ಮುಂಬಯಿಯಲ್ಲಿ ಹೊರನಾಡ ಕನ್ನಡಿಗರ ತೃತೀಯ ರಾಷ್ಟ್ರೀಯ ಸಮಾವೇಶಕ್ಕೆ ಸಿದ್ಧತೆ

Team Udayavani, Feb 21, 2021, 12:23 PM IST

Kannadiga in Mumbai

ಮುಂಬಯಿ, ಫೆ‌. 20: ಮೂರು ವರ್ಷಗಳ ಹಿಂದೆ ಅಂಧೇರಿ ಪಶ್ಚಿಮದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಮೊಗವೀರ ಭವನದಲ್ಲಿ ಎರಡು ದಿನಗಳ ಹೊರನಾಡ ಕನ್ನಡಿಗರ ದ್ವಿತೀಯ ರಾಷ್ಟ್ರೀಯ ಸಮಾವೇಶ ಯಶಸ್ವಿಯಾಗಿ ನಡೆಸಿದ ಹೆಗ್ಗಳಿಕೆ ಮುಂಬಯಿ ಕನ್ನಡಿಗರದ್ದಾಗಿದೆ. ಆದ್ದರಿಂದ 2021ರ ಮಾರ್ಚ್‌ ಅಂತ್ಯದೊಳಗೆ ತೃತೀಯ ಹೊರನಾಡ ಕನ್ನಡಿಗರ ರಾಷ್ಟ್ರೀಯ ಸಮಾವೇಶ ನಡೆಸುವಂತಿದ್ದರೆ ಕನ್ನಡ ಸಾಹಿತ್ಯ ಪರಿಷತ್ತು ಸಂಪೂರ್ಣ ಸಹಯೋಗ ನೀಡಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಅಧ್ಯಕ್ಷ ಡಾ| ಮನು ಬಳಿಗಾರ್‌ ಭರವಸೆ ನೀಡಿದರು.

ಫೆ. 19ರಂದು ಸಂಜೆ ಮಾಟುಂಗಾ ಭಾವುದಾಜಿ ರಸ್ತೆಯ ಮೈಸೂರು ಅಸೋಸಿಯೇಶನ್‌ ಸಭಾಗೃಹಕ್ಕೆ ಆಗಮಿಸಿ ಕನ್ನಡ ಸಾಹಿತ್ಯ ಪರಿಷತ್ತು ಮುಂಬಯಿ ಘಟಕದ ಸಭೆಯನ್ನುದ್ದೇಶಿಸಿ ಡಾ| ಬಳಿಗಾರ್‌ ಮಾತನಾಡಿ, ಹೊರನಾಡಿನಲ್ಲಿ ಕನ್ನಡದ ತೇರನ್ನೆಳೆದು ಭಾಷಾ ಬೆಳವಣಿಗೆಗೆ ಅನಿಯಾಗುತ್ತಿರುವ ಮುಂಬಯಿವಾಸಿ ಕನ್ನಡಿಗರ ಕನ್ನಡದ ಸೇವೆಯನ್ನು ಮನಗಂಡು ಕನ್ನಡಿಗರ ದ್ವಿತೀಯ ರಾಷ್ಟ್ರೀಯ ಸಮಾವೇಶದಲ್ಲಿ ಬೃಹನ್ಮುಂಬಯಿ ಕನ್ನಡ ಸಾಹಿತ್ಯ ಪರಿಷತ್‌ ಘಟಕ ಅಸ್ತಿತ್ವಕ್ಕೆ ತರಲಾಯಿತು.

ಈ ಘಟಕಕ್ಕೆ ಜಿಲ್ಲಾ ಮಟ್ಟದ ಮಾನ್ಯತೆ ನೀಡಿ ಚಾಲನೆಯನ್ನೀಡುವ ಭಾಗ್ಯ ನನ್ನದಾಯಿತು. ಈ ಮಾಯಾನಗರಿಯಲ್ಲಿ ಹತ್ತು ಹಲವಾರು ಕನ್ನಡ ಸಂಸ್ಥೆಗಳು ಇದ್ದು ಕನ್ನಡ ತಾಯಿ ಭುವನೇಶ್ವರಿಯ ಸೇವೆಯಲ್ಲಿ ತೊಡಗಿಸಿ ಹೊರನಾಡಿನಲ್ಲಿ ಕನ್ನಡ ಏಳ್ಗೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿರುವುದು ಅಭಿನಂದನೀಯ. ಈ ಮೂಲಕ ಕನ್ನಡ ಭಾಷೆಯು ಜಾಗತಿಕವಾಗಿ ಪಸರಿಸಿದ್ದು ಮತ್ತೆ ಅಖೀಲ ಭಾರತ ಹೊರನಾಡ ಕನ್ನಡಿಗರ ಸಮಾವೇಶವ ಆಯೋಜಿಸುವಲ್ಲಿ ಕನ್ನಡಿಗ ಸಂಘ ಸಂಸ್ಥೆಗಳು ಸಂಘಟಿತರಾಗಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಬೃಹನ್ಮುಂಬಯಿ ಘಟಕದ ಅಧ್ಯಕ್ಷ ಡಾ| ಗಣಪತಿ ಶಂಕರಲಿಂಗ ಅವರು ಪುಷ್ಪಗುಪfವನ್ನಿತ್ತು ಬಳಿಗಾರ್‌ ಅವರನ್ನು ಸ್ವಾಗತಿಸಿದರು. ಸಭೆಯಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಉಪಾಧ್ಯಕ್ಷ ಅಶೋಕ್‌ ಎಸ್‌. ಸುವರ್ಣ, ಕರ್ನಾಟಕ ಸಂಘ ಮುಂಬಯಿ ಅಧ್ಯಕ್ಷ ಮನೋಹರ್‌ ಎಂ. ಕೋರಿ, ಮಾಜಿ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಭರತ್‌ಕುಮಾರ್‌ ಪೊಲಿಪು, ಮೈಸೂರು ಅಸೋಸಿಯೇಶನ್‌ನ ಡಾ| ಬಿ. ಆರ್‌. ಮಂಜುನಾಥ್‌, ಕೆ. ಮಂಜುನಾಥಯ್ಯ, ಭವಾನಿ ಭಾರ್ಗವ್‌, ಬಿ. ಕೆ. ಮಧುಸೂದನ್‌ ಅವರು ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಬೃಹನ್ಮುಂಬಯಿ ಘಟಕದ ಕೋಶಾಧಿಕಾರಿ ಮಂಜುನಾಥ ದೇವಾಡಿಗ ವಂದಿಸಿದರು.
ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

ಹಂಚಿಕಟ್ಟೆ: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Mulki: Biker seriously injured after being hit by bus

Mulki: ಬಸ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.