ಜೋಗೇಶ್ವರಿ ಶ್ರೀ ರಾಘವೇಂದ್ರ ಸ್ವಾಮಿ ಮಠ: ಬೃಂದಾವನ ಪ್ರತಿಷ್ಠಾಪನ ದಿನ

Team Udayavani, May 2, 2017, 5:04 PM IST

01-Mum04a.jpg

ಮುಂಬಯಿ: ಜೋಗೇಶ್ವರಿ ಪಶ್ಚಿಮದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಎ. 29ರಂದು ಅಕ್ಷಯ ತೃತೀಯ ಪವಿತ್ರ ದಿನದಂದು ರಾಯರ ಬೃಂದಾವನ ಮತ್ತು ಆಂಜನೇಯ ವಿಗ್ರಹವನ್ನು ಗಂಧಲೇಪನದಲ್ಲಿ ಅಲಂಕರಿಸುವ ಮೂಲಕ 46ನೇ ಬೃಂದಾವನ ಪ್ರತಿಷ್ಠಾಪನ ದಿನಾಚರಣೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಶ್ರೀ ಕೃಷ್ಣ ವಿಟuಲ ಪ್ರತಿಷ್ಠಾನ ಮುಂಬಯಿ ವತಿಯಿಂದ ಜರಗಿದ ಈ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ವಿಟuಲ  ಪ್ರತಿಷ್ಠಾನದ ಸಂಸ್ಥಾಪಕಾಧ್ಯಕ್ಷ ವೇದ ಪುರೋಹಿತ, ಹರಿಕಥಾ ವಿದ್ವಾಂಸ ಕೈರಬೆಟ್ಟು ವಿಶ್ವನಾಥ ಭಟ್‌ ಅವರ ನೇತೃತ್ವದಲ್ಲಿ ಎ. 28, ಎ. 29 ಹಾಗೂ ಎ. 30ರಂದು ಕ್ರಮವಾಗಿ ನಿರಂತರ ಮೂರು ದಿನಗಳಲ್ಲಿ ಭಕ್ತ ಪ್ರಹ್ಲಾದ, ಶ್ರೀ ರಾಘವೇಂದ್ರ ಮಹಿಮೆ ಮತ್ತು ಶ್ರೀನಿವಾಸ ಕಲ್ಯಾಣ ಹರಿಕಥಾ ಕಾಲಕ್ಷೇಪ ಕಾರ್ಯಕ್ರಮವು ನಡೆಯಿತು. ಶೇಖರ ಸಸಿಹಿತ್ಲು ಮತ್ತು ಬಳಗದವರು ಹಿಮ್ಮೇಳ ಹಾರ್ಮೋನಿಯಂ ಮತ್ತು ಮೃದಂಗದಲ್ಲಿ ಸಹಕರಿಸಿದರು.

ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುದೇಂದ್ರ ತೀರ್ಥ ಸ್ವಾಮೀಜಿ ಅವರ ಆಶೀರ್ವಾದಿಂದ ಜರಗಿದ ಈ ಧಾರ್ಮಿಕ ಕಾರ್ಯಕ್ರಮದ ಕೊನೆಯ ದಿನ ಶ್ರೀನಿವಾಸ ಪದ್ಮಾವತಿ ದೇವಿಗೆ ಕಲ್ಯಾಣೋತ್ಸವ ವಿವಿಧ ಧಾರ್ಮಿಕ, ವಿಧಿ-ವಿಧಾನಗಳ ಮೂಲಕ ನಡೆಯಿತು. ಮಠದ ಪ್ರಧಾನ ಅರ್ಚಕರಾದ ಗುರುರಾಜ ಆಚಾರ್‌ ಮತ್ತು ರಾಘವೇಂದ್ರ ಆಚಾರ್‌, ಮಠದ ಮುಖ್ಯ ಪ್ರಬಂಧಕರಾದ ರಮಾಕಾಂತ್‌ ಮಾನ್ವಿ, ವಿಚಾರಣಕರ್ತ, ದೇವಸ್ಥಾನದ ಪ್ರತಿನಿಧಿ ಡಾ| ವಿ. ಪೂರ್ಣಪ್ರಜ್ಞ ಅವರು  ಕಲ್ಯಾಣೋತ್ಸವದ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.

ಪ್ರಾರಂಭದಲ್ಲಿ ಶೃಂಗರಿಸಿದ ರಥದ ಮೂಲಕ ಶ್ರೀನಿವಾಸ ದೇವರ ವಿಗ್ರಹವನ್ನು ಓಲಗ, ವಾದ್ಯ, ಸಂಗೀತಗಳ ನಿನಾದದೊಂದಿಗೆ ದೇವಸ್ಥಾನದೊಳಗೆ ತಂದು ಪ್ರತಿಷ್ಠಾಪಿಸಲಾಯಿತು. ಅನಂತರ ಅರ್ಚಕರು, ಭೂದೇವಿ, ಶ್ರೀದೇವಿಯ ನಡುವೆ ವಿಗ್ರಹ ಇರಿಸಿ ಧಾರ್ಮಿಕ ಪಾರಂಪಾರಿಕವಾಗಿ ಪೂಜಾ ವಿಧಿಯ ಮೂಲಕ ಶ್ರೀನಿವಾಸ ಕಲ್ಯಾಣ ಉತ್ಸವವನ್ನು  ವಿಜೃಂಭಣೆಯಿಂದ ನಡೆಸಿದರು.  ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಾರತ್‌ ಕಾಲೇಜ್‌ ಆಫ್‌ ಫೈನ್‌ ಆರ್ಟ್ಸ್ ಮುಂಬಯಿ ಕಲಾವಿದೆ ಯಶೋದಾ ಮತ್ತು ಬಳಗದವರಿಂದ ಕಥಕ್ಕಳಿ, ಭರತನಾಟ್ಯ ಇತ್ಯಾದಿ ನೃತ್ಯ ಪ್ರಕಾರಗಳು ಪ್ರದರ್ಶನಗೊಂಡವು. ಮೂರು ದಿನಗಳ ಕಾಲ ನಡೆದ ಉತ್ಸವದಲ್ಲಿ ನೂರಾರು ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಬೃಂದಾವನವು 1971ರಲ್ಲಿ ಅಕ್ಷಯ ತೃತೀಯ ದಿನದಂದು ಪ್ರತಿಷ್ಠಾಪನೆಗೊಂಡಿದ್ದು, ಆ ಪ್ರಕಾರವಾಗಿ ಪ್ರತೀ ವರ್ಷ ಅಕ್ಷಯ ತೃತೀಯ ದಿನದಂದು ಪ್ರತಿಷ್ಠಾಪನಾ ದಿನಾಚರಣೆ, ಗಂಧಲೇಪನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. 

ಟಾಪ್ ನ್ಯೂಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.