ಕಾಲಘೋಡಾ ಸಾಯಿಬಾಬಾ ಪೂಜಾ ಸಮಿತಿ: 47ನೇ ವಾರ್ಷಿಕ ಪೂಜೆ

Team Udayavani, Oct 24, 2017, 2:13 PM IST

21-Mum06a.jpg

ಮುಂಬಯಿ: ಸದ್ಗುರು ಸಾಯಿ ಬಾಬಾರ ಆಶೀರ್ವಾದ, ಸಮಿತಿಯ ಸದಸ್ಯರ ಸಹಕಾರ ಹಾಗೂ ಭಕ್ತಾದಿಗಳ ಬೆಂಬಲದೊಂದಿಗೆ ಸಮಿತಿ ಕಳೆದ 47 ವರ್ಷಗಳಿಂದ ಸಾಯಿ ಮಹಾ ಪೂಜೆ ಹಾಗೂ ಇನ್ನಿತರ ಸಮಾಜಪರ ಸೇವೆಯನ್ನು ಮಾಡುತ್ತಿದೆ. ಪೂಜಾ ಸ್ಥಳದ ಅಭಾವ ಇದ್ದರೂ ಭಕ್ತರು ಪ್ರತಿ ಗುರುವಾರ ಪೂಜೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಬಂದು ಸಹಕರಿಸುತ್ತಿದ್ದಾರೆ. ಭಕ್ತರ ಈ ಗುಣವು ಸಮಿತಿಯ ಕಾರ್ಯಕ್ರಮಗಳಿಗೆ ಪ್ರೇರಣೆ ನೀಡುತ್ತಿದೆ ಎಂದು ಸಾಯಿಬಾಬಾ ಪೂಜಾ ಸಮಿತಿಯ ಅಧ್ಯಕ್ಷ ಮಾಧವ ಎಸ್‌. ಶೆಟ್ಟಿ ಹೇಳಿದರು.

ಅ. 19ರಂದು ಕಾಲಘೋಡಾ ಸಿಟಿ ಸಿವಿಲ್‌ ಕೋರ್ಟ್‌ನ ಸಮೀಪದ ಹೋಮ್‌ಸ್ಟ್ರೀಟ್‌ನಲ್ಲಿರುವ ಸಾಯಿ ಮಂದಿರದಲ್ಲಿ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡಾದ  47ನೇ ವಾರ್ಷಿಕ ಮಹಾಪೂಜೆಯ ಸಂದರ್ಭದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಶುಭ ಹಾರೈಸಿ ಮಾತನಾಡಿದ ಅವರು, ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ಆದರ್ಶ ಪ್ರಜೆಗಳಾಗಿ ಬಾಳಬೇಕು. ಸಾಯಿಬಾಬಾ ಸಮಿತಿಗೆ ಪ್ರತಿಭಾ ಪುರಸ್ಕಾರ ಪಡೆದ ಮಕ್ಕಳೇ ಮುಂದೆ ಪೋಷಿಸಿ ಬೆಳೆಸಬೇಕು ಎಂದರು.

ಸಮಿತಿಯ ಗೌರವ ಕಾರ್ಯದರ್ಶಿ ಪ್ರೊ| ಕೇಶವ ಎಚ್‌. ಕರ್ಕೇರ ಅವರು ಮಾತನಾಡಿ, ಸಮಿತಿಯು ಧಾರ್ಮಿಕ ಸೇವೆಯೊಂದಿಗೆ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು, ವೈದ್ಯಕೀಯ ನೆರವು, ಮಹಿಳೆಯರಿಗೆ ಹೊಲಿಗೆ ತರಬೇತಿ ಕೇಂದ್ರ ಇನ್ನಿತರ ಸಮಾಜಪರ ಸೇವೆಗಳಲ್ಲೂ ನಿರತವಾಗಿದೆ. ತುಳು-ಕನ್ನಡಿಗರು ಸಮಿತಿಯ ಇಂತಹ ಸಮಾಜಪರ ಕಾರ್ಯಕ್ರಮಗಳಿಗೆ ಸ್ಪಂದಿಸಬೇಕು ಎಂದು ನುಡಿದರು.

