ಕಾರ್ಯಾಧ್ಯಕ್ಷರಾಗಿ ಸುಕುಮಾರ್‌ ಎನ್‌.ಶೆಟ್ಟಿ

Team Udayavani, Sep 26, 2017, 4:08 PM IST

2555.jpg

ಮುಂಬಯಿ: ಕರ್ನಾಟಕ ಸಂಘ ಡೊಂಬಿವಲಿ ಇದರ ನೂತನ ಕಾರ್ಯಾಧ್ಯಕ್ಷರಾಗಿ ಸುಕುಮಾರ್‌ ಎನ್‌. ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.  ಇತ್ತೀಚೆಗೆ ಸಂಸ್ಥೆಯ ಸಂಚಾಲಕತ್ವದ ಮಂಜುನಾಥ ವಿದ್ಯಾಲಯದ ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ವಿಠಲ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ 50 ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾಗಿ ಡಾ| ದಿಲೀಪ್‌ ಕೋಪರ್ಡೆ ಮತ್ತು 17 ಮಂದಿ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದರು. ಆನಂತರ ದಿವಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಗೆ ಕಾರ್ಯಾಧ್ಯಕ್ಷರಾಗಿ ಸುಕುಮಾರ್‌ ಎನ್‌. ಶೆಟ್ಟಿ, ಉಪ ಕಾರ್ಯಾಧ್ಯಕ್ಷರಾಗಿ ಡಾ| ವಿಜಯ ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ದೇವದಾಸ ಎಲ್‌. ಕುಲಾಲ್‌, ಜತೆ ಕಾರ್ಯದರ್ಶಿಯಾಗಿ ಪ್ರೊ| ರಮೇಶ್‌ ಕಾಖಂಡಕಿ, ಗೌರವ ಕೋಶಾಧಿಕಾರಿಯಾಗಿ ಲೋಕನಾಥ ಎ. ಶೆಟ್ಟಿ, ಜತೆ ಕೋಶಾಧಿಕಾರಿಯಾಗಿ ಚಿತ್ತರಂಜನ್‌ ಎಂ. ಆಳ್ವ ಅವರು ಆಯ್ಕೆಯಾದರು.

ನೂತನ ಕಾರ್ಯಕಾರಿ ಸಮಿತಿಗೆ ಗಣೇಶ್‌ ವಿ. ಶೆಟ್ಟಿ, ರಾಜೀವ ಎಂ. ಭಂಡಾರಿ, ಪ್ರಭಾಕರ ಆರ್‌. ಶೆಟ್ಟಿ, ಜಗನ್ನಾಥ ವಿ. ಶೆಟ್ಟಿ, ರಮೇಶ್‌ ಎ. ಶೆಟ್ಟಿ, ವಸಂತ ಎನ್‌. ಸುವರ್ಣ, ಶಿವಲಿಂಗಪ್ಪ ಎನ್‌. ಸೋಮ, ಸತೀಶ್‌ ವಿ. ಆಲಗೂರು, ರಾಮಣ್ಣ ಎಂ. ಭಂಡಾರಿ, ತಾರನಾಥ ಎಸ್‌. ಅಮೀನ್‌, ಸನತ್‌ ಕುಮಾರ್‌ ಜೈನ್‌ ಅವರನ್ನು ನೇಮಿಸಲಾಯಿತು.

ದಿವಾಕರ ಶೆಟ್ಟಿ ಇಂದ್ರಾಳಿ
ಕರ್ನಾಟಕ ಸಂಘದ ಉಪ ಕಾರ್ಯಾಧ್ಯಕ್ಷರಾಗಿ, ನಿಕಟಪೂರ್ವ ಕಾರ್ಯಾಧ್ಯಕ್ಷರಾಗಿ, ಮಂಜುನಾಥ ವಿದ್ಯಾಲಯದ ಸಮನ್ವಯಕ ಸಮಿತಿಯ ಕಾರ್ಯಾಧ್ಯಕ್ಷರಾಗಿ, ಮಂಜುನಾಥ ಕಾಲೇಜ್‌ ಗವರ್ನಿಂಗ್‌ ಬಾಡಿಯ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಸಂಘ ಮತ್ತು ಸಂಘದ ಸಂಚಾಲಕತ್ವದ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಂಟರ ಸಂಘದ ಕೇಂದ್ರ ವಲಯದ ಸಮನ್ವಯ ಸಮಿತಿಯ ಕಾರ್ಯಾಧ್ಯಕ್ಷರಾಗಿರುವ ಇವರು ಡೊಂಬಿವಲಿ ಪರಿಸರದ ಹತ್ತಾರು ಸಂಘ-ಸಂಸ್ಥೆಗಳ ನಿಕಟ ಸಂಪರ್ಕ ಹೊಂದಿದ್ದು, ಸಲಹೆಗಾರರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಸುಕುಮಾರ್‌ ಎನ್‌. ಶೆಟ್ಟಿ
ಕರ್ನಾಟಕ ಸಂಘದಲ್ಲಿ ಮೂರು ವರ್ಷ ಗೌರವ ಕೋಶಾಧಿಕಾರಿಯಾಗಿ, 6 ವರ್ಷ ಗೌರವ ಪ್ರಧಾನ ಕಾರ್ಯದರ್ಶಿಯಾಗಿ, ಮೂರು ವರ್ಷ ಉಪ ಕಾರ್ಯಾಧ್ಯಕ್ಷರಾಗಿ, ಮಂಜುನಾಥ ಕಾಲೇಜಿನ ಗವರ್ನಿಂಗ್‌ ಬಾಡಿಯ ಕಾರ್ಯದರ್ಶಿಯ ಬಳಿಕ ಕಾರ್ಯಾಧ್ಯಕ್ಷರಾಗಿ, ಪ್ರಸ್ತುತ ಕರ್ನಾಟಕ ಸಂಘಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾಗಿ ಗೆಲುವಿನ ರೂವಾರಿಯಾಗಿದ್ದಾರೆ. ಬಂಟರ ಸಂಘ ಪ್ರಾದೇಶಿಕ ಸಮಿತಿ ಡೊಂಬಿವಲಿ ಇದರ ಉಪ ಕಾರ್ಯಾಧ್ಯಕ್ಷರಾಗಿ ಕಾರ್ಯದಕ್ಷತೆ ಮೆರೆದಿದ್ದಾರೆ.

