ಕನ್ನಡ ಕಲಾಕೇಂದ್ರ ಮುಂಬಯಿ 11ನೇ ವಾರ್ಷಿಕ ಯಕ್ಷೋತ್ಸವ-2019


Team Udayavani, Feb 23, 2019, 12:30 AM IST

2202mum09.jpg

ಮುಂಬಯಿ: ಯಕ್ಷಗಾನ ವನ್ನು ಉಳಿಸಿ-ಬೆಳೆಸುವಲ್ಲಿ  ಶ್ರೀ ಇಡ ಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇವರ ಕೊಡುಗೆ ಅಪಾರವಾಗಿದೆ. ಕೆರೆಮನೆ ಯವರು ಪಾರಂಪಾರಿಕವಾಗಿ ಯಕ್ಷಗಾನಕ್ಕೆ ವಿಶೇಷ ಕೊಡುಗೆಯನ್ನು ನೀಡಿ, ಕಲೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಿದ ಕೀರ್ತಿ ಈ ತಂಡಕ್ಕೆ ಲಭಿಸುತ್ತದೆ. ಕಲೆ-ಕಲಾವಿದರನ್ನು ಪೋಷಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕಿನ ಮಾಜಿ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಎಂ. ನರೇಂದ್ರ ಅವರು ನುಡಿದರು.

ಫೆ. 21 ರಂದು ವಡಾಲ ಶ್ರೀ ರಾಮಮಂದಿರದಲ್ಲಿ ಕನ್ನಡ ಕಲಾಕೇಂದ್ರ ಮುಂಬಯಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ, ಗೋಕರ್ಣ ಪರ್ಥಗಾಳಿ ಜೀವೋತ್ತಮ ಮಠ ವಡಾಲ ಇವರ ಪ್ರಾಯೋಜಕತ್ವದಲ್ಲಿ ನಡೆದ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇವರ 11 ನೇ ಯಕ್ಷೋತ್ಸವ-2019 ಕ್ಕೆ ಚಾಲನೆ ನೀಡಿ ಮಾತನಾಡಿದ ಇವರು, ಯಕ್ಷಗಾನವು ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸುವುದಲ್ಲದೆ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಾ ಬಂದಿದೆ. ಇಂದಿನ ಕಾಲಘಟ್ಟದಲ್ಲಿ ಯುವಜನತೆ ಯಕ್ಷಗಾನದತ್ತ ಆಕರ್ಷಿತರಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ನಾನು ಯಕ್ಷಗಾನಕ್ಕೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದ್ದೇನೆ. ಭವಿಷ್ಯದಲ್ಲೂ ನನ್ನ ಸಹಕಾರ, ಪ್ರೋತ್ಸಾಹ ಸದಾಯಿದೆ ಎಂದು ನುಡಿದರು.

ಇನ್ನೋರ್ವ ಅತಿಥಿ ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸವ ಮಂಡಳದ ಮಾಜಿ ಕಾರ್ಯಾಧ್ಯಕ್ಷ ಎನ್‌. ಎನ್‌. ಪಾಲ್‌ ಇವರು ಮಾತನಾಡಿ, ಕನ್ನಡ ಕಲಾಕೇಂದ್ರವು ಮುಂಬಯಿ ಯ ವಿವಿಧೆಡೆಗಳಲ್ಲಿ ಊರಿನ ಪ್ರಸಿದ್ಧ ಕಲಾತಂಡವನ್ನು ಆಹ್ವಾನಿಸಿ ಕಲಾಸೇ ವೆಗೈಯುವುದರ ಮೂಲಕ ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿರು ವುದು ಶ್ಲಾಘನೀಯ ಎಂದರು.

ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ತಂಡದ ಪರವಾಗಿ ಮಾತನಾಡಿದ ಶ್ರೀಧರ ಹೆಗ್ಡೆ, ಯಕ್ಷಗಾನವನ್ನು ಉತ್ತಮ ರೀತಿಯಲ್ಲಿ, ಶಿಸ್ತುಬದ್ಧವಾಗಿ ಪ್ರದರ್ಶಿಸಿ ಮುಂದಿನ ಪೀಳಿಗೆಗೂ ಕಲೆಯ ಬಗ್ಗೆ ಅರಿವನ್ನು ಮೂಡಿಸಬೇಕು ಎಂಬುವುದು ನಮ್ಮ ಉದ್ಧೇಶವಾಗಿದೆ. ನಮಗೆ ಈ ಅವಕಾಶವನ್ನು ನೀಡಿದ ಕನ್ನಡ ಕಲಾಕೇಂದ್ರ ಮತ್ತು ಇತರ ಆಯೋಜಕರಿಗೆ, ಪ್ರಾಯೋಜಕರಿಗೆ, ಮುಂಬಯಿಯ ಕಲಾಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕೊಂಕಣಿ ರಂಗಕರ್ಮಿ, ವಡಾಲ ಶ್ರೀರಾಮ ಮಂದಿರ ಮಠದ ವಕ್ತಾರ ಕಮಲಾಕ್ಷ ಸರಾಫ್‌ ಇವರು, ವಡಾಲ ಶ್ರೀ ರಾಮ ಮಂದಿರವು ಯಕ್ಷಗಾನ ಕಲೆಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದೆ. ಭವಿಷ್ಯದಲ್ಲೂ ಯಕ್ಷಗಾನ ಕಲೆ ಹಾಗೂ ಕಲಾವಿದರಿಗೆ ನಮ್ಮ ಪ್ರೋತ್ಸಾಹ, ಸಹಕಾರ ಸದಾಯಿದೆ ಎಂದು ನುಡಿದರು.

