ಜೂ. 9: ಹದಿನೈದನೇ ವಾರ್ಷಿಕ “ಮೆಗಾ ಆರ್ಥಿಕ ಸಹಾಯ ಮೇಳ’ಕ್ಕೆ ಚಾಲನೆ


Team Udayavani, Jun 6, 2019, 4:35 PM IST

3–sa

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ 15ನೇ ಮೆಗಾ ಆರ್ಥಿಕ ಸಹಾಯ ಮೇಳದ ಉದ್ಘಾಟನಾ ಸಮಾರಂಭ ಜೂ. 9ರಂದು ಬೆಳಗ್ಗೆ 10ರಿಂದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ದಿ| ವಾಸು ಕೆ. ಶೆಟ್ಟಿ ಅವರ ಸ್ಮರಣಾರ್ಥ ಚರಿಷ್ಮಾ ಬಿಲ್ಡರ್ì ಲಿಮಿಟೆಡ್‌ನ‌ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್‌ ವಿ. ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಅದ್ದೂರಿಯಾಗಿ ಜರಗಲಿದೆ.

ಪೂರ್ವಾಹ್ನ 10ರಿಂದ ಸಂಘದ ಪ್ರಾದೇಶಿಕ ಸಮಿತಿಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ಜರಗಲಿದ್ದು, ಪೂರ್ವಾಹ್ನ 11ರಿಂದ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಎಂಆರ್‌ಐ ಹಾಸ್ಪಿಟಾಲಿಟಿ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಚರ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೆ. ಪ್ರಕಾಶ್‌ ಶೆಟ್ಟಿ ಅವರು ಆರ್ಥಿಕ ಸಹಾಯ ಮೇಳವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಫೆಡರೇಶನ್‌ ಆಫ್‌ ವರ್ಲ್ಡ್ ಬಂಟ್ಸ್‌ ಅಸೋಸಿಯೇಶನ್‌ ಇದರ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಚರಿಷ್ಮಾ ಬಿಲ್ಡರ್ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್‌ ವಿ. ಶೆಟ್ಟಿ, ತುಂಗಾ ಗ್ರೂಪ್‌ ಆಫ್‌ ಹೊಟೇಲ್ಸ್‌ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧಾಕರ ಎಸ್‌. ಹೆಗ್ಡೆ, ಈಸ್ಟ್‌ ಬೆಸ್ಟೋಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪ್ರಭಾಕರ ಜೆ. ಶೆಟ್ಟಿ ಉಲ್ಲಾಸ್‌ನಗರ, ಎಸ್‌ವಿ ಇಂಗ್ಲಿಷ್‌ ಮೀಡಿಯಂ ಸ್ಕೂಲ್‌ ಮುರ್ಬಾಡ್‌ ಇದರ ವಿಶ್ವಸ್ತ ಡಾ| ಸುರೇಂದ್ರ ವಿ. ಶೆಟ್ಟಿ ಇವರು ಆಗಮಿಸಲಿದ್ದಾರೆ. ಸಮಾರಂಭದಲ್ಲಿ ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಭರ್ಜರಿ ಜಯಭೇರಿ ಗಳಿಸಿದ, ಸಂಘದ ಅಭಿವೃದ್ಧಿಗಾಗಿ ಸ್ಪಂದಿಸುತ್ತಿರುವ ಗೋಪಾಲ್‌ ಸಿ. ಶೆಟ್ಟಿ ಅವರನ್ನು ಬಂಟರ ಸಂಘದ ವತಿಯಿಂದ ಸಮ್ಮಾನಿಸಲಾಗುವುದು.

ಇದೇ ಸಂದರ್ಭದಲ್ಲಿ ಸಂಘದ ನವಿಮುಂಬಯಿ ಪ್ರಾದೇಶಿಕ ಸಮಿತಿ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ, ಸಿಟಿ ಪ್ರಾದೇಶಿಕ ಸಮಿತಿ, ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿ, ಥಾಣೆ-ಮುಲುಂಡ್‌ ವಲಯದ ಸಮಾಜ ಬಾಂಧವರಿಗೆ ಸಹಾಯ ಧನ ವಿತರಿಸಲಾಗುವುದು. ಸಮಾರಂಭದಲ್ಲಿ ಆದಾಯ ತೆರಿಗೆಯ ಅಸಿಸ್ಟೆಂಟ್‌ ಕಮಿಷನರ್‌ ನಿವ್ಯಾ ಪಿ. ಶೆಟ್ಟಿ ಐಆರ್‌ಎಸ್‌ ಇವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಗುವುದು. ಕಾರ್ಯಕ್ರಮದ ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿದೆ.

ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಆರ್‌. ಶೆಟ್ಟಿ ಐಕಳ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಎ. ಶೆಟ್ಟಿ, ಕಾರ್ಯದರ್ಶಿ ಖಾಂದೇಶ್‌ ಭಾಸ್ಕರ್‌ ವೈ. ಶೆಟ್ಟಿ, ಕೋಶಾಧಿಕಾರಿ ಸುರೇಶ್‌ ಬಿ. ಶೆಟ್ಟಿ ಮರಾಠ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್‌ ವಿ. ಶೆಟ್ಟಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಸಮಾಜ ಸೇವೆ
ಸುಮಾರು 92 ವರ್ಷಗಳ ಸುದೀರ್ಘ‌ ಇತಿಹಾಸ ಇರುವ ನಗರದ ಪ್ರತಿಷ್ಠಿತ ಹಿರಿಯ ಸಂಸ್ಥೆ ಬಂಟರ ಸಂಘವು ತನ್ನ ಸಾಮಾಜಿಕ ಕಳಕಳಿಯ ಯೋಜನೆಗಳಿಂದ ಬಂಟ ಸಮುದಾಯದ ಮನೆ-ಮನಗಳನ್ನು ಬೆಳಗುವ ನಿಟ್ಟಿನಲ್ಲಿ ವಿಶೇಷ ಕಾರ್ಯ ನಿರ್ವಹಿಸುತ್ತಿರುವ ಜೊತೆಗೆ ವಿಶ್ವದ ಬಂಟರ ಸಂಘಟನೆಗಳಲ್ಲಿ ಮಾದರಿ ಸಂಸ್ಥೆಯಾಗಿ ಬೆಳೆದು ನಿಂತಿದೆ. ಶಿಕ್ಷಣ ಒಂದೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಎನ್ನುವ ಘೋಷ ವಾಕ್ಯದೊಂದಿಗೆ ಪ್ರತಿಭೆ ಇದ್ದೂ ಆರ್ಥಿಕವಾಗಿ ಹಿಂದುಳಿದಿರುವ ಶಿಕ್ಷಣ ವಂಚಿತ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ, ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸುತ್ತಿದೆ. ವಿಕಲ ಚೇತನರಿಗೆ, ಆರ್ಥಿಕವಾಗಿ ಹಿಂದುಳಿದ ಸಮಾಜದ ಅಸಹಾಯಕ ಬಂಟ ವಿಧವೆಯರಿಗೆ ಸಹಾಯ ನೀಡುತ್ತಾ ಬರುತ್ತಿದೆ. ಸುಮಾರು ಹದಿನೈದು ವರ್ಷಗಳಿಂದ ನಿರಂತರವಾಗಿ ಆರ್ಥಿಕ ಸಹಾಯ ಮೇಳವನ್ನು ಆಯೋಜಿಸುತ್ತಾ ಬರುತ್ತಿದೆ. ಇತ್ತೀಚೆಗಿನ ದಿನಗಳಲ್ಲಿ ಸುಮಾರು ಒಂದೂವರೆ ಕೋ. ರೂ. ಗಳಷ್ಟು ನಿಧಿಯನ್ನು ವಿತರಿಸಲಾಗುತ್ತಿದೆ. ಪ್ರತಿ ವರ್ಷ ಸುಮಾರು 6 ಸಾವಿರಕ್ಕಿಂತರೂ ಅಧಿಕ ಬಂಟ ಬಾಂಧವರು ಪಾಲ್ಗೊಳ್ಳುತ್ತಿದ್ದಾರೆ.

