ಇಂಗ್ಲಿಷ್‌ ವ್ಯಾಮೋಹ ಭಾಷೆಯ ಅಳಿವಿಗೆ ಪ್ರಮುಖ ಕಾರಣ: ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ

Team Udayavani, Nov 30, 2021, 1:12 PM IST

ಇಂಗ್ಲಿಷ್‌ ವ್ಯಾಮೋಹ ಭಾಷೆಯ ಅಳಿವಿಗೆ ಪ್ರಮುಖ ಕಾರಣ: ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ

ಮುಂಬಯಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಂಬಂಧ ಸಾಂಸ್ಕೃತಿಕವಾಗಿ ಗಟ್ಟಿಯಾಗಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಆದರೆ ರಾಜಕೀಯ ನಾಯಕರು ಚುನಾವಣೆ ಸಮಯದಲ್ಲಿ  ಇಂತಹ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಮುಂಬಯಿ ಯಂತಹ ಮಹಾನಗರದಲ್ಲಿ  ಕನ್ನಡಪರ ಸಂಘಟನೆಗಳು ಸಕ್ರಿಯವಾಗಿ ಕಾರ್ಯ ಚಟುವಟಿಕೆಗಳನ್ನು ಮಾಡುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಇಂದಿನ ಶಿಕ್ಷಣ ದಲ್ಲಿ ನಾವು ಇಂಗ್ಲಿಷ್‌ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ಭಾಷೆಯ ಅಳಿವಿಗೆ ಪ್ರಮುಖ ಕಾರಣವಾಗಿದೆ. ಇದು ಮುಂಬಯಿಗೆ ಮಾತ್ರ ಸೀಮಿತ ವಾಗಿರದೆ ಕರ್ನಾಟಕದಲ್ಲೂ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಾಗಿರುವುದು ವಿಷಾಧನೀಯ ಎಂದು ನಗರದ ಖ್ಯಾತ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ ತಿಳಿಸಿದರು.

ನವಿಮುಂಬಯಿ ಕನ್ನಡ ಸಂಘದ ಎಂ. ಬಿ. ಕುಕ್ಯಾನ್‌ ಸಭಾಗೃಹದಲ್ಲಿ  ನ.28 ರಂದು ನಡೆದ ನವಿಮುಂಬಯಿ ಕನ್ನಡ ಸಂಘದ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿ  ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಸಾಹಿತ್ಯ ಕ್ಷೇತ್ರ ಸಹಿತ ಇತರ ಯಾವುದೇ ಕ್ಷೇತ್ರಗಳಲ್ಲಿ ಮುಂಬಯಿ ಮಹಾನಗರದಲ್ಲಿ ಕನ್ನಡಿ ಗರು ಸಕ್ರಿಯರಾಗಿದ್ದಾರೆ. ಇಂಥವರ ಕಾರ್ಯವನ್ನು ಗುರುತಿಸಿ ಈ ಬಾರಿ ಕರ್ನಾಟಕ ಸರಕಾರವು ಮುಂಬಯಿ ಮಹಾನಗರದ ಮೂವರು ಕನ್ನಡಿಗರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ನಿಜ ವಾಗಿ ಅಭಿನಂದನೆಯವಾಗಿದೆ. ಇದು ಮುಂಬ ಯಿಯ ಸಮಸ್ತ ಕನ್ನಡಿಗರಿಗೆ ದೊರೆತ ಗೌರವವಾಗಿದೆ ಎಂದು ತಿಳಿಸಿದರು.

ಇನ್ನೋರ್ವ ಅತಿಥಿ, ಉದ್ಯಮಿ ಸಮಾಜ ಸೇವಕ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ  ಮಾತನಾಡಿ, ಮುಂಬಯಿಯಲ್ಲಿ ಕನ್ನಡಪರ ಚಟುವಟಿಕೆಗಳು ಅತೀ

ಹೆಚ್ಚು ನಡೆಯುತ್ತಿವೆ. ಇಲ್ಲಿಯ ಕನ್ನಡಪರ ಸಂಘಟನೆಗಳು ಸದಾ ಕ್ರಿಯಾಶೀಲ ವಾಗಿರುತ್ತವೆ. ಸಾಹಿತಿಗಳು, ಲೇಖಕರು ಮಹಾನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸದಾ ಬರವಣಿಗೆಯಲ್ಲಿ ನಿರತರಾಗಿದ್ದಾರೆ. ಇಲ್ಲಿ ಪುಸ್ತಕಗಳ ಪ್ರಕಟನೆಗಳು ನಿರಂತರ ನಡೆಯುತ್ತಿವೆ. ಇದೀಗ ಮುಂಬಯಿ ಕನ್ನಡಿಗರನ್ನು ಹಾಗೂ ಸಂಘ-ಸಂಸ್ಥೆಗಳನ್ನು ಕರ್ನಾಟಕ ಸರಕಾರ ಗುರುತಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

ಈ ಸಂದರ್ಭ ವಿಶೇಷ ಆಮಂತ್ರಿತರಾಗಿದ್ದ ಕನ್ನಡಪರ ಲೇಖಕಿಯರಾದ ಡಾ| ಜೆ. ಪಿ. ಕುಸುಮಾ, ನಳಿನಾ ಪ್ರಸಾದ್‌, ಕಲಾ ಭಾಗÌತ್‌ ಅವರನ್ನು ಗಣ್ಯರು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸಮ್ಮಾನಿತರು ಕನ್ನಡದ ಸಾಹಿತ್ಯ, ಸಂಸ್ಕೃತಿ, ಮುಂಬಯಿ ಮಹಾನಗರದಲ್ಲಿ ಕನ್ನಡ ಪರ ಕಾರ್ಯಚಟುವಟಿಕೆಗಳು, ಮುಂ ಬಯಿ ವಿಶ್ವವಿದ್ಯಾನಿಲಯದಲ್ಲಿ ಕನ್ನಡ  ವಿಭಾಗವು ನಡೆಸುತ್ತಿರುವ ಕನ್ನಡದ  ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ  ಉಪನ್ಯಾಸ ನೀಡಿದರು.

