ಕಾಂದಿವಲಿ ಕನ್ನಡ ಸಂಘದ 23ನೇ ವಾರ್ಷಿಕ ಮಹಾಸಭೆ

Team Udayavani, Sep 13, 2017, 4:25 PM IST

11-Mum03a.jpg

ಮುಂಬಯಿ: ಸುಮಾರು 14 ಲಕ್ಷ ಕನ್ನಡಿಗರು ನೆಲೆಸಿರುವ  ನಗರದಲ್ಲಿ ಸಂಘಟನೆಯ ಮೂಲಕ ಕನ್ನಡ ನಾಡು-ನುಡಿಗೆ ಹಲವಾರು ಸಂಸ್ಥೆಗಳು ವಿಶೇಷ ಕೊಡುಗೆಯನ್ನು ನೀಡುತ್ತಿವೆ. ಹಿರಿಯರ ಮಾರ್ಗ ದರ್ಶನದಿಂದ ಕಾಂದಿವಲಿ ಕನ್ನಡ ಸಂಘವು ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಇದನ್ನು ಇನ್ನಷ್ಟು ಬಲಿಷ್ಠ ಸಂಘಟನೆಯನ್ನಾಗಿ ಮಾಡುವ ಕೆಲಸ ನಮ್ಮದಾಗಬೇಕು. ಈ ದಿಸೆಯಲ್ಲಿ ಸಂಘದ ಹಿರಿಯರು ನೀಡಿದ ಸಹಕಾರ ಸಂಘವು ಈ ಮಟ್ಟಕ್ಕೆ ತಲು ಪಲು ಕಾರಣವಾಗಿದೆ. ತುಳು-ಕನ್ನಡ, ಸಂಸ್ಕೃತಿಯನ್ನು ಉಳಿಸಿ-ಬೆಲೆಸುವಲ್ಲಿ ಸದಸ್ಯರೆಲ್ಲರ ಸಹಕಾರ ಅಗತ್ಯವಾಗಿದೆ. ನಾವೆಲ್ಲರು ಸಂಸ್ಥೆಯನ್ನು ಇನ್ನಷ್ಟು ಸಾಧನೆಯತ್ತ ಕೊಂಡೊಯ್ಯೋಣ ಎಂದು ಪೊಲ್ಯ ಜಯಪಾಲ ಶೆಟ್ಟಿ ಅವರು ನುಡಿದರು.

ಸೆ. 10 ರಂದು ಕಾಂದಿವಲಿ ಮಹಾವೀರ ನಗರದ ಪಾಂಚೋಲಿಯಾ ಶಾಲಾ ಸಭಾಗೃಹದಲ್ಲಿ ಜರಗಿದ ಕಾಂದಿವಲಿ ಕನ್ನಡ ಸಂಘದ 23 ನೇ  ಮಹಾಸಭೆಯ ಅಧ್ಯಕ್ಷತೆ ವಹಿಸಿ,  ಮಾತನಾಡಿದ ಅವರು, ಸಂಘದ ನೂತನ ಪುನರಾಭಿವೃದ್ಧಿ ಕಚೇರಿಯಲ್ಲಿ ಕಾಲಾನುಕಾಲಕ್ಕೆ ಖರ್ಚುವೆಚ್ಚಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಸಂಘದಲ್ಲಿ ನೂತನ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗಿ, ಸಂಘಕ್ಕೆ ಬೆನ್ನೆಲುಬಾಗಿ ನಿಂತರೆ, ಸಂಘವು ಎಲ್ಲಾ ವಿಧದಿಂದ ಯಶಸ್ವಿಯಾಗಲು ಸಾಧ್ಯವಿದೆ ಎಂದು ನುಡಿದರು.

