ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ‌: ಸಮ್ಮಾನ

Team Udayavani, Jan 25, 2019, 5:21 PM IST

2301mum27.jpg

ಪುಣೆ: ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಮಕರ ಸಂಕ್ರಮಣ ಆಚರಣೆಯು ದೇವಸ್ಥಾನದ ಪ್ರದಾನ ಅರ್ಚಕ ವೇದಮೂರ್ತಿ ಹರೀಶ್‌ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬಹಳ ಅದ್ದೂರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಕಾತ್ರಜ್‌ ಶ್ರೀ ಅಯ್ಯಪ್ಪ ಸೇವಾ ಸಂಘದ ವಿಶ್ವಸ್ತ ಮಂಡಳಿ, ಕಾರ್ಯಕಾರಿ ಸಮಿತಿ ಮತ್ತು ಮಹಿಳಾ ಸಮಿತಿಗಳ ವತಿಯಿಂದ ಪುಣೆಯ ವಿವಿಧ ಸಂಘ ಸಂಸ್ಥೆಗಳ ನೂತನವಾಗಿ ಆಯ್ಕೆಯಾದ ಅಧ್ಯಕ್ಷರುಗಳಿಗೆ ಶಾಲುಹಾಕಿ ಪುಷ್ಪಗುಚ್ಛ ನೀಡಿ ಗೌರವ ಸಲ್ಲಿಸಲಾಯಿತು.

ವಿಶ್ವಸ್ತ ಮಂಡಳಿಯ ಅಧ್ಯಕ್ಷ ಸುಭಾಷ್‌ ಶೆಟ್ಟಿಯವರು ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ನೂತನ ಕಾರ್ಯಾಧ್ಯಕ್ಷ ರವಿ ಶೆಟ್ಟಿ, ಪುಣೆ ಬಿಲ್ಲವ ಸಂಘದ ನೂತನ ಅಧ್ಯಕ್ಷ ವಿಶ್ವನಾಥ್‌ ಪೂಜಾರಿ ಕಡ್ತಲ ಅವರನ್ನು ಗೌರವಿಸಿದರು. ಹಾಗೆಯೇ ಮಹಿಳಾ ಮಂಡಲದ ಅಧ್ಯಕ್ಷೆಯಾದ ವಿನೋದಾ ಶೆಟ್ಟಿ ಅವರು ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಸುಲತಾ ಶೆಟ್ಟಿ, ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಮಹಿಳಾ ಕಾರ್ಯಾಧ್ಯಕ್ಷೆ ಅಂಬಿಕಾ ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆ ಪ್ರಮಿಳಾ ಶೆಟ್ಟಿ ಅವರನ್ನು ಗೌರವಿಸಿದರು.

ಇದೇ ಸಂದರ್ಭದಲ್ಲಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ಗೌರವ ಕಾರ್ಯದರ್ಶಿ ರಘುರಾಮ ರೈ, ಕೋಶಾಧಿಕಾರಿ ಜಗದೀಶ್‌ ಶೆಟ್ಟಿ, ಉಪಾಧ್ಯಕ್ಷ ಸುಧಾಕರ ಶೆಟ್ಟಿ, ಮಾಜಿ ಅಧ್ಯಕ್ಷ ಶೇಖರ ಪೂಜಾರಿ ಮತ್ತು ಸರ್ವ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ ಹೆಗ್ಡೆ ಮಟ್ಟಾರು ಮತ್ತು ಪದಾಧಿಕಾರಿಗಳು ಮಹಿಳಾ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪುಷ್ಪರಾಜ್‌ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಚಿತ್ರ-ವರದಿ : ಹರೀಶ್‌ಮೂಡಬಿದ್ರಿ

ಟಾಪ್ ನ್ಯೂಸ್

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1

Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.