ಪ್ರಾರಂಭದಲ್ಲಿ ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಯಕ್ಷೋತ್ಸವಕ್ಕೆ ಚಾಲನೆ ನೀಡಿದರು. ಜಿಎಸ್‌ಬಿ ಮಂಡಳದ ವಿಶ್ವಸ್ಥ  ಶಾಂತಾರಾಮ ಭಟ್‌ ಇವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಸಮಿತಿಯ ಸದಸ್ಯರುಗಳಾದ ಜಿ. ಎಂ. ಕಾಮತ್‌ ಮಾತನಾಡಿ ಕಲಾವಿದರನ್ನು ಅಭಿನಂದಿಸಿದರು. ಕನ್ನಡ ಕಲಾಕೇಂದ್ರ ದ ಕಾರ್ಯದರ್ಶಿ ಮಧುಸೂ ದನ್‌ ಟಿ. ಆರ್‌. ಅವರು ಕಾರ್ಯಕ್ರಮ ನಿರ್ವಹಿಸಿದರು. ಯಕ್ಷಗಾನ ವಿಭಾಗದ ಕಾರ್ಯಾಧ್ಯಕ್ಷ ರಮೇಶ್‌ ಬಿರ್ತಿ ವಂದಿಸಿದರು. ಪ್ರಾರಂಭದಲ್ಲಿ ಇತ್ತೀಚೆಗೆ ಜಮ್ಮು ಕಾಶ್ಮೀರಾದಲ್ಲಿ ನಡೆದ ಉಗ್ರರ ಪೈಶಾಚಿಕ ಕೃತಕ್ಕೆ ಹುತಾತ್ಮರಾದ ವೀರ ಯೋಧರಿಗೆ ಹಣತೆ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ  ಶ್ರೀ ಇಡಗುಂಜಿ   ಮಹಾಗಣಪತಿ  ಯಕ್ಷಗಾನ ಮಂಡಳಿ ಕೆರೆಮನೆ ಕಲಾವಿದರುಗಳಿಂದ ಸೀತಾಪಹರಣ ಯಕ್ಷಗಾನ ಪ್ರದರ್ಶನ ಗೊಂಡಿತು. ಶಿವಾನಂದ ಹೆಗಡೆ ಇವರ ನಿರ್ದೇಶನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ಭಾಗವತ ರಾಗಿ ದಂತಳಿಕೆ ಅನಂತ ಹೆಗಡೆ, ಮದ್ದಳೆಯಲ್ಲಿ ಮೂರುರು ನರಸಿಂಹ ಹೆಗಡೆ, ಚೆಂಡೆಯಲ್ಲಿ ಕೃಷ್ಣಯಾಜಿ ಇಡಗುಂಜಿ, ಕಲಾವಿದರುಗಳಾಗಿ ಶ್ರೀಪಾದ ಹೆಗಡೆ ಹಡಿನಬಾಳ, ಕೆರೆಮನೆ ಶಿವಾನಂದ ಹೆಗಡೆ, ಶಿರಳಗಿ ತಿಮ್ಮಪ್ಪ ಹೆಗಡೆ, ಈಶ್ವರ್‌ ಭಟ್‌ ಹೊಸಳ್ಳಿ, ಚಂದ್ರಶೇಖರ್‌ ಎಸ್‌., ಕೆರೆಮನೆ ಶ್ರೀಧರ ಹೆಗಡೆ, ವಿನಾಯಕ ನಾಯ್ಕ ಅವರು ಭಾಗವಹಿಸಿದ್ದರು.  ಸ್ತಿÅàಪಾತ್ರದಲ್ಲಿ ಸದಾಶಿವ ಭಟ್‌ ಯಲ್ಲಾಪುರ,  ಗಣಪತಿ ಕುಣಬಿ,  ನಕುಲ್‌ ಗೌಡ, ಹಾಸ್ಯದಲ್ಲಿ ಸೀತಾರಾ ಮ ಹೆಗಡೆ ಮುಡಾಕಿ ಇವರು ಪಾಲ್ಗೊಂಡಿದ್ದರು. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹರಿಸಿದರು. 

 ಯಕ್ಷಗಾನವು ನಮ್ಮ ಶ್ರೀಮಂತ ಕಲೆಯಾ ಞಗಿದ್ದು, ಯಕ್ಷಗಾನ ಅಕಾಡೆಮಿ ಯನ್ನು ಸ್ಥಾಪಿಸುವುದರ ಮೂಲಕ ಯಕ್ಷಗಾನಕ್ಕೆ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ. ಯಕ್ಷಗಾನವು  ಕೇವಲ ಜಾನಪದ ಕಲೆಯಲ್ಲ, ಇದರಲ್ಲಿ ಅನೇಕ ವಿಶೇಷತೆಗಳಿದ್ದು, ಧಾರ್ಮಿಕ ಚಿಂತನೆಯನ್ನು ಮೂಡಿಸಲು ಯಕ್ಷಗಾನ ಸಹಕಾರಿಯಾ ಗುತ್ತಿದೆ. ಮುಂಬಯಿಯಲ್ಲಿ ಯಕ್ಷೋತ್ಸವದ ಮೂಲಕ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ನಿಮ್ಮೆಲ್ಲರ ಕಲಾಭಿಮಾನ ಅಭಿನಂದನೀಯ.
 – ಡಾ| ಸುನೀತಾ ಎಂ. ಶೆಟ್ಟಿ ,ಹಿರಿಯ ಸಾಹಿತಿ

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.