ಮಹಾಸಭೆಯ ಪ್ರಾರಂಭದಲ್ಲಿ ಜೊತೆ ಕಾರ್ಯದರ್ಶಿ ಸಬಿತಾ ಜಿ. ಪೂಜಾರಿ ಮತ್ತು ಬಳಗದವರು ಪ್ರಾರ್ಥನೆಗೈದರು. ಅಧ್ಯಕ್ಷ ಪೊಲ್ಯ ಜಯಪಾಲ ಶೆಟ್ಟಿ ಸ್ವಾಗತಿಸಿದರು. ಗತ ವಾರ್ಷಿಕ ವರದಿಯನ್ನು ಮಂಡಿಸಿದ ಗೌರವ ಪ್ರಧಾನ ಕಾರ್ಯದರ್ಶಿ ಯೋಗೇಶ್‌ ಕೆ. ಹೆಜ್ಮಾಡಿ ಅವರು ಮಾತನಾಡಿ, ಭವಿಷ್ಯದಲ್ಲಿ ನೂತನ ಕಟ್ಟಡದಲ್ಲಿ ಸ್ಥಾಪನೆಗೊಳ್ಳುವ ಕಾಂದಿವಲಿ ಕನ್ನಡ ಸಂಘಕ್ಕೆ ನೂತನ ಯುವಜನರು ಆಸಕ್ತಿ ವಹಿಸಿ ಸಂಸ್ಥೆಯ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬೇಕು. ವಿದ್ಯಾನಿಧಿ ಪಡೆಯುವ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಶೈಕ್ಷಣಿಕ ಸಹಾಯಕ್ಕೆ ಮಹತ್ವ ನೀಡಬೇಕು. ಕಾಂದಿವಲಿ ಪ್ರದೇಶದಲ್ಲಿ ಕಾಂದಿವಲಿ ಕನ್ನಡ ಸಂಘದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಕೊಂಡೊಯ್ಯುವ ರೀತಿಯಲ್ಲಿ ಸಂಘವನ್ನು ನಾವು ಬೆಳೆಸಬೇಕು ಎಂದರು.

2016-2017 ನೇ ಕಾರ್ಯಕಾರಿ ಸಮಿತಿಯ ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಸಭೆಯನ್ನು ಅಂಗೀಕರಿಸಲಾಯಿತು. 2017-2018 ಸಾಲಿನ ಲೆಕ್ಕ ಪರಿಶೋಧಕರಾಗಿ ಜಯಕರ ಕುಕ್ಯಾನ್‌ ಅವರನ್ನು ನೇಮಿಸಲಾಯಿತು. ಸಭಿಕರ ಪರವಾಗಿ ಸಲಹೆಗಾರ ಮಂಜಯ್ಯ ಸಿ. ಅಮೀನ್‌ ಅವರು ಮಾತನಾಡಿ, ಸಂಘದಲ್ಲಿ ಮಹಿಳೆಯರ ಕಾರ್ಯಕ್ರಮಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ಮೂಲಕ ಅವರನ್ನು ಬೆಂಬಲಿಸಬೇಕು. ವಿದ್ಯಾನಿಧಿ ಯೋಜನೆ ಇನ್ನಷ್ಟು ವಿಸ್ತಾರವಾಗಿ ಮತ್ತು ಸಮರ್ಪಕವಾಗಿ ಜಾರಿಯಾಗಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಜಿ. ಟಿ. ಪೂಜಾರಿ, ಉಪಾಧ್ಯಕ್ಷ ಪ್ರೇಮನಾಥ್‌ ಪಿ. ಕೋಟ್ಯಾನ್‌, ಗೌರವ ಕೋಶಾಧಿಕಾರಿ ಸುಂದರ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸರೋಜಾ ಎನ್‌. ಶೆಟ್ಟಿ ಅವರು ಉಪಸ್ಥಿತರಿದ್ದರು. ಜತೆ ಕಾರ್ಯದರ್ಶಿ ಉಮೇಶ್‌ ಸುರತ್ಕಲ್‌ ವಂದಿಸಿದರು. ಮಹಾಸಭೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಸದಸ್ಯ ಬಾಂಧವರು ಪಾಲ್ಗೊಂಡಿದ್ದರು. 

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.