ಕನ್ನಡಿಗ ಕಲಾವಿದರ ಪರಿಷತ್ ಮಹಾರಾಷ್ಟ್ರ:ಪೂರ್ವಭಾವಿ ಸಭೆ
Team Udayavani, Feb 18, 2018, 10:48 AM IST
ಮುಂಬಯಿ: ಕನ್ನಡಿಗ ಕಲಾವಿದರ ಪರಿಷತ್ ಮಹಾರಾಷ್ಟ್ರ ಸಂಸ್ಥೆಯ ಹನ್ನೊಂದನೆಯ ವಾರ್ಷಿಕೋತ್ಸವದ ಪೂರ್ವಭಾವಿ ಸಭೆಯು ಸಾಂತಾಕ್ರೂಜ್ ಪೂರ್ವದ ಬಿಲ್ಲವರ ಭವನದ ಕಚೇರಿಯಲ್ಲಿ ಪರಿಷತ್ತಿನ ಅಧ್ಯಕ್ಷರಾದ ಸುರೇಂದ್ರ ಕುಮಾರ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಜರಗಿತು.
ಮಾರ್ಚ್ 17ರಂದು ಸಂಸ್ಥೆಯ ವಾರ್ಷಿ ಕೋತ್ಸವ ಸಂಭ್ರಮ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಾಂತಾ ಕ್ರೂಜ್ ಪೂರ್ವದ ಬಿಲ್ಲವರ ಭವನದ ಸಭಾಂಗಣ ದಲ್ಲಿ ಪ್ರಶಸ್ತಿ ಪುರಸ್ಕಾರ, ಸಾಧಕರಿಗೆ ಸಮ್ಮಾನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಅದ್ದೂರಿಯಿಂದ ನಡೆಸಲು ನಿರ್ಧರಿಸಲಾಯಿತು. ಅಂದು ಅಪರಾಹ್ನ 2.30ರಿಂದ 11ನೇ ವರ್ಷದ ವಾರ್ಷಿಕೋತ್ಸವದ ಉದ್ಘಾಟನೆಗೊಂಡು ರಾತ್ರಿ 8 ರಿಂದ ಸಮಾರೋಪ ಸಮಾರಂಭದೊಂದಿಗೆ ಸಮಾರಂಭವು ಮುಕ್ತಾಯಗೊಳ್ಳಲಿದೆ ಎಂದು ಅಧ್ಯಕ್ಷ ಸುರೇಂದ್ರ ಕುಮಾರ್ ಹೆಗ್ಡೆ ಇವರು ತಿಳಿಸಿದರು. ಈ ವರ್ಷದಿಂದ ಕೊಡುಗೈ ದಾನಿ ಆರ್. ಕೆ. ಶೆಟ್ಟಿ ಅವರ ಸಹಕಾರದಿಂದ ಪ್ರತಿಭಾನ್ವಿತ ಕಲಾವಿದರಿಗೆ ಕಲಾಶ್ರೀ ಎನ್ನುವ ಹೆಸರಿನಲ್ಲಿ ಪ್ರಶಸ್ತಿ ನೀಡಲು ನಿರ್ಧರಿಸಿದ್ದೇವೆ. ಈ ಸಂದರ್ಭದಲ್ಲಿ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಅಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿಷತ್ತಿನ ಸದಸ್ಯರಿಂದ ತಾಳಮದ್ದಳೆ, ನೃತ್ಯ ವೈಭವ ಮತ್ತು ಏಕಾಂಕ ನಾಟಕ ಪ್ರದರ್ಶನಗೊÙÛಲಿದೆ. ಮಾರ್ಚ್ 17 ನ್ನು ಮುಂಬಯಿಯ ಎÇÉಾ ಕಲಾವಿದರು ಪರಿಷತ್ತಿನ ಕಾರ್ಯಕ್ರಮಕ್ಕೆ ಮೀಸಲಿಡಬೇಕು. ಸಂಸ್ಥೆಯ ವಾರ್ಷಿಕೋತ್ಸವ ಸಂಭ್ರಮದ ಯಶಸ್ಸಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದು ನುಡಿದರು.
ಈ ಸಂದರ್ಭ ಇತ್ತೀಚೆಗೆ ನಿಧನ ಹೊಂದಿದ ಮುಂಬಯಿಯ ಪ್ರಸಿದ್ಧ ಸ್ಯಾಕೊÕಫೋನ್‌ವಾದಕ ರಾಮದಾಸ್ ಕೋಟ್ಯಾನ್, ಚಂಡೆ- ವಾದಕ ಜಗದೀಶ್ ಶೆಟ್ಟಿ ಏಳಿಂಜೆ, ರಂಗ ನಟ ಆನಂದ್ ಶೆಟ್ಟಿ ಅಶೋಕ್ ನಗರ ಅವರ ಆತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಎಂದು ಸಭೆಯಲ್ಲಿ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನೆರೆದಿದ್ದ ಹಿರಿಯ ಸದಸ್ಯರು ಅಗಲಿದ ಕಲಾವಿದರ ಬಗ್ಗೆ ನುಡಿ ನಮನ ಸಲ್ಲಿಸಿದರು. ಕೊನೆಯಲ್ಲಿ ಪರಿಷತ್ತಿನ ಗೌರವ ಪ್ರಧಾನ ಕಾರ್ಯದರ್ಶಿ ಬಾಬಾ ಪ್ರಸಾದ್ ಅರಸ ಕುತ್ಯಾರು ವಂದಿಸಿ ದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.