ನವಿಮುಂಬಯಿ ಕನ್ನಡ ಸಂಘದ ಅಧ್ಯಕ್ಷ ಗೋಪಾಲ ವೈ. ಶೆಟ್ಟಿ  ಅಧ್ಯಕ್ಷತೆಯಲ್ಲಿ  ನಡೆದ ಸಮಾರಂಭದಲ್ಲಿ ಸಂಘದ ಗೌರವಾಧ್ಯಕ್ಷ ಬಿ. ಎಚ್‌. ಕಟ್ಟಿ ಅವರು ಸಂಘದ ಬಗ್ಗೆ ಹಾಗೂ ಸಂಘ ನಡೆದು ಬಂದ ದಾರಿ ಬಗ್ಗೆ ವಿವರಿಸಿದರು.

ನಾಡಗೀತೆಯೊಂದಿಗೆ ಕಾರ್ಯಕ್ರಮವನ್ನು  ಉದ್ಘಾಟಿಸಲಾಯಿತು. ನವಿಮುಂಬಯಿ ಕನ್ನಡ ಸಂಘದ ಸದಸ್ಯರಿಂದ ಹಾಗೂ ಮಕ್ಕಳಿಂದ ವಿವಿಧ ಮನೋರಂಜನ ಕಾರ್ಯಕ್ರಮಗಳು ಜರಗಿದವು. ಇತ್ತೀಚೆಗೆ ನಿಧನ ಹೊಂದಿದ ನಟ, ಸಮಾಜ ಸೇವಕ ಪುನೀತ್‌ ರಾಜಕುಮಾರ್‌ ಅವರ ಸಂಸ್ಮರಣೆ ನಡೆಯಿತು. ಕಿರು ಹಾಸ್ಯ ನಾಟಕ, ರಂಗ ನಿರ್ದೇಶಕ ಸಾದಯಾ ಅವರ ನಿರ್ದೇಶನದಲ್ಲಿ ಅಂಬಿಕಾತನಯದತ್ತ ಒಂದು ರೂಪಕ ಪ್ರದರ್ಶನಗೊಂಡಿತು.

ಲೈಬ್ರೆರಿ ವ್ಯವಸ್ಥಾಪಕರಾದ ವೈ. ವೈ. ಕೆಂಭಾವಿ, ಜಯರಾಮ್‌ ಶೆಟ್ಟಿ ಹಾಗೂ ಜ್ಯೋತಿ ಪ್ರಸಾದ್‌ ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪರಿಸರದ ತುಳು-ಕನ್ನಡಿಗರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಾಂಸ್ಕೃತಿಕ ಸಮಿತಿಯ ಸಂಯೋ ಜಕ ರಘು ಮೂಲ್ಯ ಅತಿಥಿಗಳನ್ನು ಪರಿಚಯಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಜಗದೀಶ್‌ ಡಿ. ರೈ ಸ್ವಾಗತಿಸಿದರು. ಪ್ರತಿಭಾ ಅವರು ವಿಶೇಷ ಆಮಂತ್ರಿ ತರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ  ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರ ಮವನ್ನು ಉಪಾಧ್ಯಕ್ಷ ಮಧುಸೂದನ್‌ ಟಿ. ರಾವ್‌ನಿರ್ವಹಿಸಿದರು.

ಶ್ರೀಮಂತ ಇತಿಹಾಸ ಹೊಂದಿರುವ ನಾಡು ನಮ್ಮದು. ಕನ್ನಡದ ಸಂಸ್ಕೃತಿ, ಸಾಹಿತ್ಯಗಳು ಎಂದೆಂದಿಗೂ ಮಹತ್ವವನ್ನು ಪಡೆಯುತ್ತವೆ. ಕನ್ನಡ ಭಾಷೆಯನ್ನು ಉಳಿಸಿ-ಬೆಳೆಸುವುದಕ್ಕಾಗಿ ನವಿಮುಂಬಯಿ ಕನ್ನಡ ಸಂಘವು ಸದಾ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ನಾಡು-ನುಡಿಯ ಅಭಿವೃದ್ಧಿಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದೆ. ಇನ್ನು ಮುಂದೆಯೂ ನಾವು ಕನ್ನಡದ ಸೇವೆಗಾಗಿ ಸದಾ ಕೆಲಸ ಮಾಡುತ್ತೇವೆ. ಇನ್ನು ಮುಂದೆಯೂ ಎಲ್ಲರ ಸಂಪೂರ್ಣ ಸಹಕಾರದಿಂದ ಮಹಾರಾಷ್ಟ್ರದ ಮಣ್ಣಿನಲ್ಲಿ ನಾವು ಒಂದಾಗಿ ಕನ್ನಡದ ಸೇವೆ ಮಾಡೋಣ.-ಗೋಪಾಲ್‌ ವೈ. ಶೆಟ್ಟಿ ಅಧ್ಯಕ್ಷರು, ನವಿಮುಂಬಯಿ ಕನ್ನಡ ಸಂಘ ವಾಶಿ

-ಚಿತ್ರ-ವರದಿ: ಸುಭಾಷ್‌ ಶಿರಿಯ

ಟಾಪ್ ನ್ಯೂಸ್

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.