ಇದೇ ಸಂದರ್ಭದಲ್ಲಿ 47ನೇ ವಾರ್ಷಿಕ ಮಹಾಪೂಜೆಗೆ ಅಧಿಕ ಮೊತ್ತದ ಧನ  ಸಂಗ್ರಹಗೈದ ಮಾಧವ ಎಸ್‌. ಶೆಟ್ಟಿ, ಮುರಳಿ ಅಗ್ನಿàಶ್ವರ್‌ ಹಾಗೂ ಜಯ ಎಸ್‌. ಶೆಟ್ಟಿ ಅವರನ್ನು ಸಮಿತಿಯ ವತಿಯಿಂದ ಸ್ಮರಣಿಕೆ ಮತ್ತು ಪ್ರಸಾದವನ್ನಿತ್ತು ಗೌರವಿಸಲಾಯಿತು. ವರ್ಷದ ಉತ್ತಮ ಸಾಯಿ ಸೇವಕ ಪ್ರಶಸ್ತಿಯನ್ನು ಉದ್ಯಮಿ ಮುರಳಿ ಶೆಟ್ಟಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಾಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಸಾವರ್‌ಪಾಡಾದ ಶ್ರೀ ಶನೀಶ್ವರ ಮಂದಿರದ ಅರ್ಚಕ ವಿಷ್ಣು ಭಟ್‌ ಅವರಿಂದ ಕೃಷ್ಣ ದೇವಾಡಿಗ ದಂಪತಿಯ ಉಪಸ್ಥಿತಿಯಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಿತು. ಅನಂತರ ಕಲಶ ಪ್ರತಿಷ್ಠೆ, ವಿದ್ಯಾದಾಯಿನಿ ಸಭಾದ ಭಜನಾ ಸಮಿತಿಯವರಿಂದ ಭಜನೆ, ಪ್ರದೀಪ್‌ ಸುವರ್ಣ ಮತ್ತು ರಮೇಶ್‌ ಪೂಜಾರಿ ಅವರ ದಿವ್ಯ ಹಸ್ತದಿಂದ ಶ್ರೀ ಸಾಯಿ ಮಹಾಪೂಜೆ ಹಾಗೂ ಮಹಾಮಂಗಳಾರತಿ ನಡೆಯಿತು.

ಪರಿಸರದ ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನಿಸಲಾಯಿತು. ಟ್ರಸ್ಟಿಗಳಾದ ಅಡ್ವೆ ಜಯ ಎಸ್‌. ಶೆಟ್ಟಿ, ಸೀತಾರಾಮ ಎಸ್‌. ಶೆಟ್ಟಿ, ಜಯ ಎಂ. ಶೆಟ್ಟಿ, ಕೋಶಾಧಿಕಾರಿ ರವಿ ಡಿ. ಶೇಣವ, ಜತೆ ಕಾರ್ಯದರ್ಶಿ ರಮೇಶ್‌ ಬಿ. ಶೆಟ್ಟಿ, ಜತೆ ಕೋಶಾಧಿಕಾರಿ ಬಿ. ಎಂ. ಶೆಟ್ಟಿ, ಸಮಿತಿಯ ಸದಸ್ಯರಾದ ರವಿ ಎಸ್‌. ಶೆಟ್ಟಿ, ವೈ. ಎಸ್‌. ಪುತ್ರನ್‌, ಸುಧಾಕರ ಶೆಟ್ಟಿ, ರವಿ ಎನ್‌. ಶೆಟ್ಟಿ, ಮುರಳಿ ಅಗ್ನಿàಶ್ವರ್‌, ಅಬುಬಕ್ಕRರ್‌ ಹಾಗೂ ಕಮಲಾ ಎನ್‌. ಶೆಟ್ಟಿ  ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕನ್ನಡ ಭವನ ಸೊಸೈಟಿಯ ಅಧ್ಯಕ್ಷ ಎ. ಬಿ. ಶೆಟ್ಟಿ, ತ್ರಿಭುವನೇಶ್ವರಿ ಸಮಿತಿ ಬೋರಾಬಜಾರ್‌ನ ಉಪಾಧ್ಯಕ್ಷ ಪ್ರಕಾಶ್‌ ಮೂಡಬಿದ್ರೆ, ಪರಿಸರದ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಮುಖ್ಯಸ್ಥರು. ಸಾಯಿ ಭಕ್ತರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಕೊನೆಯಲ್ಲಿ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.