ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ದಶಮಾನೋತ್ಸವ ಸಮಾರೋಪ


Team Udayavani, Mar 3, 2017, 5:17 PM IST

289.jpg

ಮುಂಬಯಿ: ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ದಶಮಾನೋತ್ಸವ ಸಮಾರಂಭವು ಫೆ. 25 ರಂದು ಪೂರ್ವಾಹ್ನ ಕುರ್ಲಾ ಪೂರ್ವ ಬಂಟರ ಭವನದ ಶ್ರೀಮತಿ ರಾಧಾಭಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ದಿನವಿಡೀ ಜರಗಿತು.

ಬಂಟ್ಸ್‌ ಸಂಘ ಮುಂಬಯಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ ಸುರೇಂದ್ರ ಕುಮಾರ್‌ ಹೆಗ್ಡೆ ಅವರು ವಹಿಸಿದ್ದರು.

ಸಮಾರಂಭದಲ್ಲಿ ಕಲಾಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಹಿರಿಯ ಯಕ್ಷಗಾನ ಅರ್ಥದಾರಿ  ಕೆ. ಕೆ. ಶೆಟ್ಟಿ, ಬಿ. ಬಿ. ಜೋಶಿ, ದೇವದಾಸ ಶೆಟ್ಟಿ, ರಾಘು ಪಿ. ಶೆಟ್ಟಿ, ಶೈಲಜಾ ಮಧುಸೂದನ್‌, ಶೇಖರ್‌ ಕೋಟ್ಯಾನ್‌, ಶಿವರಾಜ್‌ ಸುವರ್ಣ, ಚಂದ್ರಪ್ರಭಾ ಸುವರ್ಣ, ಶ್ಯಾಮ್‌ ಎನ್‌. ಶೆಟ್ಟಿ ಕೆಮ್ರಾಲ್‌ ಅವರನ್ನು ಗಣ್ಯರ ಸಮ್ಮುಖದಲ್ಲಿ  ಸಮ್ಮಾನಿಸಿ ಗೌರವಿಸಲಾಯಿತು. ಸನ್ಮಾನಿತರ ಪರವಾಗಿ ಕೆ. ಕೆ. ಶೆಟ್ಟಿ ಮತ್ತು ರಾಘು ಪಿ. ಶೆಟ್ಟಿ ಅವರು ಮಾತನಾಡಿ ಗೌರವಕ್ಕೆ ಕೃತಜ್ಞತೆ ಸಲ್ಲಿಸಿದರು.

