ಕನ್ನಡ ಸಂಘ ಪುಣೆ : ವಾರ್ಷಿಕ ಪ್ರತಿಭಾ ಪ್ರದರ್ಶನ
Team Udayavani, Mar 5, 2019, 5:13 PM IST
ಪುಣೆ: ಕನ್ನಡ ಸಂಘ ಪುಣೆ ವತಿಯಿಂದ ಸಂಘದ ಸದಸ್ಯರಿಗಾಗಿ ಹಮ್ಮಿಕೊಂಡ ವಾರ್ಷಿಕ ಪ್ರತಿಭಾ ಪ್ರದರ್ಶನವನ್ನು ಮಾ. 1ರಂದು ಸಂಘದ ಡಾ| ಕಲ್ಮಾಡಿ ಶಾಮರಾವ್ ಕನ್ನಡ ಮಾಧ್ಯಮ ಹೈಸ್ಕೂಲ್ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಯಿತು.
ಪ್ರತಿ ವರ್ಷ ಮಾರ್ಚ್ ಒಂದರಂದು ಕನ್ನಡ ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ| ಕಲ್ಮಾಡಿ ಶಾಮರಾವ್ ಅವರ ಜನ್ಮದಿನದ ನಿಮಿತ್ತ ಕನ್ನಡ ಸಂಘದ ಸದಸ್ಯರು ಮತ್ತು ಪರಿವಾರದ ಸದಸ್ಯರಿಗಾಗಿ ಈ ಕಾರ್ಯಕ್ರಮವನ್ನು ಆಚರಿಸುತ್ತಾ ಬಂದಿದೆ. ಈ ವರ್ಷ ದಿವಂಗತ ಡಾ| ಕಲ್ಮಾಡಿ ಶಾಮರಾಯರ ಜನ್ಮಶತಾಬ್ದಿ ವರ್ಷದಲ್ಲಿ ಅವರ ಮೆಚ್ಚಿನ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಹಲವಾರು ಸಮಾಜೋಪಯೋಗಿ ಕಾರ್ಯಕ್ರಮಗಳನ್ನು ವೈಶಿಷ್ಟéಪೂರ್ಣವಾಗಿ ಶ್ರದ್ಧಾಪೂರ್ವಕವಾಗಿ ಆಚರಿಸಿ ಅವರಿಗೆ ಆದರಾಂಜಲಿ ಅರ್ಪಿಸಲಾಯಿತು.
ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲಿಯಾನ್, ಕಾರ್ಯದರ್ಶಿ ಮಾಲತಿ ಕಲ್ಮಾಡಿ ಮತ್ತಿತರ ಗಣ್ಯರು ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನಸಂಪರ್ಕಾಧಿಕಾರಿ ರಾಮದಾಸ್ ಆಚಾರ್ಯರು ಸ್ವಾಗತಿಸಿ,
ಇಂದಿನ ಸಮಾರಂಭ ಮುಖ್ಯವಾಗಿ ಸಂಘದ ಸದಸ್ಯರಿಗಾಗಿ ತಮ್ಮಲ್ಲಿ ಹುದುಗಿರುವ ಕಲಾ ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಒದಗಿ ಬರಲೆಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾ ಪ್ರದರ್ಶನ ನೀಡುತ್ತಿರು
ವುದು ಸಂತಸದ ಸಂಗತಿಯಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ನಿಧನರಾದ ವಿಶ್ವಸ್ತ ಗೋವರ್ಧನ ಶೆಟ್ಟಿ ಮತ್ತು ಸದಸ್ಯ ಮಾಧವ ಹರಿಹರ ಅವರಿಗೆ ಎರಡು ನಿಮಿಷ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕಾರ್ಯಕ್ರಮದಂಗವಾಗಿ ಭಜನೆ, ವಿವಿಧ ನೃತ್ಯ, ಕವಿತೆ ಮತ್ತು ಹಾಸ್ಯ ಚುಟುಕುಗಳು ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ನೆರೆದ ಕಲಾರಸಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು.
ಭಾಗವಹಿಸಿದ ಎಲ್ಲ ಪ್ರತಿಭಾನ್ವಿತರಿಗೆ ಪ್ರಶಸ್ತಿ ಹಾಗೂ ಸ್ಮರಣಿಕೆಗಳನ್ನು ನೆರೆದ ಗಣ್ಯರಿಂದ ಹಸ್ತದಿಂದ ನೀಡಲಾಯಿತು. ವಿಲ್ಮಾ ಮಾರ್ಟಿಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮ ಮುಖ್ಯ ಶಿಕ್ಷಕರಾದ ಚಂದ್ರಕಾಂತ ಹಾರಕೂಡೆ, ಮಾಜಿ ಪ್ರಾಧ್ಯಾಪಕಿ ಸುನೀತಾ ಶಿರಗುಪ್ಪಿ ಮತ್ತು ಸದಸ್ಯರು ಪರಿವಾರದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದರು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್ ಸುತ್ತ ಸ್ವಚ್ಛತೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.