ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ: ಅರಸಿನ ಕುಂಕುಮ
Team Udayavani, Jan 18, 2018, 4:54 PM IST
ಪುಣೆ: ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜ.14 ರಂದು ಮಕರ ಸಂಕ್ರಮಣ ಆಚರಣೆಯು ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಹರೀಶ್ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಈ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಶ್ರೀ ಅಯ್ಯಪ್ಪ ಸ್ವಾಮಿ ಮಹಿಳಾ ಸಮಿತಿ ಸದಸ್ಯೆ ಯರು ನಡೆಸಿಕೊಂಡು ಬಂದಿರುವ ಅರಸಿನ ಕುಂಕುಮ ಕಾರ್ಯಕ್ರಮವು ಜರಗಿತು. ಮೊದಲಿಗೆ ಕಾತ್ರಜ್ ಶ್ರೀ ಅಯ್ಯಪ್ಪ ಸೇವಾ ಸಮಿತಿ ಮಹಿಳಾ ವಿಭಾಗದ ಅಧ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಅತಿಥಿ-ಗಣ್ಯರು ದೀಪ ಬೆಳಗಿಸಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅದ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಪದಾಧಿಕಾರಿಗಳು, ಸಮಿತಿ ಸದಸ್ಯರ ಮುಂದಾಳತ್ವದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭಹಾರೈಸಿಕೊಂಡರು.
ಪುಣೆಯ ವಿವಿದ ಸಂಘ ಸಂಸ್ಥೆಗಳ ಮಹಿಳಾ ವಿಭಾಗದ ಅಧ್ಯಕ್ಷೆಯರು ಮತ್ತು ಪದಾಧಿ ಕಾರಿಗಳು, ಸದಸ್ಯರು ಮತ್ತು ತುಳು ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವರ್ಷಂಪ್ರತಿ ಮಕರ ಸಂಕ್ರಮಣದಂದು ಶ್ರೀ ಅಯ್ಯಪ್ಪ ವಿಶ್ವಸ್ತ ಮಂಡಳಿ, ಕಾರ್ಯಕಾರಿ ಸಮಿತಿ ಮತ್ತು ಮಹಿಳಾ ಸಮಿತಿಗಳ ಜಂಟಿ ಆಶ್ರಯದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿದಿಯಲ್ಲಿ ಜರಗುವ ಈ ಮಕರ ಸಂಕ್ರಮಣ ಆಚರಣೆ, ಭಜನೆ ಮತ್ತು ಅರಸಿನ ಕುಂಕುಮ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ತುಳು ಕನ್ನಡಿಗರಲ್ಲದೆ ಇತರೆ ಭಾಷಿಕರು ಕೂಡ ಪಾಲ್ಗೊಳ್ಳುತ್ತಿರುವುದು ವಿಶೇಷತೆಯಾಗಿದೆ.
ಚಿತ್ರ-ವರದಿ: ಹರೀಶ್ ಮೂಡಬಿದ್ರಿ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.