ಸಮಾರಂಭದಲ್ಲಿ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಶ್ರೀ  ಕೃಷ್ಣ ವಿಠಲ ಪ್ರತಿಷ್ಠಾನ ಮುಂಬಯಿ  ಸಂಸ್ಥಾಪಕ ವಿದ್ವಾನ್‌ ಕೈರಬೆಟ್ಟು  ವಿಶ್ವನಾಥ ಭಟ್‌, ಉದ್ಯಮಿ ಹಾಗೂ ಸಮಾಜ ಸೇವಕರುಗಳಾದ ಬಿ. ವಿವೇಕ ಶೆಟ್ಟಿ, ಕರುಣಾಕರ್‌ ಎಂ. ಶೆಟ್ಟಿ, ಶಂಕರ ಶೆಟ್ಟಿ ವಿರಾರ್‌, ಭಾಸ್ಕರ ಶೆಟ್ಟಿ ಖಾಂದೇಶ್‌,  ಶ್ರೀನಿವಾಸ ಸಾಫಲ್ಯ,  ಎನ್‌. ಎನ್‌. ಪಾಲ್‌, ಐಕಳ ಗುಣಪಾಲ ಶೆಟ್ಟಿ, ಡಾ| ಆರ್‌. ಕೆ. ಶೆಟ್ಟಿ, ಸಂತೋಷ್‌ ಶೆಟ್ಟಿ ಪುಣೆ, ಲತಾ ಪ್ರಭಾಕರ್‌ ಶೆಟ್ಟಿ, ಅಮರನಾಥ ಶೆಟ್ಟಿ, ಬಂಟ್ಸ್‌ ಸಂಘ ಮುಂಬಯಿ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಜತೆ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಶೆಟ್ಟಿ ಕುತ್ಯಾರ್‌, ಜತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಲತಾ ಜಯರಾಮ ಶೆಟ್ಟಿ, ಬಂಟ್ಸ್‌ ಸಂಘ ಮುಂಬಯಿ ಇದರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ.ಭಂಡಾರಿ, ದಶಮಾನೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿ ದೇವದಾಸ ಪಿ. ಸಾಲ್ಯಾನ್‌, ಪರಿಷತ್ತಿನ ಸಂಸ್ಥಾಪಕಾಧ್ಯಕ್ಷ ಎಸ್‌. ಟಿ. ವಿಜಯಕುಮಾರ್‌ ತಿಂಗಳಾಯ, ಉಪಾಧ್ಯಕ್ಷರುಗಳಾದ ಕಮಲಾಕ್ಷ ಜಿ. ಸರಾಫ್‌ ಮತ್ತು ನ್ಯಾಯವಾದಿ ಸುಭಾಷ್‌ ಬಿ. ಶೆಟ್ಟಿ, ಗೌ| ಕೋಶಾಧಿಕಾರಿ ಪಿ. ಬಿ. ಚಂದ್ರಹಾಸ್‌, ಜೊತೆ ಕಾರ್ಯದರ್ಶಿ ಚಂದ್ರಾವತಿ ದೇವಾಡಿಗ, ಜೊತೆ ಕೋಶಾಧಿಕಾರಿ ನವೀನ್‌ ಶೆಟ್ಟಿ ಇನ್ನಬಾಳಿಕೆ ಅವರು ಉಪಸ್ಥಿತರಿದ್ದರು.

ವಿಶೇಷ ಆಮಂತ್ರಿತರುಗಳಾಗಿ ಉಮಾಕೃಷ್ಣ ಶೆಟ್ಟಿ,  ಶಿವರಾಮ ಜಿ. ಶೆಟ್ಟಿ ಅಜೆಕಾರು, ಶ್ಯಾಮ ಎನ್‌. ಶೆಟ್ಟಿ, ಭಾಸ್ಕರ ಶೆಟ್ಟಿ ಕಾಶಿಮೀರಾ, ರತ್ನಾಕರ ಶೆಟ್ಟಿ ಮುಂಡ್ಕೂರು, ಹರೀಶ್‌ ಎನ್‌. ಶೆಟ್ಟಿ ಮಲಾಡ್‌, ಸಿಎ ಸದಾಶಿವ ಶೆಟ್ಟಿ, ಕುಶಲ ಭಂಡಾರಿ ಥಾಣೆ, ಸುಧಾಕರ ಜಿ. ಪೂಜಾರಿ, ಮಂಜುನಾಥ ಬನ್ನೂರು, ಸುಬ್ಬಯ್ಯ ಶೆಟ್ಟಿ ಕಲ್ಯಾಣ್‌, ಸಂಯೋಜಕರುಗಳಾದ ಕರ್ನೂರು ಮೋಹನ್‌ ರೈ ಮತ್ತು ಪದ್ಮನಾಭ ಸಸಿಹಿತ್ಲು, ದಶಮಾನೋತ್ಸವ ಸಮಿತಿಯ ಉಪಾಧ್ಯಕ್ಷ ಅನಿಲ್‌ ಶೆಟ್ಟಿ ಏಳಿಂಜೆ, ಕೈಪಿಡಿ ಸಮಿತಿಯ ಕಾರ್ಯಾಧ್ಯಕ್ಷ ಜಿ. ಟಿ. ಆಚಾರ್ಯ, ಸಂಚಾಲಕ ಸಾ. ದಯಾ ಮೊದಲಾದವರು ಉಪಸ್ಥಿತರಿದ್ದು ಡಾ| ಸುನೀತಾ ಎಂ. ಶೆಟ್ಟಿ ಅವರನ್ನು ಅಭಿನಂದಿಸಿದರು. 

 ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.