ಅಧ್ಯಕ್ಷರ ನೂತನ ಯೋಜನೆ ಸಂಘದ ಅಧ್ಯಕ್ಷರಾಗಿ ಪದ್ಮನಾಭ ಎಸ್‌. ಪಯ್ಯಡೆ ಅವರು ಪದವಿ ಪಡೆದ ಸಂದರ್ಭ ದಲ್ಲಿ ಘೋಷಿಸಿದಂತೆ ಈ ವರ್ಷ ಹೊಸ ಯೋಜನೆಯೊಂದನ್ನು ಆರಂಭಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಸುಮಾರು 100 ವಿದ್ಯಾರ್ಥಿಗಳನ್ನು ಪ್ರಾಥಮಿಕ ಹಂತದಿಂದಲೇ ದತ್ತು ಸ್ವೀಕರಿಸಿ ಪ್ರತಿ ವಿದ್ಯಾರ್ಥಿಯ ವಾರ್ಷಿಕ ಶಿಕ್ಷಣದ ಖರ್ಚು ಸುಮಾರು 25 ಸಾವಿರ ರೂ. ಗಳನ್ನು ನೀಡುವ ಯೋಜನೆಗೆ ಪೂರಕವೆಂಬಂತೆ ಸುಮಾರು ನೂರು ದಾನಿಗಳು ತಮ್ಮ ಸ್ವಇಚ್ಛೆಯಿಂದ ಮುಂದೆ ಬಂದಿದ್ದು, ಪ್ರತಿಯೋರ್ವ ದಾನಿ ತಲಾ ಒಂದು ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲು ಮುಂದಾಗಿದ್ದಾರೆ.
ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಹಾಗೂ ಪದಾಧಿಕಾರಿಗಳಮಾರ್ಗದರ್ಶನದೊಂದಿಗೆ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ಈ ಬಾರಿ ವಿಧವಾ ಮಾಸಾಶನ ಮತ್ತು ವಿಕಲ ಚೇತನರಿಗೆ ನೀಡುವ ನಾಲ್ಕು ಸಾವಿರ ರೂ. ಮೊತ್ತವನ್ನು ಏಳು ಸಾವಿರ ರೂ. ಗಳಿಗೆ ಏರಿಸಲಾಗಿದೆ. ಜತೆಗೆ ಪ್ರಮಾಣ ಪತ್ರ ನೀಡುವ ಹೊಸ ಸ್ಕೀಮ್‌ವೊಂದನ್ನು ಆರಂಭಿಸಲಾಗಿದೆ.

ದಾನಿಗಳ ಸಹಕಾರ
ಈ ಬಾರಿಯ ವಾರ್ಷಿಕ ಬಂಟ ಸಾಧಕ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಮುತ್ಸದ್ಧಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಮಾಜಿ ವಿಶ್ವಸ್ತ ಎಂ. ಡಿ. ಶೆಟ್ಟಿ ಅವರು ತಮ್ಮ ಪ್ರಶಸ್ತಿ ಗೌರವ ಮೊತ್ತ ಒಂದು ಲಕ್ಷ ರೂ.ಗಳನ್ನು ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಗೆ ದೇಣಿಗೆಯಾಗಿ ನೀಡಿದ್ದಾರೆ. ಜಾಗತಿಕ ಬಂಟರ ಸಂಘ ಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಸಮಿತಿಗೆ ವಿಶೇಷ ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ. ದಾನಿಗಳಾದ ಪ್ರಕಾಶ್‌ ಶೆಟ್ಟಿ ಬಂಜಾರ, ಸುಧೀರ್‌ ವಿ. ಶೆಟ್ಟಿ, ಪ್ರಭಾಕರ ಜೆ. ಶೆಟ್ಟಿ ಅವರು ಪ್ರತಿ ವರ್ಷದಂತೆ ನಿಗದಿತ ಮೊತ್ತವನ್ನು ದೇಣಿಗೆ ರೂಪದಲ್ಲಿ ನೀಡಿ ಸಹಕರಿಸುತ್ತಾ ಬಂದಿದ್ದಾರೆ. ಈ ಬಾರಿ ಬಂದಿರುವ ಎಲ್ಲ ಅರ್ಜಿಗಳ ಪುನರ್‌ ಪರಿಶೀಲನೆಗಾಗಿ ಭಾಸ್ಕರ್‌ ಶೆಟ್ಟಿ ಕಾರ್ನಾಡ್‌ ಇವರ ಮುಂದಾಳತ್ವದಲ್ಲಿ ನೂತನ ಸಮಿತಿಯು ಕಾರ್ಯಪ್ರವೃತ್ತವಾಗಿದ್ದು, ಕಿಶೋರ್‌ ಕುಮಾರ್‌ ಕುತ್ಯಾರ್‌, ಶಿವಪ್ರಸಾದ್‌ ಶೆಟ್ಟಿ, ಗೌತಮ್‌ ಶೆಟ್ಟಿ, ಪ್ರಸನ್ನ ಶೆಟ್ಟಿ, ಸಂಘದ ಮಹಾಪ್ರಬಂಧಕ ಪ್ರವೀಣ್‌ ಶೆಟ್ಟಿ, ಪ್ರಬಂಧಕ ಸುಕುಮಾರ್‌ ಶೆಟ್ಟಿ, ಸಂಘದ ಸಿಬಂದಿಗಳು ಬಹಳಷ್ಟು ಶ್ರಮಿಸಿದ್ದಾರೆ.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.