ಟು ಬಲಬಂದಂತಾಗಿದೆ. ಅವರಿಗೆ ಶುಭವಾಗಲಿ.
ಎಂ. ಡಿ. ಶೆಟ್ಟಿ , ಹಿರಿಯ ಕನ್ನಡಿಗರು

ಚಿತ್ರ-ವರದಿ:ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.