ಡಾ| ದಿಲೀಪ್‌ ಕೋಪರ್ಡೆ
ಡೊಂಬಿವಲಿ ಪರಿಸರದಲ್ಲಿ ಖ್ಯಾತ ಎಲುಬು ತಜ್ಞ ವೈದ್ಯರಲ್ಲಿ ಓರ್ವರಾದ ಡಾ| ದಿಲೀಪ್‌ ಕೋಪರ್ಡೆ ಇವರು ಕರ್ನಾಟಕ ಸಂಘದಲ್ಲಿ ನಿರಂತರ 3 ವರ್ಷ ಉಪಾಧ್ಯಕ್ಷರಾಗಿದ್ದು, ಇದೀಗ ಉಪಾಧ್ಯಕ್ಷರಾಗಿ ಮರು ನೇಮಕಗೊಂಡಿದ್ದಾರೆ.

ಡಾ| ವಿ. ಎಂ. ಶೆಟ್ಟಿ
ಖ್ಯಾತ ಎಲುಬು ತಜ್ಞರಾದ ಇವರು, ಕರ್ನಾಟಕ ಸಂಘದ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದು, ಇದೀಗ ಸಂಘದ ಉಪಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಇಬ್ಬರ ವೈದ್ಯರ ಮೇಲುಸ್ತುವಾರಿಯಲ್ಲಿ ಉಚಿತ ವೈದ್ಯಕೀಯ ಸೇವೆಯನ್ನು ಆಯೋಜಿಸಲಾಗುವುದು.

ದೇವದಾಸ್‌ ಕುಲಾಲ್‌
ಸಂಘದಲ್ಲಿ ಮೂರು ವರ್ಷಗಳ ಕಾಲ ಜತೆ ಕಾರ್ಯದರ್ಶಿಯಾಗಿದ್ದು, ಬಳಿಕ ಮೂರು ವರ್ಷ ಕಾರ್ಯದರ್ಶಿಯಾಗಿದ್ದು, ಇದೀಗ ಮತ್ತೂಮ್ಮೆ ಗೌರವ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕುಲಾಲ ಸಂಘದ ಸಕ್ರಿಯ ಉಪಾಧ್ಯಕ್ಷರಾಗಿದ್ದು, ಜ್ಯೋತಿ ಕ್ರೆಡಿಟ್‌ ಸೊಸೈಟಿಯ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಲೋಕನಾಥ ಶೆಟ್ಟಿ
ಕರ್ನಾಟಕ ಸಂಘದ ಹಿರಿಯ ಸದಸ್ಯ ರಾದ ಇವರು 3 ವರ್ಷ ಲಲಿತಕಲಾ ವಿಭಾಗದ ಕಾರ್ಯಾಧ್ಯಕ್ಷರಾಗಿದ್ದು, ಬಳಿಕ ಮೂರು ವರ್ಷ ಸಂಘದ ಜೊತೆ ಕೋಶಾಧಿಕಾರಿಯಾಗಿದ್ದು, ಇದೀಗ ಗೌರವ ಕೋಶಾಧಿಕಾರಿಯಾಗಿ ಆಯ್ಕೆ ಯಾಗಿದ್ದಾರೆ. ಅಲ್ಲದೆ ಡೊಂಬಿವಲಿ ಹೊಟೇಲ್‌ ಓನರ್ ಅಸೋಸಿಯೇಶನ್‌ ಇದರ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.