ಪ್ರತಿಭಾ ಪುರಸ್ಕಾರ, ಸಮವಸ್ತ್ರ  ವಿತರಣೆ ಮತ್ತು ಯಕ್ಷಗಾನ ತಾಳಮದ್ದಳೆ

Team Udayavani, Jul 22, 2018, 12:38 PM IST

2007mum07.jpg

ಮುಂಬಯಿ: ಸಮಾಜ ಸೇವೆ ಮಾಡುವ ತುಡಿತದೊಂದಿಗೆ ಸಮಾನ ಮನಸ್ಕರಿಂದ  ಮುಲುಂಡ್‌ನ‌ಲ್ಲಿ ಹುಟ್ಟಿಕೊಂಡ ಮುಲುಂಡ್‌ ಫ್ರೆಂಡ್ಸ್‌ ಸಾಮಾಜಿಕ, ಧಾರ್ಮಿಕ, ಕ್ರೀಡೆ, ಶೈಕ್ಷಣಿಕ ಸೇವೆಗಳನ್ನು ಮಾಡುತ್ತಾ ಪ್ರಸಿದ್ಧಿಯನ್ನು ಪಡೆದಿದೆ. ಸಂಸ್ಥೆಯು ಪ್ರತೀ ವರ್ಷದಂತೆ ಈ ವರ್ಷವೂ ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಸಹಯೋಗದೊಂದಿಗೆ ಪ್ರತಿಭಾ ಪುರಸ್ಕಾರ, ಸಮವಸ್ತ್ರ ವಿತರಣೆ ಹಾಗೂ ತಾಳಮದ್ದಳೆ  ಆಯೋಜಿಸಿತ್ತು.

ಜಂಟಿ ಸಂಸ್ಥೆಗಳ ಅಧ್ಯಕ್ಷ, ನಗರದ ಸಮಾಜ ಸೇವಕ ಸುರೇಶ್‌ ಶೆಟ್ಟಿ ಯೆಯ್ನಾಡಿ ಅವರ ನೇತೃತ್ವದಲ್ಲಿ ಜು. 19ರಂದು ಅಪರಾಹ್ನದಿಂದ ಮುಲುಂಡ್‌ ಪೂರ್ವದ ಕೇಳ್ಕರ್‌ ಕಾಲೇಜಿನ ಸಮೀಪವಿರುವ ಮರಾಠ ಮಂಡಳ ಹಾಲ್‌ನಲ್ಲಿ ಸಮಾರಂಭವು ಜರಗಿದ್ದು, ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿ  ಮುಲುಂಡ್‌ ವಿಪಿಎಂ ಕನ್ನಡ ಶಾಲೆಯ 2017-2018 ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಪ್ರಾಥಮಿಕ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಸಾಧಕರನ್ನು ಸಮ್ಮಾನಿಸಿದರು.

ಸಮಾರಂಭದ ವೇದಿಕೆಯಲ್ಲಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭ ದಲ್ಲಿ ಅತಿಥಿಗಳಾಗಿ ಯಕ್ಷಮಾನಸದ ಅಧ್ಯಕ್ಷ ಶೇಖರ್‌ ಆರ್‌. ಶೆಟ್ಟಿ,  ನವಿಮುಂಬಯಿ ಹೊಟೇಲ್‌ ಉದ್ಯಮಿ ಜಯಪ್ರಕಾಶ್‌ ಶೆಟ್ಟಿ, ಸೌತ್‌ ಸೇವಾ ಸಂಘ ಕಲೀನಾ ಅಧ್ಯಕ್ಷ ವಿಜಯ ಶೆಟ್ಟಿ, ತೌಳವಶ್ರೀ ಪ್ರಶಸ್ತಿ ವಿಜೇತ ಚಿತ್ರನಟ ಸೌರಭ್‌ ಸುರೇಶ್‌ ಭಂಡಾರಿ, ಮುಲುಂಡ್‌ನ‌ ಉದ್ಯಮಿ ಅಶೋಕ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಉಡುಪಿ ಜಿಲ್ಲೆಯ ಖ್ಯಾತ ಸಮಾಜ ಸೇವಕ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಿಶುಕುಮಾರ್‌ ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಿ ಗೌರವಿಸಲಾಯಿತು.  ಮುಲುಂಡ್‌ ಫ್ರೆಂಡ್ಸ್‌ ಇದರ ಗೌರವ ಪ್ರಧಾನ ಕಾರ್ಯದರ್ಶಿ ಸುಂದರ್‌ ಶೆಟ್ಟಿ ವಾಮದಪದವು, ಗೌರವ ಕೋಶಾಧಿಕಾರಿ ವೇಣುಗೋಪಾಲ್‌ ಶೆಟ್ಟಿ ಇರಾ, ಜತೆ ಕಾರ್ಯದರ್ಶಿ ಏಳಿಂಜೆ ಯುವರಾಜ್‌ ಶೆಟ್ಟಿ, ಜತೆ ಕೋಶಾಧಿಕಾರಿ ನವೀನ್‌ ಹೆಗ್ಡೆ, ಸಲಹೆಗಾರ ಸುಭಾಶ್‌ ಆಳ್ವ ಮೊದಲಾದವರು ಉಪಸ್ಥಿತರಿದ್ದು, ಸಹಕರಿಸಿದರು. ರಂಗಕಲಾವಿದ ಬಾಬಾ ಪ್ರಸಾದ್‌ ಅರಸ ಅವರು  ಕಾರ್ಯಕ್ರಮ ನಿರ್ವಹಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಜೆಕಾರು ಬಾಲಕೃಷ್ಣ ಶೆಟ್ಟಿ ಇವರ ನೇತೃತ್ವದಲ್ಲಿ, ಅಜೆಕಾರು ಕಲಾಭಿಮಾನಿ ಬಳಗದ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಗರುಡ ಗರ್ವಭಂಗ ತಾಳಮದ್ದಳೆ ನಡೆಯಿತು. ತಾಳಮದ್ದಳೆಯ  ಹಿಮ್ಮೇಳದಲ್ಲಿ ಭಾಗವತರಾಗಿ ಕು| ಕಾವ್ಯಶ್ರೀ ಅಜೇರು, ಚೆಂಡೆಯಲ್ಲಿ ಪ್ರಶಾಂತ್‌ ಶೆಟ್ಟಿ ವಗೆನಾಡು, ಮದ್ದಳೆಯಲ್ಲಿ ಶ್ರೀಪತಿ ನಾಯಕ್‌ ಅಜೇರು, ಅರ್ಥದಾರಿಗಳಾಗಿ ಜಯಪ್ರಕಾಶ್‌ ಶೆಟ್ಟಿ ಪೆರ್ಮುದೆ, ದಿನೇಶ್‌ ಶೆಟ್ಟಿ ಕಾವಳಕಟ್ಟೆ, ಹರೀಶ್‌ ಭಟ್‌ ಬಳಂತಿಮೊಗರು, ಶ್ಯಾಮ್‌ ಭಟ್‌ ಪಕಳಕುಂಜ, ಅವಿನಾಶ್‌ ಶೆಟ್ಟಿ ಉಬರಡ್ಕ ಇವರು ಪಾಲ್ಗೊಂಡಿದ್ದರು. ತುಳು-ಕನ್ನಡಿಗರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.