ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ 12ನೇ ವಾರ್ಷಿಕ ಕಲೋತ್ಸವ
Team Udayavani, Feb 10, 2019, 5:04 PM IST
ಮುಂಬಯಿ: ಕನ್ನಡಿಗರ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಸಂಸ್ಥೆಯ ಹನ್ನೆರಡನೆಯ ವಾರ್ಷಿಕ ಕಲೋತ್ಸವದ ಪೂರ್ವಭಾವಿ ಸಭೆಯು ಸಾಂತಾಕ್ರೂಜ್ ಪೂರ್ವದ ಬಿಲ್ಲವರ ಭವನ ಕಚೇರಿಯಲ್ಲಿ ಕನ್ನಡಿಗ ಕಲಾವಿದರ ಪರಿಷತ್ತಿನ ಅಧ್ಯಕ್ಷರಾದ ಡಾ| ಸುರೇಂದ್ರ ಕುಮಾರ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಜರಗಿತು.
ಮಾ. 9ರಂದು ಸಾಂತಾಕ್ರೂಜ್ ಬಿಲ್ಲವರ ಭವನದ ಸಭಾಂಗಣದಲ್ಲಿ ವಾರ್ಷಿಕ ಕಲೋತ್ಸವ ಸಂಭ್ರಮ ವನ್ನು, ಪ್ರಶಸ್ತಿ ಪುರಸ್ಕಾರ, ಸಾಧಕರಿಗೆ ಸಮ್ಮಾನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಅದ್ದೂರಿಯಿಂದ ನಡೆಸಲು ನಿರ್ಧರಿಸ
ಲಾಯಿತು. ಅಂದು ಮಧ್ಯಾಹ್ನ 2.30ಕ್ಕೆ 12ನೇ ವರ್ಷದ ಕಲೋತ್ಸವವು ಉದ್ಘಾಟನೆಗೊಂಡು ರಾತ್ರಿ 8ರಿಂದಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಹೆಗ್ಡೆ ತಿಳಿಸಿದರು.
ಈ ವರ್ಷವೂ ಕೊಡುಗೈ ದಾನಿ ಆರ್. ಕೆ. ಶೆಟ್ಟಿ ಅವರ ಸಹಕಾರದಿಂದ ಪ್ರತಿಭಾನ್ವಿತ ಕಲಾವಿದರಿಗೆ ಕಲಾಶ್ರೀ ಎನ್ನುವ ಹೆಸರಿನಲ್ಲಿ ಪ್ರಶಸ್ತಿ ನೀಡಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚಿಸಲಾಯಿತು. ಈ ಸಮಿತಿಯಲ್ಲಿ ಅಧ್ಯಕ್ಷರಾದ ಡಾ| ಸುರೇಂದ್ರ ಕುಮಾರ್ ಹೆಗ್ಡೆ, ಕಾರ್ಯದರ್ಶಿ ಬಾಬಾಪ್ರಸಾದ್ ಅರಸ, ಡಾ| ಸುನಿತಾ ಶೆಟ್ಟಿ, ಜಿ. ಟಿ. ಆಚಾರ್ಯ, ಕೆ. ಕೆ. ಶೆಟ್ಟಿ ಅವರನ್ನು ನೇಮಿಸಲಾಯಿತು ಹಾಗೂ ಅಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿಷತ್ತಿನ ಸದಸ್ಯರಿಂದ, ಸಂಗೀತ, ನೃತ್ಯ ವೈಭವ ಮತ್ತು ನಾಟಕ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಳಲಿವೆೆ.
ಮಾ. 9ರ ದಿನವನ್ನು ಮುಂಬಯಿಯ ಎÇÉಾ ಕಲಾವಿದರು ಪರಿಷತ್ತಿನ ಕಾರ್ಯಕ್ರಮಕ್ಕೆ ಮೀಸಲಿಡಬೇಕಾಗಿ ಅಧ್ಯಕ್ಷರು ವಿನಂತಿಸಿದರು. ಕೊನೆಯಲ್ಲಿ ಪರಿಷತ್ತಿನ ಗೌರವ ಪ್ರಧಾನ ಕಾರ್ಯದರ್ಶಿ ಬಾಬಾ ಪ್ರಸಾದ್ ಅರಸ ಕುತ್ಯಾರು ವಂದಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ
Fraud Case: 2 ಕೋಟಿ ರೂ.ಗೆ 3.5 ಕೋಟಿ ರೂ. ಕೊಡುವುದಾಗಿ ವಂಚನೆ
Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ
Bengaluru: ಟ್ರಕ್ ಡಿಕ್ಕಿ; ಜನ್ಮದಿನದಂದೇ ಬಾಲಕ ಸಾವು
Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.